ಹನೂರು ತಾಲೂಕಿನಲ್ಲಿ ಭಾರತೀಯ ಜನತಾ ಪಾರ್ಟಿ ಜಿಲ್ಲಾಧ್ಯಕ್ಷರಾದ ನಿರಂಜನ್ ಕುಮಾರ್ ರವರು ಬಿಜೆಪಿ ಮಂಡಲ ಅಧ್ಯಕ್ಷರಾಗಿ ಬಿಜೆಪಿ ಜಿಲ್ಲಾ ಕಚೇರಿಯಲ್ಲಿ ಹನೂರು ವಿಧಾನ ಸಭಾ ಕ್ಷೇತ್ರದ ಮಲೆ ಮಹದೇಶ್ವರ ಮಂಡಲದ ನೂತನ ಮಂಡಲ ಅಧ್ಯಕ್ಷರನ್ನಾಗಿ ಮಲೆ ಮಹದೇಶ್ವರ ಬೆಟ್ಟದ ಎಂ. ಮುರುಗ ರವರನ್ನು ನೇಮಕ ಮಾಡಿ ಆದೇಶ ಪತ್ರವನ್ನು ವಿತರಿಸಿದರು.
ಈ ಸಂದರ್ಭದಲ್ಲಿ ಮಲೆ ಮಹದೇಶ್ವರ ಮಂಡಲ ಪ್ರಧಾನ ಕಾರ್ಯದರ್ಶಿಗಳಾದ ಬಿದರಳ್ಳಿ ಶಿವಕುಮಾರ್, ದಂಟಳ್ಳಿ ಮುರುಗೇಶ್ ಹಾಗೂ ಚಾಮರಾಜನಗರ ಜಿಲ್ಲೆಯ ಎಲ್ಲಾ ವಿಧಾನಸಭಾ ಕ್ಷೇತ್ರದ ಎಲ್ಲಾ ಮಂಡಲ ಅಧ್ಯಕ್ಷರು ಮತ್ತು ಪ್ರಧಾನಕಾರ್ಯದರ್ಶಿಗಳು ಉಪಸ್ಥಿತರಿದ್ದರು.
ವರದಿ :ಉಸ್ಮಾನ್ ಖಾನ್




















