ಗುರುಮಠಕಲ್: ಮಾಜಿ ಸಚಿವ ಭೀಮಣ್ಣ ಖಂಡ್ರೆಯವರ ನಿಧನ ನಾಡಿಗೆ ತುಂಬಲಾರದ ನಷ್ಟ ಎಂದು ವೀರಶೈವ ಲಿಂಗಾಯತ ಸಮಾಜದ ಅಧ್ಯಕ್ಷ ಶಿವಾನಂದ ಬೂದಿ ಸಂತಾಪ ಸೂಚಿಸಿದ್ದಾರೆ.
ಅವರ ಅಗಲಿಕೆ ಸುದ್ದಿ ಮನಸ್ಸಿಗೆ ಆಳವಾದ ನೋವುಂಟು ಮಾಡಿದೆ ಎಂದು ಅವರು ಹೇಳಿದ್ದಾರೆ. ಶರಣ ಚಿಂತನೆಯ ಮೌಲ್ಯಗಳನ್ನು ಬದುಕಿನಲ್ಲಿ ಅಳವಡಿಸಿಕೊಂಡು ಸಮಾಜಮುಖಿ ಹೋರಾಟಗಳ ಮೂಲಕ ಗುರುತಿಸಿಕೊಂಡ ಧೀಮಂತ ನಾಯಕರಾಗಿದ್ದ ಭೀಮಣ್ಣ ಖಂಡ್ರೆಯವರು ನಾಡಿನ ರಾಜಕೀಯ ಇತಿಹಾಸದಲ್ಲಿ ತಮ್ಮದೇ ಆದ ಛಾಪು ಮೂಡಿಸಿದ್ದರು. ಅವರ ಅಗಲಿಕೆ ಕರ್ನಾಟಕಕ್ಕೆ ತುಂಬಲಾರದ ನಷ್ಟವಾಗಿದೆ ಎಂದು ಹೇಳಿದ್ದಾರೆ.
ಮೃತರ ಆತ್ಮಕ್ಕೆ ಚಿರಶಾಂತಿ ದೊರೆಕಲಿ. ಕುಟುಂಬ ಸದಸ್ಯರು ಹಾಗೂ ಅಭಿಮಾನಿಗಳಿಗೆ ದುಃಖ ಸಹಿಸುವ ಶಕ್ತಿ ಸಿಗಲಿ ಎಂದು ವೀರಶೈವ ಲಿಂಗಾಯತ ಸಮಾಜದ ವತಿಯಿಂದ ಪ್ರಾರ್ಥಿಸುತ್ತೇವೆ ಎಂದು ಶಿವಾನಂದ ಬೂದಿ ತಿಳಿಸಿದ್ದಾರೆ.




















