ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಚೇಳೖರು ಪದವಿ ಪೂರ್ವ ಕಾಲೇಜಿನಲ್ಲಿ ಎನ್.ಎಸ್.ಎಸ್ ನ ವಾರ್ಷಿಕ ವಿಶೇಷ ಶಿಬಿರ.

ಮಂಗಳೂರೂ : ಇಲ್ಲಿನ ಹೊರ ವಲಯ ಚೇಳೖರು ಗ್ರಾಮದ ಸರಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಎನ್.ಎಸ್.ಎಸ್ ನ ಶಿಬಿರವು ಉದ್ಘಾಟನೆಗೊಂಡಿತು. ತಮ್ಮ ಉದ್ಘಾಟನಾ ಭಾಷಣದಲ್ಲಿ ಗ್ರಾಮ ಪಂಚಾಯತ್ ಅಧ್ಯಕ್ಷ ಶ್ರೀ ಜಯಾನಂದರವರು
ಯುವ ಪೀಳಿಗೆ ಬೆಳೆಯುವ ಮೂಲಕ ಉತ್ತಮ ಸಮಾಜ ನಿರ್ಮಾಣ ಮತ್ತು ಜನ ಸಮುದಾಯದ ಏಳಿಗೆಯಾಗಲು ಸಾಧ್ಯ, ಇದಕ್ಕೆ ಎನ್. ಎಸ್. ಎಸ್. ಕೊಡುಗೆ ಕೂಡಾ ಅನನ್ಯವಾಗಿದೆ ಎಂದು ಅಭಿಪ್ರಾಯ ಪಟ್ಟರು.

ಯೆನೆಪೋಯ ಇನ್ಸಿಟ್ಯೂಟ್ ಆಫ್ ಆರ್ಟ್ಸ್ ಸೈನ್ಸ್ ಕಾಮರ್ಸ್ ಅಂಡ್ ಮ್ಯಾನೇಜ್ಮೆಂಟ್ ಕೂಳೂರು ಇದರ ರಾಷ್ಟ್ರೀಯ ಸೇವಾ ಯೋಜನೆ (ಎನ್‌ಎಸ್‌ಎಸ್) ನ ವಾರ್ಷಿಕ ವಿಶೇಷ ಶಿಬಿರವನ್ನು ಸರ್ಕಾರಿ ಪದವಿ ಪೂರ್ವ ಕಾಲೇಜು ಚೇಳೈರು ಇಲ್ಲಿ ಆಯೋಜಿಸಿದ್ದು, ಅದರ ಉದ್ಘಾಟನಾ ಸಮಾರಂಭವನ್ನು ನೆರವೇರಿಸಿ ಅವರು ಮಾತನಾಡಿದರು.

ಕಾಲೇಜಿನ ಪ್ರಾಂಶುಪಾಲರಾದ ಡಾ. ಜ್ಯೋತಿ ಚೇಳೈರು,
ಅಧ್ಯಕ್ಷತೆಯನ್ನು ವಹಿಸಿ, ಜೀವನದ ಯಶಸ್ಸನ್ನು ಸಾಧಿಸಬೇಕಾದರೆ ನಿರಂತವಾಗಿ ಶ್ರಮಿಸಬೇಕು ಆದರ್ಶಗುಣಗಳು ಬೆಳೆಯಬೇಕು. ಅದಕ್ಕಾಗಿ ಆಯೋಜಿಸುವ ಶಿಬಿರದ ಉದ್ದೇಶವನ್ನು ತಿಳಿದುಕೊಳ್ಳಬೇಕು ಎಂದು ಶಿಬಿರಾರ್ಥಿಗಳಿಗೆ ಹಿತ ನುಡಿಗಳನ್ನಾಡಿದರು.

ಅತಿಥಿಗಳಾಗಿ ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿ ವೆಂಕಟರಮಣ ಪ್ರಕಾಶ್ ಕೆ, ವಕೀಲರು ಹಾಗೂ ನೋಟರಿ ಶ್ರೀ ಮೊಹಮ್ಮದ್ ಇಸ್ಮಾಯಿಲ್, ಕಾಲೇಜ್ ಅಭಿವೃದ್ಧಿ ಸಮಿತಿ ಉಪಾಧ್ಯಕ್ಷರಾದ ವೆಂಕಟೇಶ್ ಶೆಟ್ಟಿ, ಗ್ರಾಮ ಪಂಚಾಯತ್ ಸದಸ್ಯರಾದ ಶ್ರೀ ಸುಧಾಕರ್ ಶೆಟ್ಟಿ ಘಟಕದ ನಾಯಕ ಪವನ್ ಕುಮಾರ್ ಉಪಸ್ಥಿತರಿದ್ದರು.

ಎನ್‌. ಎಸ್‌. ಎಸ್. ಕಾರ್ಯಕ್ರಮ ಅಧಿಕಾರಿ, ಡಾ. ದಿನಕರ ಪಚ್ಚನಾಡಿ ಸ್ವಾಗತಿಸಿದರು. ಕಾರ್ಯಕ್ರಮ ಅಧಿಕಾರಿ ಡಾ. ಸುಮಂಗಲ ರಾವ್ ವಂದಿಸಿದರು. ಘಟಕ ನಾಯಕಿ ತೃಶಾ, ಕಾರ್ಯಕ್ರಮ ನಿರೂಪಿಸಿದರು.

ಶಿಬಿರದ ಚಟುವಟಿಕೆಗಳ ಆರಂಭವನ್ನು ಎನ್ಎಸ್ಎಸ್ ಧ್ವಜ ಅನಾವರಣಗೊಳಿಸುವುದರೊಂದಿಗೆ ಉದ್ಘಾಟನೆ ಮಾಡಲಾಯಿತು.

ಔಪಚಾರಿಕ ಉದ್ಘಾಟನೆಯ ನಂತರ, ಕಾಲೇಜು ಕಟ್ಟಡಕ್ಕೆ ಬಣ್ಣ ಬಳಿಯುವುದು, ಹಣ್ಣು ಬಿಡುವ ಸಸ್ಯಗಳನ್ನು ನೆಡುವುದು, ರಸ್ತೆ ಸ್ವಚ್ಛತೆ ಇತ್ಯಾದಿ ಕಾರ್ಯಗಳಿಗೆ ಚಾಲನೆ ನೀಡಲಾಯಿತು.

ವರದಿ. ಚಂದ್ರಶೇಖರ ಹೆಬ್ಬಾರ್ ಕೊಲ್ಯ.

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ

error: Content is protected !!