ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಫೆಬ್ರವರಿ 11, 12ರಂದು ಕಂಪ್ಲಿ ಉತ್ಸವ : ಶಾಸಕ ಜೆ.ಎನ್.ಗಣೇಶ

ಕಂಪ್ಲಿ: ಫೆಬ್ರವರಿ 11 ಮತ್ತು 12ರಂದು ಎರಡು ದಿನ ಕಂಪ್ಲಿ ಉತ್ಸವ ಹಾಗೂ 15, 16ರಂದು ಕುಡುಗೋಡು ಉತ್ಸವ ನಡೆಸಲಾಗುವುದು ಎಂದು ಶಾಸಕ ಜೆ.ಎನ್.ಗಣೇಶ ಹೇಳಿದರು.
ಪಟ್ಟಣದ ಕೊಟ್ಟಾಲ್ ನಲ್ಲಿ ನಡೆದ 2024-25ನೇ ಸಾಲಿನ ಕೆಕೆಆರ್ಡಿಬಿ ಯೋಜನೆಯಡಿ ಸುಮಾರು 50 ಲಕ್ಷ ವೆಚ್ಚದ ಕಾಮಗಾರಿಗೆ ಶಂಕುಸ್ಥಾಪನೆ ನೆರವೇರಿಸಿ ಮಾತನಾಡಿ, ಈ ಬಾರಿಯ ಉತ್ಸವಕ್ಕೆ ಸರ್ಕಾರದಿಂದ 5ಕೋಟಿ ನೀಡುವಂತೆ ಪ್ರಸ್ತಾಪ ಮಾಡಿದ್ದು, ಆದರೆ, ಒಂದೆರಡು ಕೋಟಿ ನೀಡುವುದಾಗಿ ತಿಳಿಸಿದರಿಂದ ಇಷ್ಟರಲ್ಲಿ ಉತ್ಸವ ಮಾಡಲು ಸಮಸ್ಯೆಯಾಗುತ್ತದೆ. ಆದ್ದರಿಂದ ಇನ್ನಷ್ಟು ಅನುದಾನ ನೀಡುವಂತೆ ಮನವಿ ಮಾಡಲಾಗಿದೆ. ಕಂಪ್ಲಿ ತಾಲೂಕು ಸೇರಿದಂತೆ ಕ್ಷೇತ್ರದ ಸಾಕಷ್ಟು ಅಭಿವೃದ್ಧಿ ಕಾರ್ಯಗಳೊಂದಿಗೆ ಜನತೆಗೆ ಮೂಲಭೂತ ಸೌಲಭ್ಯಗಳನ್ನು ಕಲ್ಪಿಸಲಾಗುತ್ತಿದೆ ಎಂದರು.
ನಂತರ ಮುಖಂಡ ಎಂ.ಸುಧೀರ್ ಮಾತನಾಡಿ, ಇಲ್ಲಿನ ಸ್ಮಶಾನದ ಸುತ್ತಲು ಹದ್ದುಬಸ್ತು ಮಾಡಿ, ಅಭಿವೃದ್ಧಿಗೊಳಿಸಿ, ಶವ ಸಂಸ್ಕಾರಕ್ಕೆ ಅನುಕೂಲ ಮಾಡಿಕೊಡಬೇಕು. ಇಲ್ಲಿನ ನಾರಿಹಳ್ಳದಲ್ಲಿ ತುಂಬಿರುವ ಹೂಳು ತೆರವುಗೊಳಿಸಬೇಕು ಎಂದು ಮನವಿ ಮಾಡಿದರು.
ಈ ಸಂದರ್ಭದಲ್ಲಿ ಪಿಡಿಒ ಅಪರಂಜಿ, ಮುಖಂಡರಾದ ಎಂ.ಸುಧೀರ್, ಕೆ.ರವಿಚಂದ್ರ, ಸುಧಾಕರ, ಈರಣ್ಣ, ದುಬ್ಬಾರೆಡ್ಡಿ, ಮಲ್ಲಿಕಾರ್ಜುನ, ನಾಗರಾಜ ಸೇರಿದಂತೆ ಇತರರು ಇದ್ದರು.

ವರದಿ : ಜಿಲಾನಸಾಬ್ ಬಡಿಗೇರ್

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ

error: Content is protected !!