ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಕಂಪ್ಲಿಯಲ್ಲಿ ಅಂಬಿಗರ ಚೌಡಯ್ಯನ ಭವ್ಯ ಮೆರವಣಿಗೆ

ಕಂಪ್ಲಿ: ಜಯಂತ್ಯೋತ್ಸದ ಹಿನ್ನಲೆ ಅಂಬಿಗರ ಚೌಡಯ್ಯ ಸಂಘ, ಕಂಪ್ಲಿ ತಾಲೂಕು ಗಂಗಾಮತ ಸಮಾಜ ಸಂಘದ ಆಶ್ರಯದಲ್ಲಿ ಭವ್ಯ ಮೆರವಣಿಗೆ ಪಟ್ಟಣದಲ್ಲಿ ಬುಧವಾರ ಜರುಗಿತು.
ಇಲ್ಲಿನ ಕಂಪ್ಲಿ-ಕೋಟೆಯ ಅಂಬಿಗರ ಚೌಡಯ್ಯ ವೃತ್ತದಿಂದ ಮೆರವಣಿಗೆ ಆರಂಭಗೊಂಡಿತು. ನಂತರ ಪಟ್ಟಣದ ನಡುವಲ ಮಸೀದಿ, ಡಾ.ರಾಜಕುಮಾರ ರಸ್ತೆ, ಅಂಬೇಡ್ಕರ್ ವೃತ್ತ, ಗಂಗಾನಗರದ ಮೂಲಕ ತಳವಾರ್ ಓಣಿಯಲ್ಲಿ ಮುಕ್ತಾಯಗೊಂಡಿತು. ಮೆರವಣಿಗೆಯಲ್ಲಿ ಮಹಿಳೆಯರ ಕುಂಭ, ಕಳಸ ಸೇರಿದಂತೆ ವಿವಿದ್ ಕಲಾ ಪ್ರಕಾರಗಳು ಪಾಲ್ಗೊಂಡಿದ್ದವು. ಧ್ವನಿವರ್ಧಕದ ಹಾಡುಗಳಿಗೆ ಯುವಕರು ಕುಣಿದು ಕುಪ್ಪಳಿಸಿದರು.
ಶಾಸಕ ಜೆ.ಎನ್.ಗಣೇಶ ಮೆರವಣಿಗೆಯಲ್ಲಿ ಭಾಗವಹಿಸಿ, ಅಂಬಿಗರ ಚೌಡಯ್ಯನ ಕೃಪೆಗೆ ಪಾತ್ರರಾದರು.
ಈ ಸಂದರ್ಭದಲ್ಲಿ ಅಂಬಿಗರ ಚೌಡಯ್ಯ ಸಂಘದ ಅಧ್ಯಕ್ಷ ಕರೇಕಲ್ ಪ್ರಕಾಶ್, ಉಪಾಧ್ಯಕ್ಷ ಅಂಬಿಗರ ಯಲ್ಲಪ್ಪ, ಗಂಗಾಮತ ಸಮಾಜದ ಅಧ್ಯಕ್ಷ ಎಲೆಗಾರ ನಾಗರಾಜ, ಮುಖಂಡರಾದ ಅಯೋಧ್ಯ ವೆಂಕಟೇಶ, ಬಿ.ರಮೇಶ, ನಡುವಿ ಮಲ್ಲಿಕಾರ್ಜುನ, ಕರೇಕಲ್ ಮನೋಹರ, ಉಡೆಗೋಳ್ ವೆಂಕಟೇಶ, ಯು.ಪರಮೇಶ್ವರ, ಕಟ್ಟೆ ಸಣ್ಣ ದುರುಗಪ್ಪ, ಯು.ಶರಣಪ್ಪ, ಯು.ವಿರುಪಣ್ಣ, ಆಟೋ ರಾಘವೇಂದ್ರ, ಎ.ರಮೇಶ, ಪಿ.ಮಂಜುನಾಥ, ಎಸ್.ಸಣ್ಣೆಪ್ಪ ಸೇರಿದಂತೆ ಅನೇಕರು ಪಾಲ್ಗೊಂಡಿದ್ದರು. ಪಿಐ ಕೆ.ಬಿ.ವಾಸುಮುಮಾರ ನೇತೃತ್ವದಲ್ಲಿ ಪೊಲೀಸ್ ಬಂದೋಬಸ್ತ್ ಏರ್ಪಡಿಸಿದ್ದರು.

ವರದಿ : ಜಿಲಾನಸಾಬ್ ಬಡಿಗೇರ್

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ

error: Content is protected !!