ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಕನ್ನಡ ನಾಡಿನ ಭೀಷ್ಮ ಭೀಮಣ್ಣ ಖಂಡ್ರೆ ಇನ್ನಿಲ್ಲ : ಕಳಚಿಬಿದ್ದ ಸ್ವಾತಂತ್ರ್ಯ ಹೋರಾಟ ಮತ್ತು ಏಕೀಕರಣದ ಕೊಂಡಿ

ಬೀದರ್: ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಮಾಜಿಸಚಿವ, ಅಖಿಲ‌ ಭಾರತ ವೀರಶೈವ ಲಿಂಗಾಯತ ಮಹಾಸಭೆ ಮಾಜಿ ಅಧ್ಯಕ್ಷ, ಶತಾಯುಷಿ ಭೀಮಣ್ಣ ಖಂಡ್ರೆ (102) ಅವರು ಶುಕ್ರವಾರ ಇಲ್ಲಿನ ಅವರ ಸ್ವಗೃಹದಲ್ಲಿ ನಿಧನರಾದರು.
ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಅವರಿಗೆ ಜೀವರಕ್ಷಕಗಳ ಮೂಲಕ ಒಂದು ವಾರ ಬೀದರ್ ನಗರದ ಗುದಗೆ ಮಲ್ಟಿ ಸ್ಪೆಷಾಲಿಟಿ ಆ್ಯಂಡ್ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಗೆ ದಾಖಲಿಸಿ, ಚಿಕಿತ್ಸೆ ನೀಡಲಾಗಿತ್ತು.

ಸತತವಾಗಿ ಆರೋಗ್ಯ ಕ್ಷೀಣಿಸಿದ ಕಾರಣ ಸೋಮವಾರ (ಜ.12) ಅವರನ್ನು ಮನೆಗೆ ಕೊಂಡೊಯ್ಯಲಾಗಿತ್ತು. ಬಳಿಕ ಮನೆಯಲ್ಲಿಯೇ ವೈದ್ಯರ ತಂಡ ಅವರನ್ನು ಉಪಚರಿಸುತ್ತಿತ್ತು. ಆರೋಗ್ಯದಲ್ಲಿ ಚೇತರಿಕೆ ಕಂಡು ಬಂದಿತ್ತು. ಶುಕ್ರವಾರ ಆರೋಗ್ಯದಲ್ಲಿ ಏರುಪೇರು ಉಂಟಾಗಿ ರಾತ್ರಿ ನಿಧನರಾದರು. ತಂದೆಯ ಅನಾರೋಗ್ಯದ ಹಿನ್ನೆಲೆಯಲ್ಲಿ ಅವರ ಮಗ, ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ ಬಿ. ಖಂಡ್ರೆ, ಮೊಮ್ಮಗ ಸಾಗರ ಖಂಡ್ರೆ ಸೇರಿದಂತೆ ಕುಟುಂಬ ಸದಸ್ಯರು ಎಲ್ಲಾ ರೀತಿಯ ಕಾರ್ಯಕ್ರಮಗಳಿಂದ ದೂರ ಉಳಿದು ಮನೆಯಲ್ಲಿಯೇ ಉಳಿದುಕೊಂಡಿದ್ದರು.

ಖಂಡ್ರೆಯವರ ಆರೋಗ್ಯದಲ್ಲಿ ಏರುಪೇರಾದ ವಿಷಯ ತಿಳಿದು ವಿವಿಧ ಮಠಾಧೀಶರು, ಸಚಿವರು, ಶಾಸಕರು, ರಾಜಕೀಯ ಪಕ್ಷಗಳ ಮುಖಂಡರು, ಅವರ ಬೆಂಬಲಿಗರು ಕಳೆದ ಹಲವು ದಿನಗಳಿಂದ ಅವರ ಮನೆಗೆ ಭೇಟಿ ನೀಡುತ್ತಿದ್ದರು.

ಭೀಮಣ್ಣ ಖಂಡ್ರೆಯವರಿಗೆ ಪರಿಸರ, ಅರಣ್ಯ ಮತ್ತು ಜೀವಿಶಾಸ್ತ್ರ ಸಚಿವ ಈಶ್ವರ ಬಿ. ಖಂಡ್ರೆ ಸೇರಿದಂತೆ ಇಬ್ಬರು ಪುತ್ರರು, ಐದು ಜನ ಪುತ್ರಿಯರು ಇದ್ದಾರೆ. ಪತ್ನಿ ಲಕ್ಷ್ಮೀಬಾಯಿ ಖಂಡ್ರೆ, ಗಂಡು ಮಕ್ಕಳ ಪೈಕಿ ಹಿರಿಯ ಮಗ, ಮಾಜಿ ಶಾಸಕ ವಿಜಯಕುಮಾರ್‌ ಖಂಡ್ರೆ ಆವರು ಅನಾರೋಗ್ಯದಿಂದ ಈ ಹಿಂದೆಯೇ ಮೃತಪಟ್ಟಿದ್ದಾರೆ.

ನಾಲ್ಕು ಸಲ ಶಾಸಕರಾಗಿ, ಎರಡು ಸಲ ವಿಧಾನ ಪರಿಷತ್ ಸದಸ್ಯರಾಗಿದ್ದ ಭೀಮಣ್ಣ ಖಂಡ್ರೆ ಅವರು ಎಂ. ವೀರಪ್ಪ ಮೊಯ್ಲಿ ಅವರ ಸಂಪುಟದಲ್ಲಿ ಸಾರಿಗೆ ಸಚಿವರಾಗಿ ಕೆಲಸ ನಿರ್ವಹಿಸಿದ್ದರು. ಸಮಾಜವಾದಿ ಪಕ್ಷದ ಕಾರ್ಯಕರ್ತರಾಗಿ ರಾಜಕೀಯ ಜೀವನ ಆರಂಭಿಸಿದ ಅವರು, 1953ರಲ್ಲಿ ಭಾಲ್ಕಿ ಪುರಸಭೆ ಅಧ್ಯಕ್ಷರಾಗಿದ್ದರು.

ಶನಿವಾರ ಅಂತ್ಯಕ್ರಿಯೆ

ಭೀಮಣ್ಣ ಖಂಡ್ರೆಯವರ ಅಂತಿಮ ದರ್ಶನ ಹಾಗೂ ಅಂತ್ಯಕ್ರಿಯೆ ಶನಿವಾರ (ಜ.17) ನೆರವೇರಲಿದೆ ಎಂದು ಅವರ ಮಗ, ಜಿಲ್ಲಾ ಉಸ್ತುವಾರಿ ಸಚಿವರೂ ಆದ ಅರಣ್ಯ, ಪರಿಸರ ಮತ್ತು ಜೀವಿಶಾಸ್ತ್ರ ಸಚಿವ ಈಶ್ವರ ಬಿ. ಖಂಡ್ರೆ ತಿಳಿಸಿದ್ದಾರೆ.

ಶನಿವಾರ ಬೆಳಿಗ್ಗೆ ಭೀಮಣ್ಣ ಖಂಡ್ರೆ ಅವರ ಪಾರ್ಥೀವ ಶರೀರವನ್ನು ಭಾಲ್ಕಿಯ ಗಾಂಧಿ ಗಂಜ್ ನಲ್ಲಿರುವ ಅವರ ಮನೆಯ ಆವರಣದಲ್ಲಿ ಸಾರ್ವಜನಿಕ ದರ್ಶನಕ್ಕೆ ಇಡಲಾಗುವುದು. ಸಂಜೆ ಭಾಲ್ಕಿ ಹೊರವಲಯದ ಚಿಕಲಚಂದಾ ಗ್ರಾಮ ಸಮೀಪದ ಶಾಂತಿಧಾಮದಲ್ಲಿ ಭೀಮಣ್ಣ ಖಂಡ್ರೆ ಅವರ ಪತ್ನಿ ದಿವಂಗತ ಲಕ್ಷ್ಮೀಬಾಯಿ ಅವರ ಸಮಾಧಿಯ ಪಕ್ಕದಲ್ಲೇ ವೀರಶೈವ ಲಿಂಗಾಯತ ಸಂಪ್ರದಾಯದಂತೆ ಅಂತಿಮ ವಿಧಿ ವಿಧಾನಗಳು ನರವೇರಲಿವೆ ಎಂದು ಶುಕ್ರವಾರ ರಾತ್ರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಭೀಮಣ್ಣ ಖಂಡ್ರೆಯವರು ಅವರ ಕೆಲಸಗಳ ಮೂಲಕ ಸಮಾಜದಲ್ಲಿ ಚಿರಸ್ಥಾಯಿಯಾಗಿದ್ದಾರೆ. ನಾಡು ನುಡಿಗಾಗಿ ಸಲ್ಲಿಸಿದ ಅವರ ಸೇವೆ ಸದಾ ಸ್ಮರಣೀಯ.

– ಶಿವಾನಂದ ಸ್ವಾಮೀಜಿ, ಪೀಠಾಧಿಪತಿ, ಗುರುಬಸವೇಶ್ವರ ಸಂಸ್ಥಾನ ಮಠ ಹುಲಸೂರು.

ವರದಿ : ಜಿಲಾನಸಾಬ್ ಬಡಿಗೇರ್

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ

error: Content is protected !!