ಕಂಪ್ಲಿ: ಕರ್ನಾಟಕ ಪ್ರದೇಶ ಯುವ ಕಾಂಗ್ರೆಸ್ನ ಸಾಮಾಜಿಕ ಜಾಲತಾಣದ ರಾಜ್ಯ ಸಂಯೋಜಕರನ್ನಾಗಿ ಕಂಪ್ಲಿಯ ಆರ್. ಪಿ. ಶಶಿಕುಮಾರ್ ಇವರು ನೇಮಕಗೊಂಡಿದ್ದಾರೆ.
ಕಂಪ್ಲಿ ತಾಲೂಕಿನಲ್ಲಿ ಕಾಂಗ್ರೆಸ್ ಪಕ್ಷಕ್ಕಾಗಿ ಶಿಸ್ತಿನ ಸಿಪಾಯಿಯಂತೆ ಶ್ರಮಿಸುತ್ತಿರುವ ಇವರ ಕಾರ್ಯವೈಕರಿಯನ್ನು ಆಧರಿಸಿ, ಕೆಪಿವೈಸಿಸಿ ಸಾಮಾಜಿಕ ಜಾಲತಾಣದ ರಾಜ್ಯಾಧ್ಯಕ್ಷ ಸಿದ್ದು ಹಳ್ಳಿಗೌಡರವರು ಕಂಪ್ಲಿಯ ಆರ್.ಪಿ.ಶಶಿಕುಮಾರ ಇವರನ್ನು ಸಾಮಾಜಿಕ ಜಾಲತಾಣದ ರಾಜ್ಯ ಸಂಯೋಜಕರನ್ನಾಗಿ ಆಯ್ಕೆ ಮಾಡಿ, ಆದೇಶ ಹೊರಡಿಸಿ, ಪಕ್ಷದ ಸಂಘಟನೆಯಲ್ಲಿ ಹೆಚ್ಚು ತೊಡಗಿಕೊಂಡು ಯುವ ಮತದಾರರನ್ನು ಸೆಳೆಯುವ ಮೂಲಕ ಕ್ಷೇತ್ರದಲ್ಲಿ ಕಾಂಗ್ರೆಸ್ ಪಕ್ಷವನ್ನು ಇನ್ನಷ್ಟು ಬಲ ಪಡಿಸುವುದು. ಅಲ್ಲದೆ, ಸರ್ಕಾರದ ಪಂಚ ಯೋಜನೆ ಸೇರಿದಂತೆ ಪ್ರತಿಯೊಂದು ಸೌಲಭ್ಯಗಳ ಬಗ್ಗೆ ಸಾಮಾಜಿಕ ಜಾಲತಾಣದ ಮೂಲಕ ಜನರಿಗೆ ಮನದಟ್ಟು ಮಾಡಬೇಕೆಂದು ತಿಳಿಸಿದರು.
ನಂತರ ರಾಜ್ಯ ಸಂಯೋಜಕ ಶಶಿಕುಮಾರ ಮಾತನಾಡಿ, ಹಲವು ವರ್ಷಗಳಿಂದ ಕಾಂಗ್ರೆಸ್ ನಲ್ಲಿದ್ದುಕೊಂಡು ಪಕ್ಷದ ಏಳಿಗೆಗೆ ಶ್ರಮಿಸುತ್ತಾ ಬರಲಾಗಿದೆ. ಈ ಹಿಂದೆ ಯೂತ್ ಕಾಂಗ್ರೆಸ್ ಅಧ್ಯಕ್ಷರಾಗಿ ಸೇವೆ ಸಲ್ಲಿಸಿರುವೆ. ಈಗ ಸಾಮಾಜಿಕ ಜಾಲತಾಣದ ರಾಜ್ಯ ಸಂಯೋಜಕರನ್ನಾಗಿ ನೇಮಕ ಮಾಡುವ ಮೂಲಕ ಮತ್ತಷ್ಟು ಜವಾಬ್ದಾರಿ ನೀಡಿದ್ದು, ಈ ಹುದ್ದೆಗೆ ತಕ್ಕಂತೆ ಕೆಲಸ ಮಾಡಲಾಗುವುದು. ಮಾನ್ಯ ಜನಪ್ರಿಯ ನಾಯಕ ಶಾಸಕ ಗಣೇಶ ಅವರ ಮಾರ್ಗದರ್ಶನದಲ್ಲಿ ಹಿರಿಯರ, ಕಾರ್ಯಕರ್ತರ ಸಹಕಾರದೊಂದಿಗೆ ಪಕ್ಷದ ಬಲವರ್ಧನೆಗೆ ಶ್ರಮಿಸಲಾಗುವುದು ಎಂದರು.
ವರದಿ : ಜಿಲಾನಸಾಬ್ ಬಡಿಗೇರ್




















