
ಬೆಳಗಾವಿ ಜಿಲ್ಲೆಯ ಬೈಲಹೊಂಗಲ ತಾಲೂಕಿನ ಉಪ ವಿಭಾಗಾಧಿಕಾರಿಗಳ ಕಾರ್ಯಾಲಯದ ಮುಂದೆ ಕರ್ನಾಟಕ ಅಂಬೇಡ್ಕರ್ ಯುವ ಸೇನೆ ಸಂಘಟನೆ ವತಿಯಿಂದ ಇಂದು (12 – 01 -2026) ಬೆಳಿಗ್ಗೆ 10 ಘಂಟೆಯಿಂದ ನಿರಂತರ ಧರಣಿ ಸತ್ಯಾಗ್ರಹ ಹಮ್ಮಿಕೊಳ್ಳಲಾಗಿದೆ ಎಂದು ಸಂಘಟನೆ ಜಿಲ್ಲಾ ಉಪಾಧ್ಯಕ್ಷ ರಾಮು ಕಳಂಕರ ತಿಳಿಸಿದರು.
ಇದೇ ಸಂದರ್ಭದಲ್ಲಿ ಉಪ ವಿಭಾಗಾಧಿಕಾರಿ , ದಂಡಾಧಿಕಾರಿಗಳು ಶ್ರೀ ಪ್ರವೀಣ್ ಜೈನ ಭೇಟಿಯಾದ ಸಂದರ್ಭದಲ್ಲಿ ಸಂಘಟನೆಯ ರಾಜ್ಯಾಧ್ಯಕ್ಷರಾದ ಮಂಜು ಚಿಕ್ಕಣ್ಣವರ ,ಉಪಾಧ್ಯಕ್ಷ ಪರಶುರಾಮ ರಾಯಬಾಗ ರಾಜ್ಯ ಕಾರ್ಯಾಧ್ಯಕ್ಷ ಮಾರುತಿ ಕೊಂಡುರ ಹಾಗೂ ರಾಜ್ಯ ಸಂಘಟನಾ ಕಾರ್ಯದರ್ಶಿಯಾದ ಶಿವಾನಂದ ಸೊಲಬನವರ ಮಾತನಾಡಿ ಜಿಲ್ಲೆಯ ರಾಮದುರ್ಗ ತಾಲೂಕಿನ ಕೆ ಚಂದರಗಿ ಪಂಚಾಯತಿ ವ್ಯಾಪ್ತಿಯಲ್ಲಿ ಬರುವ ಮುರಕಟ್ನಾಳ ಗ್ರಾಮದಲ್ಲಿ ನಡೆಯುತ್ತಿರುವ ರಸ್ತೆಯ ಹಾಗೂ ಗಟಾರು ನಿರ್ಮಾಣ ಕಾಮಗಾರಿ ಸಂಪೂರ್ಣ ಕಳಪೆ ಮಟ್ಟದಿಂದ ನಿರ್ಮಿಸುತ್ತಿದ್ದಾರೆ ಎಂದು ಸಂಬಂಧಪಟ್ಟ ಅಧಿಕಾರಿಗಳಿಗೆ ವಿಷಯ ವ್ಯಕ್ತಪಡಿಸಿದರು.
ಯಾವುದೇ ರೀತಿ ಕ್ರಮ ಕೈಗೊಳ್ಳಲು ಮುಂದಾಗುತ್ತಿಲ್ಲ ಆದ್ದರಿಂದ ಅನಿವಾರ್ಯವಾಗಿ ನಾವು ಧರಣಿ ಸತ್ಯಾಗ್ರಹ ಹಮ್ಮಿಕೊಳ್ಳಲಾಗಿದೆ ನ್ಯಾಯ ಸಿಗುವವರೆಗೆ ಅಂದರೆ ಸಂಬಂಧಪಟ್ಟ ಅಧಿಕಾರಿಗಳ ಮೇಲೆ ಸೂಕ್ತ ಕಾನೂನು ಕ್ರಮ ಕೈಗೊಳ್ಳುವುದಲ್ಲದೆ ಕಾಮಗಾರಿ ನಿರ್ಮಿಸುತ್ತಿರುವ ಗುತ್ತಿಗೆದಾರ ಲೈಸೆನ್ಸ್ ರದ್ದುಪಡಿಸುವವರೆಗೆ ಈ ಹೋರಾಟ ಕೈಬಿಡುವುದಿಲ್ಲ ಎಂದು ತಿಳಿಯಪಡಿಸಿದರು.
- ಕರುನಾಡ ಕಂದ ಪತ್ರಿಕೆ




















