ಕೊಪ್ಪಳ : ಕರ್ನಾಟಕ ಲಲಿತಕಲಾ ಅಕಾಡೆಮಿಯ ಕಲಾವಿದರ ಸಾಕ್ಷ್ಯಚಿತ್ರ ಹಾಗೂ ಇ-ಬುಕ್ ಬಿಡುಗಡೆ ಮತ್ತು ಪ್ರತಿಭಾನ್ವೇಷಣೆಯ ಕಲಾಶಿಬಿರದಲ್ಲಿ ರಚಿತವಾದ ಕಲಾಕೃತಿಗಳ ಪ್ರದರ್ಶನ ಕಾರ್ಯಕ್ರಮವನ್ನು ನಾಳೆ 26-01-2026 ರಂದು ಮಧ್ಯಾಹ್ನ 12 ಗಂಟೆಗೆ ಕೊಪ್ಪಳ ಶ್ರೀ ಗವಿಮಠದ ಹತ್ತಿರ ಇರುವ ಮಾಸ್ತಿ ಪಬ್ಲಿಕ್ ಸ್ಕೂಲ್ ನಲ್ಲಿ ಏರ್ಪಡಿಸಲಾಗಿದೆ.
ಕನ್ನಡ ಮತ್ತು ಸಂಸ್ಕೃತಿ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಮತ್ತು ಜಿಲ್ಲಾ ಉಸ್ತುವಾರಿ ಸಚಿವರಾದ ಸನ್ಮಾನ್ಯ ಶ್ರೀ ಶಿವರಾಜ್ ಎಸ್ ತಂಗಡಗಿ ಅವರು ಉದ್ಘಾಟಿಸಲಿದ್ದಾರೆ.
ಲಲಿತಕಲಾ ಅಕಾಡೆಮಿಯ ಅಧ್ಯಕ್ಷ ಶ್ರೀ ಪ ಸ ಕುಮಾರ ಹಾಗೂ ಅನೇಕ ಗಣ್ಯರು ಪಾಲ್ಗೊಳ್ಳಲಿದ್ದಾರೆ.
ಇದೇ ಸಂದರ್ಭದಲ್ಲಿ ಬಾಲ ಪ್ರತಿಭೆ ಕುಮಾರಿ ಸಿಂಚನ ತಿರುಪತಿ ಶಿವನಗುತ್ತಿ ಇವರ ಹೊಸ ಚಿಗುರು ಚಿತ್ರಕಲಾ ಪ್ರದರ್ಶನ ನಡೆಯಲಿದೆ. ತಾವೆಲ್ಲರೂ ಆಗಮಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕೆಂದು ಕೇಳಿಕೊಳ್ಳುತ್ತೇನೆ ಎಂದು
ವೆಂಕಟೇಶ್ ಬಡಿಗೇರ ಸದಸ್ಯ ಸಂಚಾಲಕರು
ಕರ್ನಾಟಕ ಲಲಿತಕಲಾ ಅಕಾಡಮಿ ಬೆಂಗಳೂರು ಇವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
- ಕರುನಾಡ ಕಂದ ಪತ್ರಿಕೆ




















