ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಪ್ರಜಾಪ್ರಭತ್ವದ ರಚನೆಗಾಗಿ ಮತದಾನದ ಪಾತ್ರ ಅತಿಮುಖ್ಯವಾಗಿದೆ : ತಹಶೀಲ್ದಾರ್ ಜೂಗಲ್ ಮಂಜುನಾಯಕ

ಕಂಪ್ಲಿ: ಪ್ರಜಾಪ್ರಭುತ್ವದ ರಚನೆಗಾಗಿ ಮತದಾನದ ಪಾತ್ರ ಅತಿಮುಖ್ಯವಾಗಿದೆ ಎಂದು ತಹಶೀಲ್ದಾರ್ ಜೂಗಲ್ ಮಂಜುನಾಯಕ ಹೇಳಿದರು.
ಪಟ್ಟಣದ ತಹಶೀಲ್ದಾರ್ ಕಛೇರಿಯ ಸಭಾಂಗಣದಲ್ಲಿ ಭಾನುವಾರ ಹಮ್ಮಿಕೊಂಡಿದ್ದ ರಾಷ್ಟ್ರೀಯ ಮತದಾರರ ದಿನದ ಕಾರ್ಯಕ್ರಮದ ಅಧ್ಯಕ್ಷತೆವಹಿಸಿ ಹಾಗೂ ಪ್ರತಿಜ್ಞಾವಿಧಿ ಬೋಧಿಸಿದ ನಂತರ ಮಾತನಾಡಿ, ದೇಶದಲ್ಲಿ ಉತ್ತಮ ಸಮಾಜ ನಿರ್ಮಾಣ ಮಾಡುವುದು ಪ್ರತಿಯೊಬ್ಬ ಮತದಾರರ ಕೈಯಲ್ಲಿದೆ. ಆದ್ದರಿಂದ ರಾಷ್ಟ್ರೀಯ ಮತದಾರರ ದಿನದಲ್ಲಿ ಪ್ರತಿಜ್ಞಾ ವಿಧಿ ಬೋಧಿಸಿದ್ದು, ಜನರು ಮತದಾನದ ಜಾಗೃತಿ ಹೊಂದಬೇಕು ಎಂದರು. ಕನ್ನಡ ಪ್ರಬಂಧ ಸ್ಪರ್ಧೆಯಲ್ಲಿ ಪ್ರಥಮ, ದ್ವಿತೀಯ, ತೃತೀಯ ಸ್ಥಾನಗಳಿಸಿದ ವಿವಿಧ ಕಾಲೇಜುಗಳ ವಿದ್ಯಾರ್ಥಿಗಳಿಗೆ ಪ್ರಮಾಣ ಪತ್ರ ವಿತರಿಸಿದರು.
ಈ ಸಂದರ್ಭದಲ್ಲಿ ತಾ. ಪಂ ಇಒ ಆರ್.ಕೆ.ಶ್ರೀಕುಮಾರ, ಶಿರಸ್ತೇದಾರರಾದ ಪಂಪಾಪತಿ, ರಮೇಶ, ಮುಖಂಡರಾದ ಎ.ಹನುಮಂತಪ್ಪ, ಕೆ.ಶ್ರೀನಿವಾಸ, ಪಾಂಡುರಂಗ, ಎ.ಅಂಜಿನಪ್ಪ, ಹೆಚ್.ಈರಣ್ಣ, ಜಿ.ಎಚ್.ಗಾದಿಲಿಂಗ, ಕೆ.ಆನಂದ, ಕೆ.ಗೋಪಾಲ ಸೇರಿದಂತೆ ಇತರರು ಇದ್ದರು.

ವರದಿ : ಜಿಲಾನಸಾಬ್ ಬಡಿಗೇರ್

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ

error: Content is protected !!