ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ರಾಜ್ಯದಲ್ಲಿ ಮತ್ತೊಂದು ದುರಂತ: ನಡುರಸ್ತೆಯಲ್ಲೇ ಹೊತ್ತಿ ಉರಿದ ಖಾಸಗಿ ಸ್ಲೀಪರ್​​ ಬಸ್

ಶಿವಮೊಗ್ಗ : ಚಿತ್ರದುರ್ಗದ ಬಳಿ ನಡೆದ ಬಸ್​​ ದುರಂತ ಮಾಸುವ ಮುನ್ನವೇ ಮತ್ತೊಂದು ಅವಘಡ ನಡೆದಿದೆ. ಆಕಸ್ಮಿಕವಾಗಿ ಕಾಣಿಸಿಕೊಂಡಿದ್ದ ಬೆಂಕಿಯಿಂದ ಖಾಸಗಿ ಸ್ಲೀಪರ್​​ ಬಸ್ಸೊಂದು ಸಂಪೂರ್ಣವಾಗಿ ಅಗ್ನಿಗೆ ಆಹುತಿಯಾಗಿರುವ ಘಟನೆ ಶಿವಮೊಗ್ಗ ಜಿಲ್ಲೆ ಹೊಸನಗರ ತಾಲೂಕಿನ ಸೂಡುರು ಬಳಿ ನಡೆದಿದೆ. ನಿಟ್ಟೂರಿಂದ ಬೆಂಗಳೂರಿಗೆ ಹೊರಟಿದ್ದ ಅನ್ನಪೂರ್ಣೇಶ್ವೇರಿ ಟ್ರಾವಲ್ಸ್​​ಗೆ ಸೇರಿದ ಖಾಸಗಿ ಬಸ್​​​ನಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಈ ವೇಳೆ ಬಸ್​​ ನಿಲ್ಲಿಸಲು ಚಾಲಕ ಮುಂದಾದಾಗ ಮರಕ್ಕೆ ಡಿಕ್ಕಿಯಾಗಿದೆ. ಬಸ್​​ನಲ್ಲಿದ್ದ 36 ಪ್ರಯಾಣಿಕರು ಕೂಡಲೇ ಕೆಳಗಿಳಿದ ಪರಿಣಾಮ ಭಾರೀ ಅನಾಹುತವೊಂದು ತಪ್ಪಿದೆ. ಘಟನೆಯಲ್ಲಿ 4-5 ಪ್ರಯಾಣಿಕರಿಗೆ ಸುಟ್ಟ ಗಾಯಗಳಾಗಿದ್ದು, ಗಾಯಾಳುಗಳನ್ನು ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ಶಿಫ್ಟ್ ಮಾಡಲಾಗಿದೆ.

ವರದಿ : ಜಿಲಾನಸಾಬ್ ಬಡಿಗೇರ್

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ

error: Content is protected !!