ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಮಕರ ಸಂಕ್ರಾಂತಿ ದಿನ ಜನತಾ ಹೆಲ್ತ್ ಸೊಸೈಟಿಯ ಬ್ರೋಶರ್–ವೆಬ್‌ಸೈಟ್ ಬಿಡುಗಡೆ

ಬೆಂಗಳೂರು, ಜ.17: ಜನತಾ ಹೆಲ್ತ್ ಸೊಸೈಟಿಯ ಅಧಿಕೃತ ವೆಬ್‌ಸೈಟ್‌ ಹಾಗೂ ಕೈಪಿಡಿಯನ್ನು ಮಹಾಲಕ್ಷ್ಮೀ ಲೇಔಟ್ ವಿಧಾನಸಭಾ ಕ್ಷೇತ್ರದ ಶಾಸಕರಾದ ಕೆ. ಗೋಪಾಲಯ್ಯ ಅವರು ಮಕರ ಸಂಕ್ರಾತಿ‌ ದಿನವಾದ ಗುರುವಾರದಂದು ಬಿಡುಗಡೆಗೊಳಿಸಿದರು. ಸಮುದಾಯಾಧಾರಿತ ಆರೋಗ್ಯ ಸೇವೆಯನ್ನು ಕಡಿಮೆ ದರದಲ್ಲಿ ಜನರಿಗೆ ತಲುಪಿಸುವ ಉದ್ದೇಶದೊಂದಿಗೆ ಸಂಸ್ಥೆ ಮಹತ್ವ ಹೆಜ್ಜೆ ಇಟ್ಟಿದೆ.

ಕಾರ್ಯಕ್ರಮದಲ್ಲಿ ಮಾತಾಡಿದ ಶಾಸಕ ಕೆ. ಗೋಪಾಲಯ್ಯ ಅವರು, ‘ಜನಸಾಮಾನ್ಯರಿಗೆ ಕಡಿಮೆ ದರದಲ್ಲಿ ಆರೋಗ್ಯ ಸೇವೆ ಒದಗಿಸುವಂತದ್ದು ನಿಜಕ್ಕೂ ಶ್ಲಾಘನೀಯ ವಿಚಾರ. ಆರೋಗ್ಯ ಜಾಗೃತಿ, ಆರೋಗ್ಯ ಶಿಬಿರಗಳ ಮೂಲಕ ಉತ್ತಮ ಸಮಾಜ ನಿರ್ಮಾಣ ಮಾಡುವಲ್ಲಿ ಜನತಾ ಹೆಲ್ತ್ ಸೊಸೈಟಿ ಒಂದು ಉತ್ತಮ ಹೆಜ್ಜೆ ಇಟ್ಟಿದೆ. ಈ ಸಂಸ್ಥೆಗೆ ಒಳ್ಳೆಯದಾಗಲಿ’ ಎಂದು ಶುಭ ಹಾರೈಸಿದರು.

ಈ ಸಂದರ್ಭದಲ್ಲಿ ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯದ ಸೆನೆಟ್ ಸದಸ್ಯರು ಹಾಗೂ ಸಲಹಾ ಮಂಡಳಿ ಸದಸ್ಯರಾದ ಡಾ. ಜಿ. ಮಂಜುನಾಥ ಗೌಡ ಸಮಾಜಮುಖಿ ಆರೋಗ್ಯ ಸೇವೆಗಳ ಮಹತ್ವದ ಕುರಿತು ಮಾತನಾಡಿದರು.

ಕಾರ್ಯಕ್ರಮದಲ್ಲಿ ಜನತಾ ಹೆಲ್ತ್ ಸೊಸೈಟಿ ಸಂಸ್ಥೆ ಅಧ್ಯಕ್ಷರಾದ ಡಾ. ನಾಗೇಂದ್ರ ಡಿ.ಎಲ್ ಹಾಗೂ ಕಾರ್ಯಕಾರಿ ಸದಸ್ಯರು ಉಪಸ್ಥಿತರಿದ್ದರು.

  • ಕರುನಾಡ ಕಂದ
ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ

error: Content is protected !!