ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಸಂಭ್ರಮದ 77 ನೇಯ ಗಣರಾಜ್ಯೋತ್ಸವ : ಮಕ್ಕಳ ಕಲಿಕೆಗೆ ನೋಟಬುಕ್ ವಿತರಣೆ

ಗುರುಮಠಕಲ್: ಪಟ್ಟಣದ ನಾರಾಯಣಪುರ ಬಡಾವಣೆಯ ಸರಕಾರಿ ಭಾಷಾ ಅಲ್ಪಸಂಖ್ಯಾತರ ಹಿರಿಯ ಪ್ರಾಥಮಿಕ ಶಾಲೆಯಲ್ಲಿ 77 ನೇ ಗಣರಾಜ್ಯೋತ್ಸವವನ್ನು ಅದ್ದೂರಿಯಾಗಿ ಆಚರಣೆ ಮಾಡಲಾಯಿತು.
ಈ ಸಂದರ್ಭದಲ್ಲಿ ಎಸ್ ಡಿ ಎಂ ಸಿ ಅಧ್ಯಕ್ಷ ಅಯಾಝ್ ಅಲಿ ಮಕ್ಕಳಿಗೆ ಒಳ್ಳೆಯ ವಿದ್ಯಾಭ್ಯಾಸಕ್ಕಾಗಿ ನೋಟ್ ಬುಕ್ ಮತ್ತು ಪೆನ್ ವಿತರಿಸಿದ ಬಳಿಕ ಮಾತನಾಡಿದ ಅವರು ಭಾರತದ ಏಕತೆ, ಶಾಂತಿ ಮತ್ತು ಸಮೃದ್ಧಿಗಾಗಿ ಶ್ರಮಿಸಿದ ಮಹನೀಯರನ್ನು ಗೌರವದಿಂದ ಸ್ಮರಿಸೋಣ. ಸಶಕ್ತ ಸಂವಿಧಾನವನ್ನು ನಮಗೆ ನೀಡಿದ, ಅದನ್ನು ರೂಪಿಸಲು ಶ್ರಮಿಸಿದ ಎಲ್ಲಾ ಧೀಮಂತ ನಾಯಕರ ತ್ಯಾಗ ಬಲಿದಾನಗಳನ್ನು ನೆನೆಯುತ್ತಾ, ಸದೃಢ ಗಣತಂತ್ರ ರಾಷ್ಟ್ರ ನಿರ್ಮಾಣದ ಸಂಕಲ್ಪ ಮಾಡೋಣ,ವಿಶ್ವದ ಅತಿ ದೊಡ್ಡ ಪ್ರಜಾಪ್ರಭುತ್ವ ರಾಷ್ಟ್ರವಾಗಿ ರೂಪಿಸಿದ ಗಣರಾಜ್ಯೋತ್ಸವ ಭಾರತೀಯರ ಪಾಲಿಗೆ ಹೆಮ್ಮೆಯ ದಿನ. ಇದು ಕೇವಲ ಆಚರಣೆ ಅಲ್ಲ. ಸಂವಿಧಾನ ಜಾರಿಗೆ ಬಂದ ದಿನವನ್ನು ಗೌರವಿಸಿ ಅವರ ತತ್ವಗಳನ್ನು ಅಳವಡಿಸಿಕೊಳ್ಳಬೇಕು ಎಂದು ಹೇಳಿದರು.
ಇದೇ ಸಂದರ್ಭದಲ್ಲಿ ಎಸ್ ಡಿ ಎಂ ಸಿ ಉಪಾಧ್ಯಕ್ಷ ನಾರಾಯಣ, ಶಾಲಾ ಮುಖ್ಯಗುರುಗಳಾದ ಶ್ರೀಮತಿ ಅನುರಾಧ ಶಾಲಾ ಸಿಬ್ಬಂದಿಯವರಾದ ಕು.ಜಯಂತಿ, ಶ್ರೀ ಮಕ್ತಾರ್ ಅಹ್ಮದ್, ಮಸರಾದ ಬೇಗಂ, ಮಹಮದ್ ಆರೀಫ್ ಶಾಲೆ ಮಕ್ಕಳು ಸೇರಿದಂತೆ ಇನ್ನಿತರ ಮುಖಂಡರು ಭಾಗಿಯಾಗಿದ್ದರು.

ವರದಿ: ಕರುನಾಡ ಕಂದ

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ

error: Content is protected !!