ಹಾವೇರಿ ಜಿಲ್ಲಾ ಕಾಂಗ್ರೆಸ್ ಸಮಿತಿಯ ವತಿಯಿಂದ ದಿ. 18/01/2026 ರಂದು ಮನರೇಗಾ ಬಚಾವೋ ಆಂದೋಲನವನ್ನು ಹಮ್ಮಿಕೊಳ್ಳಲಾಗಿದ್ದು, ಇದರ ಅಂಗವಾಗಿ ಒಂದು ದಿನದ ಉಪವಾಸ ಸತ್ಯಾಗ್ರಹ ಹಾಗೂ ಸಾಂಕೇತಿಕ ಮುಷ್ಕರವನ್ನು ಶಾಂತಿಯುತವಾಗಿ ನಡೆಸಲಾಯಿತು.
ಕೇಂದ್ರ ಸರ್ಕಾರದ ಜನವಿರೋಧಿ ನೀತಿಗಳಿಂದಾಗಿ ಮಹಾತ್ಮಾ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆ (ಮನರೇಗಾ) ದುರ್ಬಲಗೊಳ್ಳುತ್ತಿದ್ದು, ಗ್ರಾಮೀಣ ಕಾರ್ಮಿಕರ ಉದ್ಯೋಗ ಹಾಗೂ ಜೀವನೋಪಾಯಕ್ಕೆ ಗಂಭೀರ ಧಕ್ಕೆಯಾಗುತ್ತಿದೆ ಎಂದು ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದರು. ಮನರೇಗಾ ಯೋಜನೆಗೆ ಸಮರ್ಪಕ ಅನುದಾನ ಬಿಡುಗಡೆ ಮಾಡಬೇಕು, ಕೂಲಿ ಹಣವನ್ನು ತಕ್ಷಣ ಪಾವತಿಸಬೇಕು ಹಾಗೂ ಯೋಜನೆಯನ್ನು ಬಲಪಡಿಸಬೇಕು ಎಂಬ ಪ್ರಮುಖ ಬೇಡಿಕೆಗಳನ್ನು ಮುಂದಿಟ್ಟು ಆಂದೋಲನ ನಡೆಸಲಾಯಿತು.
ಈ ಸಂದರ್ಭದಲ್ಲಿ ಮನರೇಗಾ ಬಚಾವೋ ಮನವಿಯನ್ನು ಹಾವೇರಿ ಜಿಲ್ಲಾಧಿಕಾರಿಗಳ ಮುಖಾಂತರ ಮಾನ್ಯ ಗೌರವಾನ್ವಿತ ಭಾರತದ ರಾಷ್ಟ್ರಪತಿಗಳಾದ ಶ್ರೀಮತಿ ದ್ರೌಪದಿ ಮುರ್ಮು ಅವರಿಗೆ ಸಲ್ಲಿಸಲಾಯಿತು.
ಆಂದೋಲನದಲ್ಲಿ ಜಿಲ್ಲಾ ಕಾಂಗ್ರೆಸ್ ಸಮಿತಿಯ ಪದಾಧಿಕಾರಿಗಳು, ವಿವಿಧ ಘಟಕಗಳ ಮುಖಂಡರು, ಕಾರ್ಯಕರ್ತರು ಹಾಗೂ ಮನರೇಗಾ ಕಾರ್ಮಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ, ಕೇಂದ್ರ ಸರ್ಕಾರದ ನಿರ್ಲಕ್ಷ್ಯದ ವಿರುದ್ಧ ಘೋಷಣೆಗಳನ್ನು ಕೂಗಿದರು.
ವರದಿ ಬಸವರಾಜ ಎಸ್. ಎನ್ .




















