ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಸತ್ತೇಗಾಲ ಗ್ರಾಮದಲ್ಲಿ ಆದಿಶಕ್ತಿ ಮಾರಮ್ಮ ದೇವಸ್ಥಾನ ನೂತನವಾಗಿ ಜೀರ್ಣೋದ್ಧಾರ : ಕಾಂಗ್ರೆಸ್ ಯುವ ಮುಖಂಡ ಪ್ರದೀಪ್ ಕುಮಾರ್ ಭೇಟಿ,

ಕೊಳ್ಳೇಗಾಲ ತಾಲೂಕಿನ ಸತ್ತೇಗಾಲ ಗ್ರಾಮದಲ್ಲಿ ನೂತನವಾಗಿ ಜೀರ್ಣೋದ್ಧಾರಗೊಂಡ ಆದಿ ಶಕ್ತಿ ಮಾರಮ್ಮ ದೇವಸ್ಥಾನಕ್ಕೆ ಕಾಂಗ್ರೆಸ್ ಯುವ ಮುಖಂಡ ಪ್ರದೀಪ್ ಕುಮಾರ್ ಅವರು ಇಂದು ಭೇಟಿ ನೀಡಿ ದೇವಸ್ಥಾನದ ದರ್ಶನ ಪಡೆದರು, ನಂತರ
ಗ್ರಾಮಸ್ಥರಿಂದ ಯುವ ಕಾಂಗ್ರೆಸ್ ಮುಖಂಡ ಪ್ರದೀಪ್ ಕುಮಾರ್ ಗೆ ಸನ್ಮಾನ ಮಾಡಲಾಯಿತು.

ನಂತರ ಕಾಂಗ್ರೆಸ್ ಯುವ ಮುಖಂಡ ಪ್ರದೀಪ್ ಕುಮಾರ್ ರವರು ಮಾತನಾಡಿ
“ಇಂದು ನಮ್ಮ ಸತ್ತೇಗಾಲ ಗ್ರಾಮದ ಆದಿ ಶಕ್ತಿ ಮಾರಮ್ಮ ದೇವಸ್ಥಾನದ ಜೀರ್ಣೋದ್ಧಾರ ಕಾರ್ಯ ಪೂರ್ಣಗೊಂಡಿದೆ. ಈ ಐತಿಹಾಸಿಕ ದೇವಾಲಯವು ನಮ್ಮ ಸಂಸ್ಕೃತಿಯ ಬೇರುಗಳಾಗಿದ್ದು, ಎಲ್ಲರ ಸಹಕಾರದಿಂದ ಇದು ಹೊಸ ಜೀವವನ್ನು ಪಡೆದಿದೆ ಎಂದರು ನಂತರ ಮಾತನಾಡಿದ ಅವರು ಯುವಕರಾಗಿ ನಾವು ಧರ್ಮ ಮತ್ತು ಸಂಸ್ಕೃತಿಯನ್ನು ಕಾಪಾಡುವುದರ ಜೊತೆಗೆ, ಶಿಕ್ಷಣ, ಉದ್ಯೋಗ ಮತ್ತು ಸಮಾನತೆಗಾಗಿ ಹೋರಾಡಬೇಕು. ಕಾಂಗ್ರೆಸ್ ಪಕ್ಷ ಯುವ ಶಕ್ತಿಯನ್ನು ಗೌರವಿಸಿ, ಇಂತಹ ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಬೆಂಬಲ ನೀಡುತ್ತದೆ,ಈ ದೇವಾಲಯವು ನಮ್ಮ ಐಕ್ಯದ ಸಂಕೇತವಾಗಲಿ. ಎಲ್ಲರೂ ಒಗ್ಗೂಡಿ ಗ್ರಾಮದ ಅಭಿವೃದ್ಧಿಗಾಗಿ ಕೆಲಸ ಮಾಡೋಣ ಎಂದರು.

ಈ ಸಂದರ್ಭದಲ್ಲಿ ಕಾಂಗ್ರೆಸ್ ಮುಖಂಡರಾದ ವೆಂಕಟರಮಣ, ಜಗದೀಶ್,ಶಿವಕುಮಾರ್, ಗ್ರಾಮಪಂಚಾಯತಿ ಅಧ್ಯಕ್ಷರಾದ ದೇವರಾಜು, ವಿದ್ಯಾರ್ಥಿ ಕಾಂಗ್ರೆಸ್ ಅಧ್ಯಕ್ಷರಾದ ಸೃಜನ್.ಡಿ.ಕೆ, ಸುಂದರರಾಜು, ಶಿವಲಿಂಗು, ಶಿವಕುಮಾರ್ ಸ್ವಾಮಿ, ಪುಟ್ಟಣ್ಣ, ರಾಜೇಂದ್ರ ಪ್ರಸಾದ್, ಯುವ ಕಾಂಗ್ರೆಸ್ ವಿನಯ್, ಸಂಜಯ್ ಹಾಗೂ ಇತರ ಕಾಂಗ್ರೆಸ್ ಮುಖಂಡರು ಹಾಜರಿದ್ದರು.

ವರದಿ : ಉಸ್ಮಾನ್ ಖಾನ್

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ

error: Content is protected !!