ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಪೌತಿ ಆಂದೋಲನದ ಸದುಪಯೋಗಪಡಿಸಿಕೊಳ್ಳಿ : ಕಂದಾಯ ನಿರೀಕ್ಷಕ ಜಗದೀಶ

ಕಂಪ್ಲಿ: ಗ್ರಾಮೀಣ ಭಾಗದ ರೈತರ ಜಮೀನು ಹಕ್ಕನ್ನು ಭದ್ರಪಡಿಸಲು ಸರ್ಕಾರ ಪೌತಿ ಆಂದೋಲನ ಹಮ್ಮಿಕೊಂಡಿದ್ದು, ರೈತರು ಇದರ ಸದುಪಯೋಗ ಪಡೆಯಬೇಕು’ ಎಂದು ಕಂದಾಯ ನಿರೀಕ್ಷಕ ಜಗದೀಶ ಹೇಳಿದರು.
ತಾಲೂಕಿನ ದೇವಲಾಪುರ ಗ್ರಾಮದ ಗ್ರಾಪಂಯ ಕಛೇರಿಯಲ್ಲಿ ಗುರುವಾರ ಹಮ್ಮಿಕೊಂಡ ಪೌತಿ, ವಾರಸಾ ಖಾತಾ ಆಂದೋಲನ ಕಾರ್ಯಕ್ರಮದಲ್ಲಿ ಮಾತನಾಡಿ, ‘ಸಾಲ ಸೌಲಭ್ಯ, ವಿಮೆ ಪರಿಹಾರ ಸೇರಿದಂತೆ ಸರ್ಕಾರದ ಪ್ರತಿಯೊಂದು ಸೌಲಭ್ಯ ಪಡೆಯಲು ಅವಶ್ಯಕವಾದ ಪೌತಿ ಖಾತೆಯನ್ನು ಸರ್ಕಾರ ಆಂದೋಲನದ ಮೂಲಕ ರೈತರಿಗೆ ನೀಡುತ್ತಿದ್ದು, ಮೃತ ರೈತರ ವಾರಸುದಾರರು ಕೂಡಲೇ ತಮ್ಮ ಜಮೀನುಗಳ ದಾಖಲಾತಿಗಳನ್ನು ವರ್ಗಾಯಿಸಿಕೊಳ್ಳಬೇಕು’ ಎಂದರು.
ಗ್ರಾಮ ಆಡಳಿತಾಧಿಕಾರಿ ಅಬ್ದುಲ್ ಮಾತನಾಡಿ, ‘ತಕರಾರು ಹಾಗೂ ಕಾನೂನು ತೊಡಕು ಇದ್ದ ಜಮೀನುಗಳನ್ನು ಹೊರತುಪಡಿಸಿ ಉಳಿದ ಎಲ್ಲಾ ರೈತರು ತಮ್ಮ ಜಮೀನುಗಳ ಖಾತೆಗಳನ್ನು ಸರಿಪಡಿಸಿಕೊಳ್ಳಬೇಕು’. ಸರ್ಕಾರದ ಈ ಯೋಜನೆಯ ಮೂಲಕ ಜಮೀನುಗಳ ತೊಡಕನ್ನು ನಿವಾರಿಸಿಕೊಂಡು, ಸರಿಪಡಿಸಿಕೊಳ್ಳಲು ರೈತರು ಮುಂದಾಗಬೇಕು. ಇಲ್ಲಿನ ಅಭಿಯಾನದಲ್ಲಿ ಇ ಪೋತಿಗೆ ಸಂಬಂಧಿಸಿದಂತೆ 20 ಅರ್ಜಿಗಳು ಬಂದಿದ್ದಾರೆ. 6 ಅರ್ಹ ಪೋತಿ ಹಾಗೂ 6 ಪಿಂಚಣಿ ಅರ್ಜಿಗಳು ಬಂದಿವೆ ಎಂದರು.
ಗ್ರಾಮ ಪಂಚಾಯಿತಿ ಅಧ್ಯಕ್ಷೆ ಈರಮ್ಮ ಪೂಜಾರಿ ಅಧ್ಯಕ್ಷತೆವಹಿಸಿದ್ದರು. ಈ ಸಂದರ್ಭದಲ್ಲಿ ಗ್ರಾಪಂ ಉಪಾಧ್ಯಕ್ಷ ನಾಗರಾಜ, ಗ್ರಾಮ ಆಡಳಿತಾಧಿಕಾರಿ ಜಿಲಾನಸಾಬ್ ಸೇರಿದಂತೆ ಸದಸ್ಯರು, ರೈತರು ಇದ್ದರು.

ವರದಿ : ಜಿಲಾನಸಾಬ್ ಬಡಿಗೇರ್

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ

error: Content is protected !!