ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಯುವಕರ ಜ್ಞಾನ ಸದ್ಬಳಕೆಯಾಗಲಿ: ಎಸ್.ಬಿ. ಕಾಳೆ

ಬಾಗಲಕೋಟೆ/ ಜಮಖಂಡಿ: ತಂತ್ರಜ್ಞಾನದ ದುರ್ಬಳಕೆಯಿಂದ ಅಪರಾಧ ಕೃತ್ಯಗಳು ಹೆಚ್ಚುತ್ತಿವೆ. ಆದ್ದರಿಂದ ಯುವಜನತೆ ಮೊಬೈಲ್‌ನಿಂದ ದೂರವಿದ್ದು ರಾಷ್ಟ್ರದ ಅಭಿವೃದ್ಧಿಗಾಗಿ ತಮ್ಮ ಜ್ಞಾನವನ್ನು ಸದ್ಬಳಕೆ ಮಾಡಿಕೊಳ್ಳಬೇಕು ಎಂದು ವಕೀಲರ ಸಂಘದ ಉಪಾಧ್ಯಕ್ಷ ಎಸ್.ಬಿ. ಕಾಳೆ ಹೇಳಿದರು.
ಸ್ವಾಮಿ ವಿವೇಕಾನಂದ ಜಯಂತಿ ಅಂಗವಾಗಿ ತಾಲ್ಲೂಕು ಕಾನೂನು ಸೇವೆಗಳ ಸಮಿತಿ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಹಾಗೂ ಬಸವಜ್ಯೋತಿ ಪದವಿಪೂರ್ವ ಕಾಲೇಜು ಆಶ್ರಯದಲ್ಲಿ ಸೋಮವಾರ ಆಯೋಜಿಸಿದ್ದ ರಾಷ್ಟ್ರೀಯ ಯುವ ದಿನಾಚರಣೆಯ ಮುಖ್ಯ ಅತಿಥಿಯಾಗಿ ಅವರು ಮಾತನಾಡಿದರು.
ಬಸವಜ್ಯೋತಿ ಎಜುಕೇಷನ್ ಟ್ರಸ್ಟ್ ನ ಅಧ್ಯಕ್ಷ ಡಾ.ಗಿರೀಶ ಕಡ್ಡಿ ಅಧ್ಯಕ್ಷತೆ ವಹಿಸಿ ಮಾತನಾಡಿ, ಹಿಂದೂ ಸನಾತನ ಧರ್ಮದ ಸಂಸ್ಕೃತಿಯನ್ನು ವಿಶ್ವಕ್ಕೆ ಪರಿಚಯಿಸಿ ಅದರ ಕೀರ್ತಿಯನ್ನು ಉತ್ತುಂಗಕ್ಕೆ ಏರಿಸಿದ ಕೀರ್ತಿ ಸ್ವಾಮಿ ವಿವೇಕಾನಂದರಿಗೆ ಸಲ್ಲುತ್ತದೆ ಎಂದರು.
ವಕೀಲರಾದ ಲಕ್ಷ್ಮಿ ಸವದಿ ಮಾತನಾಡಿ, ತಾಲ್ಲೂಕು ಕಾನೂನು ಸೇವಾ ಸಮಿತಿ ವತಿಯಿಂದ ದಲಿತರು, ಮಹಿಳೆಯರು, ಶೋಷಿತರು, ನೊಂದವರು, ಸಂತ್ರಸ್ತರು ಹಾಗೂ ಮಕ್ಕಳಿಗೆ ದೊರೆಯುವ ಉಚಿತ ಕಾನೂನು ಅರಿವು ಮತ್ತು ನೆರವು ಕುರಿತು ಮಾಹಿತಿ ನೀಡಿದರು.
ಉಪ ಪ್ರಾಚಾರ್ಯ ಶ್ರೀಕಾಂತ ಬೆಳ್ಳಿಹಾಳ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಮೀನಾಕ್ಷಿ ನಡಕಟ್ಟಿ, ಗೀತಾ ಸಂತಿ ಇದ್ದರು.
ಅಮೃತಾ ಬಳೋಲ ಪ್ರಾರ್ಥಿಸಿದರು.
ಸಂತೋಷ ನಿರೂಪಿಸಿದರು.

  • ಕರುನಾಡ ಕಂದ ಪತ್ರಿಕೆ
ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ

error: Content is protected !!