ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಸಂಕ್ರಾಂತಿ ಹಬ್ಬದ ಅಂಗವಾಗಿ ವನಿತೆಯರಿಗೆ ರಂಗೋಲಿ ಸ್ಪರ್ಧೆ

ತುಮಕೂರು/ ಪಾವಗಡ : ಹೆಲ್ಪ್ ಸೊಸೈಟಿ ಹಾಗೂ ಸೇವಾ ಟ್ರಸ್ಟ್ ವತಿಯಿಂದ ಸಾಮಾಜಿಕ ಕಾರ್ಯಕ್ರಮಗಳು ನಡೆಯುತ್ತಿದ್ದು ಸಂಕ್ರಾಂತಿ ಹಬ್ಬದ ಸಲುವಾಗಿ ಉತ್ಸಾಹದಿಂದ ವನಿತೆಯರಿಗೆ ರಂಗೋಲಿ ಸ್ಪರ್ಧೆಯು ಅಕ್ಷಯ ಬ್ಲೂ ಜೆಮ್ ಮಾಂಟೇಸರಿ ಶಾಲಾ ಆವರಣದಲ್ಲಿ ಅದ್ದೂರಿಯಾಗಿ ನೆರವೇರಿತು.


ಮಹಿಳೆಯರು ರಂಗು ರಂಗಿನ ರಂಗೋಲಿ ಚಿತ್ರಗಳನ್ನು ಬಿಡಿಸಿ ಎಲ್ಲರ ಗಮನ ಸೆಳೆದರು.
ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದ ಆರಕ್ಷಕ ವೃತ್ತ ನಿರೀಕ್ಷಕರಾದ ಸುರೇಶ್ ರವರು ಮಾತನಾಡಿ ಈ ತೆರೆನಾದ ಕಾರ್ಯಕ್ರಮಗಳನ್ನು ಹೆಲ್ಪ್ ಸೊಸೈಟಿ ಆಯೋಜಿಸುತ್ತಿರುವುದು ಶ್ಲಾಘನೀಯ ಎಂದರು.


ರಂಗೋಲಿಯನ್ನು ವೀಕ್ಷಿಸಿ ವಿಜೇತರಿಗೆ ಬಹುಮಾನ ವಿತರಿಸಿದರು.
ಕಾರ್ಯಕ್ರಮದಲ್ಲಿ ಪುರಸಭಾ ಮಾಜಿ ಅಧ್ಯಕ್ಷರಾದ ಮಾನಂ ವೆಂಕಟಸ್ವಾಮಿ, ಯುವ ರಾಜಕೀಯ ಮುಖಂಡ ಮೈಲಾರರೆಡ್ಡಿ, ಮಲ್ಲೇಶ್ ಮೋಟರ್ಸ್ ಶಶಿ, ವೈಟ್ ಹಾರ್ಸ್ ರೆಸ್ಟೋರೆಂಟ್ ಮಾಲೀಕರಾದ ಅಶೋಕ್, ಮಂಜುಳಾ ನೇತ್ರಾಲಯ ಬಾಲು ಹಾಗೂ ಸಮಾಜ ಸೇವಕ ಬೇಕರಿ ನಾಗರಾಜ್ ಉಪಸ್ಥಿತರಿದ್ದರು. ತೀರ್ಪುಗಾರರಾಗಿ ಆಗಮಿಸಿದ್ದ ಮಹಿಳಾ ಪೊಲೀಸ್ ಪೇದೆ ಚಿನ್ನಮ್ಮ ಹಾಗೂ ಅನಿತಾರವರನ್ನು ಸನ್ಮಾನಿಸಲಾಯಿತು.
ಕಾರ್ಯಕ್ರಮ ಆಯೋಜಕರಾದ ಹೆಲ್ಪ್ ಸೊಸೈಟಿ ಅಧ್ಯಕ್ಷ ಮಾನಂ ಶಶಿಕಿರಣ್, ಬ್ಲೂ ಜೆಮ್ ಶಾಲೆಯ ವ್ಯವಸ್ಥಾಪಕರಾದ ಶ್ರೀಮತಿ ಸಂದ್ಯಾ, ಶ್ರೀಮತಿ ಭವ್ಯಾ ಹಾಜರಿದ್ದರು.

ವರದಿ ಪೃಥ್ವಿರಾಜು ಜಿ.ವಿ

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ

error: Content is protected !!