ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಅಗಲಿದ ಲೋಕನಾಯಕ ದಿ. ಡಾ||ಭೀಮಣ್ಣ ಖಂಡ್ರೆಯವರಿಗೆ ಶ್ರದ್ಧಾಂಜಲಿ ಸಲ್ಲಿಸಿದ ವೀರಶೈವ ಲಿಂಗಾಯತ ಸಮಾಜ.

ಗುರುಮಠಕಲ್: ವೀರಶೈವ ಲಿಂಗಾಯತ ಸಮಾಜದ ಒಗ್ಗಟ್ಟು, ಸಂಘಟನೆ ಮತ್ತು ಸಮಗ್ರ ಬೆಳವಣಿಗೆಗಾಗಿ ತಮ್ಮ ಜೀವನವನ್ನೇ ಅರ್ಪಿಸಿದ ಲೋಕನಾಯಕ ಶ್ರೀ ಭೀಮಣ್ಣ ಖಂಡ್ರೆ ಅವರಿಗೆ ಗುರುಮಠಕಲ್ ವೀರಶೈವ ಲಿಂಗಾಯತ ಸಮಾಜ ವತಿಯಿಂದ ಶನಿವಾರ ಶ್ರದ್ಧಾಂಜಲಿ ಸಲ್ಲಿಸಲಾಯಿತು.

ದಿವಂಗತ ಭೀಮಣ್ಣ ಖಂಡ್ರೆ ಅವರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಲಾಯಿತು ತದ ನಂತರ ಮಾತನಾಡಿದ ಮಾಜಿ ಅಧ್ಯಕ್ಷರಾದ ಡಾ. ಭೀಮಶಂಕರ ಮುತ್ತಗಿ ಸಮಾಜದ ಒಳಹೊರಗಿನ ಭೇದಭಾವಗಳನ್ನು ತೊಡೆದುಹಾಕಿ, ವೀರಶೈವ ಲಿಂಗಾಯತ ಸಮುದಾಯವನ್ನು ಒಂದು ಸೂತ್ರಕ್ಕೆ ಕಟ್ಟಿದ ಕೀರ್ತಿ ಅವರಿಗೆ ಸಲ್ಲುತ್ತದೆ, ಸಮಾಜಸೇವೆಯಲ್ಲಿ ಅಪಾರ ಕೊಡುಗೆ ನೀಡಿದ್ದಾರೆ ಎಂದು ಹೇಳಿದರು.
ಈ ಸಂದರ್ಭದಲ್ಲಿ ಅವರ ಸಾಧನೆಗಳನ್ನು ಸ್ಮರಿಸಿ, ಅವರ ಕುಟುಂಬಕ್ಕೆ ಅವರ ಅಗಲಿಕೆಯ ನೋವು ಬರಿಸುವ ಶಕ್ತಿ ನೀಡಲಿ ಎಂದು ಸಮಾಜದ ವತಿಯಿಂದ ಎರಡು ನಿಮಿಷ ಮೌನ ಆಚರಿಸಲಾಯಿತು.

ಅಧ್ಯಕ್ಷ ಶಿವಾನಂದ ಬೂದಿ, ಉಪಾಧ್ಯಕ್ಷ ಮಲ್ಲಿಕಾರ್ಜುನ ವಸ್ತ್ರದ, ಮಾಜಿ ಅಧ್ಯಕ್ಷರಾದ ನಾಗಭೂಷಣ್ ಅವಂಟಿ, ಮಲ್ಲಿಕಾರ್ಜುನ ಹಿರೇಮಠ, ಸಮಾಜದ ಹಿರಿಯರಾದ ಚಂದ್ರಶೇಖರ ಮಂಚಾಲ, ನರಸರೆಡ್ಡಿ ಪೊಲೀಸ್ ಪಾಟೀಲ ಗಡ್ಡೆಸುಗೂರು, ಧರ್ಮವೀರ ವಾರದ, ಅಶೋಕ ಮುತ್ತಗಿ, ವಿಜಯರಾಜ್ ಶಾಸ್ತ್ರಿ, ನಾಗಣ್ಣ ಕಾಳಗಿ, ಶಂಕ್ರಯ್ಯ ಸ್ವಾಮಿ ಸಾಲಿಮಠ, ರವಿಕುಮಾರ್ ಕೋಟಕೊಂಡಿ,ಶಂಕ್ರಯ್ಯ ಸ್ವಾಮಿ ಪಸ್ಪುಲ್, ಶರಣಪ್ಪ ಪಸಾರ, ರವಿಶಂಕರ್ ಮುತ್ತಗಿ, ದಯಾನಂದ ಹಿರೇಮಠ, ಸಿದ್ಧರಾಮ ಸ್ವಾಮಿ, ವಿಜಯ ಹಿರೇಮಠ ಹಾಜರಿದ್ದರು.

ವರದಿ: ಜಗದೀಶ್ ಕುಮಾರ್ ಭೂಮಾ

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ

error: Content is protected !!