ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಹೊನ್ನಾವರ : ಗೇರುಸೊಪ್ಪ ಬಳಿ ಕಾರು ಅಪಘಾತ ಇಬ್ಬರು ಸಜೀವ ದಹನ

ಉತ್ತರ ಕನ್ನಡ ಜಿಲ್ಲೆಯ ಹೊನ್ನಾವರ ತಾಲೂಕಿನ ಗೇರುಸೊಪ್ಪ–ಸುಳೆಮುರ್ಕಿ ಕ್ರಾಸ್ ಹತ್ತಿರ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಕಾರು ಪಲ್ಟಿಯಾಗಿ ಬೆಂಕಿಗೆ ಆಹುತಿಯಾದ ಪರಿಣಾಮ ಕಾರಿನಲ್ಲಿದ್ದ ಇಬ್ಬರು ಸಜೀವ ದಹನಗೊಂಡಿದ್ದಾರೆ.
ನಿನ್ನೆ ತಡರಾತ್ರಿ ಘಟನೆ ನಡೆದಿರುವ ಸಾಧ್ಯತೆ ಇದ್ದು, ವೇಗವಾಗಿ ಸಾಗುತ್ತಿದ್ದ ಕಾರು ನಿಯಂತ್ರಣ ತಪ್ಪಿ ಮೊದಲು ಮರಕ್ಕೆ ಡಿಕ್ಕಿ ಹೊಡೆದು ಬಳಿಕ ಕಂದಕಕ್ಕೆ ಉರುಳಿರುವ ಅನುಮಾನ ವ್ಯಕ್ತವಾಗಿದೆ.
ಅಪಘಾತದ ತಕ್ಷಣವೇ ಕಾರಿಗೆ ಬೆಂಕಿ ಹೊತ್ತಿಕೊಂಡಿದ್ದು, ಕ್ಷಣಾರ್ಧದಲ್ಲಿ ಕಾರು ಸಂಪೂರ್ಣವಾಗಿ ಹೊತ್ತಿ ಉರಿದಿದೆ.
ಕಾರಿನಲ್ಲಿದ್ದ ಇಬ್ಬರು ಪ್ರಯಾಣಿಕರು ಹೊರ ಬರಲು ಸಾಧ್ಯವಾಗದೆ ಬೆಂಕಿಯಲ್ಲಿ ಸಿಲುಕಿಕೊಂಡಿದ್ದು, ಇಬ್ಬರೂ ಸ್ಥಳದಲ್ಲೇ ಸಜೀವ ದಹನಗೊಂಡಿದ್ದಾರೆ. ಬೆಂಕಿಯ ತೀವ್ರತೆಗೆ ಕಾರು ಹಾಗೂ ಮೃತರ ಗುರುತು ಪತ್ತೆಯಾಗದಷ್ಟು ಸುಟ್ಟು ಕರಕಲಾಗಿದೆ.

ಕಾರಿನ ನಂಬರ್ ಪ್ಲೇಟ್ ಸಹ ಸಂಪೂರ್ಣವಾಗಿ ಸುಟ್ಟು ಹೋಗಿರುವುದರಿಂದ, ವಾಹನದ ಮಾಲೀಕತ್ವ ಹಾಗೂ ಮೃತರ ಗುರುತು ಪತ್ತೆ ಮಾಡುವುದು ಪೊಲೀಸರಿಗೆ ಸವಾಲಾಗಿ ಪರಿಣಮಿಸಿದೆ.
ಘಟನಾ ಸ್ಥಳಕ್ಕೆ ಹೊನ್ನಾವರ ಪೊಲೀಸರು ಹಾಗೂ ಅಗ್ನಿಶಾಮಕ ದಳದ ಸಿಬ್ಬಂದಿಗಳು ಧಾವಿಸಿ ಬೆಂಕಿ ನಂದಿಸುವ ಕಾರ್ಯಾಚರಣೆ ನಡೆಸಿದ್ದಾರೆ. ಪ್ರಸ್ತುತ ಕಾರು ಮತ್ತು ಮೃತರ ಗುರುತು ಪತ್ತೆಗಾಗಿ ಪೊಲೀಸರು ವಿಶೇಷ ತನಿಖೆ ಕೈಗೊಂಡಿದ್ದಾರೆ.

ಹೊನ್ನಾವರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದ್ದು, ಅಪಘಾತದ ನಿಖರ ಕಾರಣ ಹಾಗೂ ಮೃತರ ವಿವರ ಪತ್ತೆ ಹಚ್ಚುವ ಕೆಲಸ ಮುಂದುವರಿದಿದೆ.

ವರದಿ ವಿನಾಯಕ ಆಚಾರಿ

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ

error: Content is protected !!