ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಹಿಂದುಳಿದ ಗಂಗಾಮತ ಸಮಾಜವನ್ನು ಎಸ್ ಟಿ ಗೆ ಸೇರಿಸಿ : ಮಣ್ಣೂರು ವೆಂಕಟೇಶ

ಕಂಪ್ಲಿ : ತಾಲೂಕಿನ ಸಣಾಪುರ ಗ್ರಾ. ಪಂ. ಯ ಇಟಗಿ ಗ್ರಾಮದಲ್ಲಿ ಅಂಬಿಗರ ಚೌಡಯ್ಯ ಯುವಕರ ಸಂಘ ಹಾಗೂ ಗಂಗಾಮತಸ್ಥರ ಸಂಘದ ಸಹಯೋಗದಲ್ಲಿ ನಿಜಶರಣ ಅಂಬಿಗರ ಚೌಡಯ್ಯನವರ 906ನೇ ಜಯಂತ್ಯೋತ್ಸವ ಹಿನ್ನಲೆ ಭಾವಚಿತ್ರ ಮೆರವಣಿಗೆ ಬುಧವಾರ ವಿಜೃಂಭಣೆಯಿಂದ ನಡೆಯಿತು.
ಇಲ್ಲಿನ ನದಿ ತಟದಲ್ಲಿ ಗಂಗೆಪೂಜೆ ಸಲ್ಲಿಸಿದ ನಂತರ ಆರಂಭಗೊಂಡ ಮೆರವಣಿಗೆ ಗ್ರಾಮದ ಪ್ರಮುಖ ರಸ್ತೆಗಳ ಮೂಲಕ ಶರೀಫ್ ತಾತ ಮಠದವರೆಗೆ ತೆರಳಿ, ಪುನಃ ಅಂಬಿಗರ ಚೌಡಯ್ಯ ವೃತ್ತದಲ್ಲಿ ಸಂಪನ್ನಗೊಂಡಿತು.
ಡೊಳ್ಳು ಕುಣಿತ, ಮಂಗಳವಾದ್ಯ ಹಾಗೂ ಮಹಿಳೆಯರ ಕುಂಭ, ಕಳಸ ಮೆರವು ನೀಡಿದವು.
ಅಂಬಿಗರ ಚೌಡಯ್ಯ ಯುವಕರ ಸಂಘದ ಅಧ್ಯಕ್ಷ ಮಣ್ಣೂರು ವೆಂಕಟೇಶ ಮಾತನಾಡಿ, ಗಂಗಾಮತ ಸಮುದಾಯವು ಆರ್ಥಿಕ, ಶೈಕ್ಷಣಿಕ, ಸಾಮಾಜಿಕ ಹಾಗೂ ರಾಜಕೀಯವಾಗಿ ಹಿಂದುಳಿದಿದೆ. ಆದ್ದರಿಂದ ಕೇಂದ್ರ ಮತ್ತು ರಾಜ್ಯ ಸರ್ಕಾರ ಕೂಡಲೇ ಗಂಗಾಮತಸ್ಥರನ್ನು ಪರಿಶಿಷ್ಟ ಪಂಗಡಕ್ಕೆ (ಎಸ್ ಟಿ) ಸೇರಿಸಬೇಕು. ಸಮಾಜವು ಶಿಕ್ಷಣದಲ್ಲಿ ಹಿಂದುಳಿದಿದ್ದು, ಪೋಷಕರು ಮಕ್ಕಳಿಗೆ ಒಳ್ಳೆಯ ಶಿಕ್ಷಣ ಕೊಡಿಸಿದಾಗ ಉನ್ನತ ಹುದ್ದೆಯೊಂದಿಗೆ ಸಮಾಜದ ಅಭಿವೃದ್ಧಿ ಸಾಧ್ಯವಾಗುತ್ತದೆ. ಸರ್ಕಾರವು ವಿಶೇಷ ಸೌಲಭ್ಯಗಳನ್ನು ಒದಗಿಸಬೇಕು ಎಂದರು.
ಈ ಸಂದರ್ಭದಲ್ಲಿ ಮುಖಂಡರಾದ ಎಂ.ಯಲ್ಲಪ್ಪ, ಶಾಮೀಲ್ ವಿರೇಶ, ಅಯೋಧ್ಯ ಪಕ್ಕಿರಪ್ಪ, ಉಮಾಪತಿ, ಜಂಬುನಾಥಗೌಡ, ಅಯೋಧ್ಯ ಶರಣಬಸುವ, ಸಣ್ಣ ವೆಂಕಟೇಶ, ಜಂತಕಲ್ ಮಂಜು, ದೊಡ್ಡ ವೆಂಕಟೇಶ, ಕಂಪ್ಲಿ ಶರಣ, ಎ.ನರಸಪ್ಪ, ಸೂಗೂರು ಮದಿಯಪ್ಪ ಸೇರಿದಂತೆ ಮಹಿಳೆಯರು, ಮುಖಂಡರು ಇದ್ದರು.

ವರದಿ : ಜಿಲಾನಸಾಬ್ ಬಡಿಗೇರ್

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ

error: Content is protected !!