ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಕೊಟ್ಟೂರಿನ ಬಸ್ ನಿಲ್ದಾಣದ ಆಕರ್ಷಣೆ ಪುಸ್ತಕ ಗೂಡಿನ ಸ್ಥಳಕ್ಕೆ ಭೇಟಿ ನೀಡಿದ ಜಿ.ಪಂ ಉಪ ಕಾರ್ಯದರ್ಶಿ ಕೆ. ತಿಮ್ಮಪ್ಪ

ಕೊಟ್ಟೂರು : ಕೊಟ್ಟೂರು ತಾಲೂಕು ಹ್ಯಾಳ್ಯ ಗ್ರಾಮ ಪಂಚಾಯಿತಿಯ ಬಸ್ ನಿಲ್ದಾಣದಲ್ಲಿ ಆರಂಭಿಸಿರುವ ಪುಸ್ತಕಗೂಡಿನ ಸ್ಥಳಕ್ಕೆ ಜಿಲ್ಲಾ ಪಂಚಾಯಿತಿಯ ಮಾನ್ಯ ಉಪ ಕಾರ್ಯದರ್ಶಿಗಳು ಕೆ.ತಿಮ್ಮಪ್ಪ ಅವರು ಬುಧವಾರ ಭೇಟಿ ನೀಡಿ ವೀಕ್ಷಣೆ ಮಾಡಿದರು.
ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಯ ರಾಜೀವ್ ಗಾಂಧಿ ಫೆಲೋಶಿಪ್, ಗ್ರಾಮ ಪಂಚಾಯಿತಿಯ ನಿಧಿಯಡಿ ಗ್ರಾಮದ ಬಸ್ ನಿಲ್ದಾಣದಲ್ಲಿ ಪುಸ್ತಕ ಗೂಡನ್ನು ಕಳೆದ 2024 ರಲ್ಲಿ ಆರಂಭಿಸಲಾಗಿದೆ. ಅಲ್ಲಿಂದ ಇಲ್ಲಿಯವರೆಗೆ ಗ್ರಾಮಸ್ಥರು, ವಿದ್ಯಾರ್ಥಿಗಳು, ಹಿರಿಯರು, ಪ್ರಯಾಣಿಕರು ಪುಸ್ತಕ ಗೂಡಿನ ಸದುಪಯೋಗವನ್ನು ಪಡೆದುಕೊಳ್ಳುತ್ತಿದ್ದಾರೆ.
ಮಾನ್ಯ ಕಾರ್ಯನಿರ್ವಾಹಕ ಅಧಿಕಾರಿಗಳಾದ ಶ್ರೀ ಡಾ.ಬಾಳಪ್ಪನವರ ಆನಂದಕುಮಾರ ಅವರ ನಿರ್ದೇಶನದಂತೆ ಪುಸ್ತಕ ಗೂಡಿನ‌ ಸಂರಕ್ಷಣೆಗಾಗಿ ತಾಲೂಕು ಪಂಚಾಯಿತಿಯ ಅನುದಾನದಡಿ ಸಿಸಿಟಿವಿ ಅಳವಡಿಸಲಾಗಿದೆ.
ನಿನ್ನೆ ಜಿಲ್ಲಾ ಪಂಚಾಯಿತಿಯ ಉಪಕಾರ್ಯದರ್ಶಿಗಳು ಮಾನ್ಯ ಶ್ರೀ ಕೆ.ತಿಮ್ಮಪ್ಪ ಅವರು ವೀಕ್ಷಿಸಿದರು. ಬಳಿಕ ಅರಿವು ಕೇಂದ್ರಕ್ಕೆ ಭೇಟಿ ನೀಡಿ ಮೂಲಸೌಕರ್ಯಗಳ ಬಗ್ಗೆ ಚರ್ಚಿಸಿದರು. ವೈಫೈ ಬ್ರಾಡ್ ಬ್ಯಾಂಡ್ ವ್ಯವಸ್ಥೆ ಕಲ್ಪಿಸುವಂತೆ ಪಿಡಿಒರವರಿಗೆ ಸೂಚಿಸಿದರು.

ಈ ಸಂದರ್ಭದಲ್ಲಿ ಜಿ.ಪಂನ ಅಧಿಕಾರಿಗಳಾದ ಶ್ರೀ ಲೋಕೇಶ್ ಬಾಬು, ಎಡಿಪಿಸಿ ಶ್ರೀ ಬಸವರಾಜ್, ಗ್ರಾಪಂ ಅಭಿವೃದ್ಧಿ ಅಧಿಕಾರಿ ಶ್ರೀ ಸಿಎಚ್ ಎಂ ಗಂಗಾಧರ್, ಗ್ರಂಥಪಾಲಕರಾದ ಶ್ರೀ ಬಿ.ಲೋಕೇಶ್, ಗ್ರಾ.ಪಂ ಸಿಬ್ಬಂದಿ ಇದ್ದರು.

ವರದಿ : ಜಿಲಾನಸಾಬ್ ಬಡಿಗೇರ್

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ

error: Content is protected !!