ಬಳ್ಳಾರಿ : ಹದಗೆಟ್ಟ ಕಾನೂನು ಮತ್ತು ಸುವ್ಯವಸ್ಥೆ, ಹೆಚ್ಚುತ್ತಿರುವ ಭ್ರಷ್ಟಾಚಾರ, ಶಾಸಕರ ದೌರ್ಜನ್ಯ ,ಹಾಗೂ ಜನವಿರೋಧಿ ಕಾಂಗ್ರೆಸ್ ನ ಆಡಳಿತ ವಿರೋಧಿ ನೀತಿಯನ್ನು ಖಂಡಿಸಿ ಬಳ್ಳಾರಿಯ ಎಪಿಎಂಸಿ ಮೈದಾನದಲ್ಲಿ ಬಿಜೆಪಿ ವತಿಯಿಂದ ಬೃಹತ್ ಪ್ರತಿಭಟನೆ ನಡೆಸಲಾಯಿತು.
ಬಳ್ಳಾರಿ, ವಿಜಯನಗರ ಸೇರಿದಂತೆ ಮತ್ತಿತರ ಭಾಗಗಳಿಂದ ಸಾವಿರಾರು ಸಂಖ್ಯೆಯಲ್ಲಿ ಆಗಮಿಸಿದ್ದ ಪಕ್ಷದ ಕಾರ್ಯಕರ್ತರು ಕಾಂಗ್ರೆಸ್ ಸರ್ಕಾರವನ್ನು ರಾಜ್ಯದಿಂದ ಕಿತ್ತಿಸೆಯುವ ಧೃಡ ಸಂಕಲ್ಪ ಮಾಡಿದರು.
ಬಳ್ಳಾರಿ ಶಾಸಕ ನಾ.ರಾ ಭರತ್ ರೆಡ್ಡಿ ಹಾಗೂ ಅವರ ಆಪ್ತರು ನಡೆಸುತ್ತಿರುವ ದೌರ್ಜನ್ಯವನ್ನು ಹತ್ತಿಕ್ಕದಿದ್ದರೆ, ಸೂಕ್ತ ಪಾಠ ಕಲಿಸುವ ಎಚ್ಚರಿಕೆಯನ್ನು ನೀಡಲಾಯಿತು.
ಬಳ್ಳಾರಿಯಲ್ಲಿ ಇತ್ತೀಚಿಗೆ ನಡೆದ ಗಲಭೆ ಪ್ರಕರಣವನ್ನು ತಕ್ಷಣವೇ ರಾಜ್ಯ ಸರ್ಕಾರ CBIಗೆ ವಹಿಸಬೇಕು. ಹಾಗೂ ಪ್ರಕರಣದ ಪ್ರಮುಖ ಕಿಂಗ್ ಪಿನ್ ನಾರಾ ಭರತ್ ರೆಡ್ಡಿ ಅವರ ಆಪ್ತ ಸತೀಶ್ ರೆಡ್ಡಿ ಸೇರಿದಂತೆ ಪ್ರಮುಖ ರೂವಾರಿಗಳನ್ನು ತಕ್ಷಣವೇ ಬಂಧಿಸಿ ಜೈಲಿಗೆ ಹಾಕಬೇಕೆಂದು ಆಗ್ರಹಿಸಲಾಯಿತು.
ಬಳ್ಳಾರಿ, ವಿಜಯನಗರ, ಕೊಪ್ಪಳ ,ರಾಯಚೂರು, ಸೇರಿದಂತೆ ಕಲ್ಯಾಣ ಕರ್ನಾಟಕ ಭಾಗದಲ್ಲಿ ಮನೆ ಮನೆಗೆ ತೆರಳಿ ಬಿಜೆಪಿಯನ್ನು ಬೇರು ಮಟ್ಟದಿಂದ ಸಂಘಟಿಸಿ ಮುಂದಿನ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷವನ್ನು ಬೇರು ಸಮೇತ ಕಿತ್ತು ಹಾಕುವ ದೃಢ ಸಂಕಲ್ಪ ಮಾಡಲಾಯಿತು.
ಬಳ್ಳಾರಿಯಲ್ಲಿ ನಡೆದ ಕಾಂಗ್ರೆಸ್ ವಿರುದ್ಧದ ಪ್ರತಿಭಟನೆ ಎಚ್ಚರಿಕೆ ಗಂಟೆಯಾಗಿದ್ದು ಇನ್ನು ಮುಂದಾದರೂ ದಬ್ಬಾಳಿಕೆ, ದೌರ್ಜನ್ಯ ಅಟ್ಟಹಾಸಕ್ಕೆ ಕಡಿವಾಣ ಹಾಕಿ, ಜನಪರ ಆಡಳಿತ ನೀಡದಿದ್ದರೆ ಬೀದಿಗಿಳಿದು ಹೋರಾಟ ನಡೆಸುವ ಎಚ್ಚರಿಕೆಯನ್ನು ನೀಡಲಾಯಿತು.
ಈ ಸಂದರ್ಭದಲ್ಲಿ ರಾಜ್ಯ ಬಿಜೆಪಿ ಸಹ ಉಸ್ತುವಾರಿ
ಶ್ರೀಯುತ ಸುಧಾಕರ್ ರೆಡ್ಡಿ, ಬಿಜೆಪಿ ರಾಜ್ಯಾಧ್ಯಕ್ಷರಾದ ಶ್ರೀಯುತ ಬಿವೈ ವಿಜಯೇಂದ್ರ, ಮಾಜಿ ಮುಖ್ಯಮಂತ್ರಿ ಹಾಗೂ ಸಂಸದರಾದ ಶ್ರೀಯುತ ಬಸವರಾಜ ಬೊಮ್ಮಾಯಿ, ಸಂಸದರಾದ ಶ್ರೀಯುತ ಗೋವಿಂದ ಕಾರಜೋಳ, ವಿಧಾನಸಭೆಯ ಪ್ರತಿಪಕ್ಷದ ನಾಯಕರ ಶ್ರೀಯುತ ಆರ್ ಅಶೋಕ್, ವಿಧಾನ ಪರಿಷತ್ ಪ್ರತಿ ಪಕ್ಷದ ನಾಯಕರದ ಶ್ರೀಯುತ ಚಲವಾದಿ ನಾರಾಯಣ ಸ್ವಾಮಿ, ಮುಖ್ಯ ಸಚೇತಕರಾದ ಶ್ರೀಯುತ ದೊಡ್ಡನಗೌಡ ಪಾಟೀಲ್,
ಶ್ರೀಯುತ ಎನ್. ರವಿಕುಮಾರ್, ಶಾಸಕರಾದ ಶ್ರೀಯುತ ಜನಾರ್ಧನ ರೆಡ್ಡಿ, ಶ್ರೀಯುತ ಕೃಷ್ಣ ನಾಯಕ್, ಪರಿಷತ್ ಸದಸ್ಯರಾದ ಶ್ರೀಮತಿ ಹೇಮಾಲತಾ ನಾಯಕ್, ಮಾಜಿ ಶಾಸಕರಾದ
ಶ್ರೀಯುತ ಸುರೇಶ್ ಬಾಬು, ಮಾಜಿ ಸಂಸದರಾದ ಶ್ರೀಯುತ ಸಣ್ಣ ಫಕೀರಪ್ಪ,, ಶ್ರೀಮತಿ ಅರುಣಾಲಕ್ಷ್ಮೀ ಜನಾರ್ದನ ರೆಡ್ಡಿ ಸೇರಿದಂತೆ ಶಾಸಕರು, ವಿಧಾನ ಪರಿಷತ್ ಸದಸ್ಯರು, ಮಾಜಿ ಸಚಿವರು, ಹಾಗೂ ದೊಡ್ಡ ಸಂಖ್ಯೆಯ ಪಕ್ಷದ ಕಾರ್ಯಕರ್ತರು ಭಾಗವಹಿಸಿದ್ದರು.
ವರದಿ ಅಮರೇಶ ನಾಯಕ




















