ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಚಿಕ್ಕಮಗಳೂರು : ಬಲಿ ಪಡೆದುಕೊಳ್ಳಲು ಕಾಯುತ್ತಿರುವ ಸೇತುವೆ.

ಚಿಕ್ಕಮಗಳೂರು ಜಿಲ್ಲೆಯ ಕೊಪ್ಪ ತಾಲೂಕು ಹರಿಹರಪುರ ಹೋಬಳಿಯ ಹಾಲುಮುತ್ತುರ್ ಸಮೀಪ ಕೊಪ್ಪ ಮತ್ತು ಕಮ್ಮರಡಿಯ ರಾಜ್ಯ ಹೆದ್ದಾರಿಯಲ್ಲಿ ಕಿರಿದಾದ ಸೇತುವೆ ಅಪಾಯಕ್ಕೆ ಬಾಯಿ ತೆರೆದು ಕುಳಿತಿದೆ. ದಿನನಿತ್ಯ ಸಾವಿರಾರು ವಾಹನಗಳು ಆ ರಸ್ತೆ ಹಾಗೂ ಸೇತುವೆ ಮೇಲೆ ಸಂಚರಿಸುತ್ತಿದ್ದು, ದಿನನಿತ್ಯ ನೂರಾರು ಜನ ಆ ಸೇತುವೆ ಮೇಲೆ ಪ್ರಯಾಣಿಸುತ್ತಿದ್ದು ದಿನನಿತ್ಯ ಜನಪ್ರತಿನಿಧಿಗಳು ಸಹ ಓಡಾಡುತ್ತಿದ್ದರೂ ನೋಡಿಯೂ ಹಗಲು ಕುರುಡರಂತೆ ವರ್ತಿಸುತ್ತಿದ್ದಾರೆ, ಶಾಸಕರು ಹಾಗೂ ಮಾಜಿ ಶಾಸಕರು ತುಂಬಾ ಸಲ ಓಡಾಡಿದ್ದು, ಯಾವತ್ತೂ ಸಹ ಆ ಸೇತುವೆ ಪರಿಸ್ಥಿತಿಯನ್ನು ಅವರು ಅವಲೋಕಿಸಲೇ ಇಲ್ಲ ಯಾಕೆಂದರೆ ಬಡ ಜೀವಗಳ ಬಲಿ ತೆಗೆದುಕೊಳ್ಳುವವರೆಗೂ ಅವರಿಗೆ ಕಣ್ಣಿಗೆ ಕಾಣಿಸುವುದಿಲ್ಲ ಹಾಗೂ ಕಿವಿಗೂ ಕೇಳಿಸುವುದಿಲ್ಲ. ಯಾಕೆಂದರೆ ಅದರಿಂದ ಅಪಾಯವಾದಾಗ ಅಲ್ಲಿ ಬಡ ಜೀವಗಳು ಹೋದಾಗ ರಾಜಕೀಯ ಲಾಭ ಉತ್ತಮವಾಗುತ್ತದೆ ಎಂದು ತಿಳಿದುಕೊಂಡಿದ್ದಾರೆ, ಆದರೆ ಊರಿನ ಜನರು ಎಷ್ಟೇ ಮನವಿ ಮಾಡಿಕೊಂಡರು ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳು ಜಾಣ ಕುರುಡರಂತೆ ವರ್ತಿಸುತ್ತಿದ್ದಾರೆ. ಆದ್ದರಿಂದ ಇದಕ್ಕೆ ಸಂಬಂಧಪಟ್ಟ ಅಧಿಕಾರಿಗಳು ಕೂಡಲೇ ಎಚ್ಚೆತ್ತುಕೊಂಡು ಸರಿಯಾದ ಕ್ರಮ ಕೈಗೊಳ್ಳಬೇಕಾಗಿ ಗ್ರಾಮದ ಜನರು ವಿನಂತಿಸಿದ್ದಾರೆ. ಹೀಗೆ ಮುಂದುವರೆದರೆ ಉಗ್ರ ಹೋರಾಟ ಮಾಡಬೇಕಾಗುತ್ತದೆ ಎಂದು ಸಹ ಗ್ರಾಮದ ಜನರು ಹೇಳುತ್ತಿದ್ದಾರೆ.

ವರದಿ ಪ್ರಸಾದ್ ಎಚ್‌ ಬಿ, ತೀರ್ಥಹಳ್ಳಿ.

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ

error: Content is protected !!