ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಶಿವಶರಣರು ಮತ್ತು ದಾರ್ಶನಿಕ ವ್ಯಕ್ತಿಗಳ ಜಯಂತಿಗಳು ಕೆಲ ಸಮುದಾಯಗಳಿಗೆ ಮಾತ್ರ ಸೀಮಿತವಾಗಬಾರದು : ಕೆ ಎನ್ ರಾಜಣ್ಣ.

ಮಧುಗಿರಿ : ತಾಲೂಕಿನ ಹೃದಯ ಭಾಗದಲ್ಲಿರುವ ಕನ್ನಡ ಸಾಹಿತ್ಯ ಪರಿಷತ್ ಸಭಾಂಗಣದಲ್ಲಿ ನಡೆದ ಅಂಬಿಗರ ಚೌಡಯ್ಯ ಜಯಂತಿಯಲ್ಲಿ ಪಾಲ್ಗೊಂಡು ಎಲ್ಲಾ ಮಹನೀಯರ ಜಯಂತಿಗಳಲ್ಲಿ ಆಯಾ ಸಮುದಾಯದವರು ಮಾತ್ರ ಸೇರುವುದಲ್ಲದೇ ಇತರೆ ಸಮುದಾಯದವರು ಪಾಲ್ಗೊಂಡಾಗ ಮಾತ್ರ ಮಹನೀಯರ ಜಯಂತಿಗಳು ಆಚರಿಸಬೇಕು ತಾನು ಕೇವಲ ತುಂಬಿದ ಹೊಳೆಯಲ್ಲಿ ದೋಣಿಗೆ ಹುಟ್ಟುಹಾಕುವ ಅಂಬಿಗ ಮಾತ್ರವಲ್ಲ, ಭವಸಾಗರದಲ್ಲೂ ಹುಟ್ಟು ಹಾಕುವ ಕೌಶಲವುಳ್ಳವ ಎಂದು ಹೇಳಿಕೊಳ್ಳುವುದರಲ್ಲಿ ತನ್ನ ಅನುಭಾವದೃಷ್ಟಿಯನ್ನು ಪ್ರಕಟಿಸಿದ್ದರು. ಇದೇ ರೀತಿ ಎಲ್ಲರು ಜ್ಞಾನ ಮತ್ತು ಅನುಭವ ಪಸರಿಸಬೇಕು ಎಂದು ಶಾಸಕ ಕೆ.ಎನ್.ರಾಜಣ್ಣ ತಿಳಿಸಿದರು.
ಪಟ್ಟಣದ ಕನ್ನಡ ಭವನದಲ್ಲಿ ಶಾಸಕ ಕೆ.ಎನ್.ರಾಜಣ್ಣ ಸಭಾಂಗಣದಲ್ಲಿ ತಾಲ್ಲೂಕು ಆಡಳಿತ ವತಿಯಿಂದ ಅಂಬಿಗರ ಚೌಡಯ್ಯ ಜಯಂತಿ ಹಾಗೂ ಅಭಿನಯ ರಂಗ ಕೇಂದ್ರ , ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ ಮತ್ತು ಶ್ರೀ ಮಾರುತಿ ಇಂಟಿಗ್ರೇಟೆಡ್‌ ಡೆವಲಪ್‌ಮೆಂಟ್‌ ಫೌಂಡೇಶನ್ ವತಿಯಿಂದ ಸಂಕ್ರಾಂತಿ ನಾಟಕೋತ್ಸವ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅಂಬಿಗರ ಚೌಡಯ್ಯ ವಚನಗಳಲ್ಲಿ ಜೀವನದ ಸಾರವೇ ಅಡಗಿದೆ . ಅಂಬಿಗರ ಚೌಡಯ್ಯ ಅವರು ಸಮಾಜಕ್ಕೆ ಕೊಟ್ಟ ಸಂದೇಶ ಎಲ್ಲರಿಗೂ ಮಾದರಿಯಾಗಿದೆ ಎಂದರು. ಎಲ್ಲಾ ಮಹನೀಯರ ಜಯಂತಿಯನ್ನು ಎಲ್ಲಾ ಸಮುದಾದವರು ಸೇರಿಕೊಂಡು ದೇವರಾಜ್ ಅರಸು ಜನ್ಮದಿನದಂದು ಕಾರ್ಯಕ್ರಮವನ್ನು ಮಾಡಲಾಗುವುದು, ಅಭಿನಯ ರಂಗ ಕೇಂದ್ರದ ವತಿಯಿಂದ ತಾಲ್ಲೂಕಿನಲ್ಲಿ ಸಾಕಷ್ಟು ನಾಟಕಗಳನ್ನು ಆಯೋಜನೆ ಮಾಡಿ ಜನರಲ್ಲಿ ಅರಿವು ಮೂಡಿಸುವ ಜೊತೆಗೆ ನಮ್ಮ ಪರಂಪರೆಯನ್ನು ಉಳಿಸುವ ಕೆಲಸವನ್ನು ಸರ್ಕಾರದಿಂದ ನಡೆಯುವ ಮಾಡುತ್ತಿದ್ದಾರೆ ಎಂದರು.
ಬೆಂಗಳೂರು ಮಹಾನಗರ ಸಾರಿಗೆ ನಿಗಮದ ಉಪಾಧ್ಯಕ್ಷ ನಿಕೇತ್ ರಾಜ್ ಮೌರ್ಯ , ಉಪವಿಭಾಗಾಧಿಕಾರಿ ಗೋಟೂರು ಶಿವಪ್ಪ ತಹಶೀಲ್ದಾರ್ ಶ್ರೀನಿವಾಸ್, ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತು ಅಧ್ಯಕ್ಷೆ ಸಹನಾ , ಪ್ರಧಾನ ಕಾರ್ಯದರ್ಶಿಗಳಾದ ಎಂ.ಎಸ್.ಶಂಕರನಾರಾಯಣ, ರಂಗಧಾಮಯ್ಯ , ಕೋಶಾಧ್ಯಕ್ಷ ಮುನೀಂದ್ರ ಕುಮಾರ್ ಸಾಹಿತಿಗಳಾದ ಮಲ್ಲನಮೂರ್ತಿ, ಬಿದಲೋಟಿ ರಂಗನಾಥ್ , ಅಭಿನಯ ರಂಗ ಕೇಂದ್ರ ಗೌರವಾಧ್ಯಕ್ಷ ಹಾಗೂ ಪತ್ರಕರ್ತ ವೈ.ಸೋಮಶೇಖರ್, ಸರ್ಕಾರಿ ನೌಕರರ ಜಿಲ್ಲಾಧ್ಯಕ್ಷ ರಂಗಪ್ಪ, ಉಪನ್ಯಾಸಕ ಎನ್.ಮಹಾಲಿಂಗೇಶ್ , ಮುಖಂಡರಾದ ಡಿ.ಜಿ.ಶಂಕರನಾರಾಯಣ ಶೆಟ್ಟಿ , ಪಿ.ಕೆ.ರಂಗಸ್ವಾಮಿ, ಎಂ.ವಿ.ಮೂಡ್ಲಗಿರೀಶ್ , ರಂಗನಾಥ್ ಇದ್ದರು.

ವರದಿ:-ಪ್ರಸನ್ನಕುಮಾರ್. ಎಸ್. ಕೊರಟಗೆರೆ

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ

error: Content is protected !!