ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಎನ್‌ಪಿಎಸ್‌ಗೆ ವಿರೋಧ : ಕಪ್ಪುಪಟ್ಟಿ ಧರಿಸಿ ಶಿಕ್ಷಕರ ಪಾಠ

ಕಂಪ್ಲಿ : ರಾಷ್ಟ್ರೀಯ ಪಿಂಚಣಿ ಯೋಜನೆಯನ್ನು (ಎನ್‌ಪಿಎಸ್‌) ರದ್ದುಗೊಳಿಸಿ, ಹಳೇ ಪಿಂಚಣಿ ಯೋಜನೆಯನ್ನು (ಒಪಿಎಸ್‌) ಮರು ಜಾರಿಗೊಳಿಸುವುದೂ ಸೇರಿದಂತೆ ವಿವಿಧ ಬೇಡಿಕೆ ಈಡೇರಿಕೆಗೆ ಒತ್ತಾಯಿಸಿ ಪ್ರಾಥಮಿಕ ಶಾಲಾ ಶಿಕ್ಷಕರು ಗುರುವಾರ ರಂದು ಶಾಲೆಗಳಲ್ಲಿ ಕಪ್ಪುಪಟ್ಟಿ ಧರಿಸಿ ಪಾಠವನ್ನು ಬೋಧಿಸಿದರು.

ಪಟ್ಟಣದ ಇಲ್ಲಿನ ಸತ್ಯನಾರಾಯಣಪೇಟೆಯ ಟಿ. ಎಲ್. ಸಿ. ಕೇಂದ್ರದಲ್ಲಿ ತಾಲೂಕು ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಹನುಮಂತಪ್ಪ ಮಾತನಾಡಿ ಶಿಕ್ಷಕರ ಅರ್ಹತಾ ಪರೀಕ್ಷೆಯನ್ನು ಸೇವಾ ನಿರತರಿಗೂ ಕಡ್ಡಾಯಗೊಳಿಸಿರುವ ಸುಪ್ರೀಂ ಕೋರ್ಟ್‌ ಆದೇಶ ಶಿಕ್ಷಕರಿಗೆ ನೋವು ತಂದಿದೆ. ಕಾನೂನಿಗೆ ಸೂಕ್ತ ತಿದ್ದುಪಡಿ ತರಬೇಕು. ಟಿಇಟಿ ಕಡ್ಡಾಯ ಮಾಡಬಾರದು. ಗುತ್ತಿಗೆ ಆಧಾರದ ನೇಮಕಾತಿಗಳನ್ನು ಕೈಬಿಟ್ಟು ಕಾಯಂ ನೇಮಕಕ್ಕೆ ಆದ್ಯತೆ ನೀಡಬೇಕು. ದೇಶದ ಎಲ್ಲ ಶಿಕ್ಷಕರಿಗೂ ಸಮಾನ ಕೆಲಸಕ್ಕೆ ಸಮಾನ ವೇತನ ನೀಡಬೇಕು. ಕೇಂದ್ರದ ವೇತನವನ್ನು ರಾಜ್ಯದ ಶಿಕ್ಷಕರಿಗೂ ಅನ್ವಯಿಸಬೇಕು ಎಂಬ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಒಂದು ದಿನದ ಸಾಂಕೇತಿಕ ಪ್ರತಿಭಟನೆ ಹಮ್ಮಿಕೊಂಡಿದ್ದೇವೆ.

ಅಖಿಲ ಭಾರತ ಶಿಕ್ಷಕರ ಸಂಘಟನೆಗಳು, ರಾಜ್ಯ ಹಾಗೂ ಜಿಲ್ಲಾ ಜಂಟಿ ಕ್ರಿಯಾ ಸಮಿತಿಗಳ ಸೂಚನೆಯ ಮೇರೆಗೆ ಇಂದು ರಾಜ್ಯದ ಎಲ್ಲ ಪ್ರಾಥಮಿಕ ಶಾಲೆಯ ಶಿಕ್ಷಕರು ಕಪ್ಪುಪಟ್ಟಿ ಧರಿಸಿ ಶಾಲೆಗೆ ಹಾಜರಾಗಿದ್ದೇವೆ ಎಂದು ತಿಳಿಸಿದರು.

ಈ ಸಂದರ್ಭದಲ್ಲಿ ಕಾರ್ಯದರ್ಶಿ ಸುನಿತಾ ಪೂಜಾರ, ಉಪಾಧ್ಯಕ್ಷೆ ನಾಗಮ್ಮ, ಜಿಲ್ಲಾ ನಾಮ ನಿರ್ದೇಶಕ ಸದಸ್ಯರಾದ ಚಂದ್ರಶೇಖರ, ಶಿಕ್ಷಣ ಸಂಯೋಜಕರಾದ ರೇವಣ್ಣ, ಸಿಆರ್ಪಿಗಳಾದ ಭೂಮೇಶ, ಕರುಣಾಕರ್ ಆಚಾರ್, ರೇಣುಕಾರಾಧ್ಯ, ಶಿಕ್ಷಕರಾದ ಭವ್ಯ, ಪಂಪಯ್ಯ, ವೀರ ಕುಮಾರ್, ಖಲೀಲ್ ಸಂಗನಗೌಡ, ಹನುಮನ ಗೌಡ, ಮೂರ್ತಿ, ವಿರೂಪಾಕ್ಷಪ್ಪ ಸೇರಿದಂತೆ ಅನೇಕರು ಹಾಜರಿದ್ದರು.

ಗ್ರಾಮದ ಸರಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆ ಎಮ್ಮಿಗನೂರು ನಲ್ಲಿ ಪ್ರಾಥಮಿಕ ಶಾಲಾ ಶಿಕ್ಷಕರ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಕಪ್ಪುಪಟ್ಟಿ ಧರಿಸಿ ಬೋಧನೆ ಮಾಡಲಾಯಿತು.
ಈ ಸಂದರ್ಭದಲ್ಲಿ ಮುಖ್ಯ ಗುರು ಬಿಎಸ್ ಸದ್ದು ಜಾತಪ್ಪ ಶಿಕ್ಷಕರಾದ ಎಸ್. ರಾಮಪ್ಪ ಮಂಜುನಾಥ ದೇವರಾಜ್ ಲೋಕೇಶ್ ಸುಧಾ ಪ್ರಮೀಳ ರಜಿಯಾ ಸೇರಿದಂತೆ ಇತರರಿದ್ದರು.

ವರದಿ : ಜಿಲಾನಸಾಬ್ ಬಡಿಗೇರ್

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ

error: Content is protected !!