ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಜಡೆಮುನೇಶ್ವರ ಹಾಗೂ ರಾಜ ಮುನೇಶ್ವರ ದೇವಸ್ಥಾನದ ಕುಂಭಾಭಿಷೇಕ ಹಾಗೂ ಉದ್ಘಾಟನೆ

ಮಲೆಮಹದೇಶ್ವರ ಬೆಟ್ಟದ ತಪ್ಪಲಿನಲ್ಲಿ ವಾಸಿಸುವ ನಿಮಗೆಲ್ಲಾ ಸರ್ಕಾರದಿಂದ ಅಗತ್ಯ ಮೂಲಭೂತ ಸೌಲಭ್ಯಗಳು ದೊರಕಿಸಿಕೊಡುವ ನಿಟ್ಟಿನಲ್ಲಿ ನಾನು ಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆ ಎಂದು ಎಂ. ಆರ್. ಮಂಜುನಾಥ್ ತಿಳಿಸಿದರು.

ತಾಲ್ಲೂಕಿನ ಮಲೆ ಮಹದೇಶ್ವರ ಬೆಟ್ಟದಲ್ಲಿ ಜಡೆಮುನೇಶ್ವರ ಹಾಗೂ ರಾಜ ಮುನೇಶ್ವರ ದೇವಸ್ಥಾನದ ಕುಂಭಾಭಿಷೇಕ ಹಾಗೂ ಉದ್ಘಾಟನೆಯನ್ನು ನೆರವೇರಿಸಿ ಅವರು ಮಾತನಾಡಿ ಹನೂರು ವಿಧಾನಸಭಾ ಕ್ಷೇತ್ರವು ಭೌಗೋಳಿಕವಾಗಿ ವಿಸ್ತೀರ್ಣವಾಗಿದ್ದು ಮತದಾರರು ನನಗೆ ನೀಡಿರುವ ಈ ಅವಕಾಶವನ್ನು ಸದುಪಯೋಗ ಮಾಡಿಕೊಂಡು ಈ ಭಾಗದಲ್ಲಿ ಜನರ ಋಣ ತೀರಿಸಲು ಶ್ರಮಿಸುತ್ತಿದ್ದೇನೆ ಎಂದರಲ್ಲದೇ ಈ ದಿನ ಕೆ‌ ಶಿವರಾಂ ಅವರನ್ನು ನೆನೆಯುತ್ತಿದ್ದು ಅವರು ಡಾ‌. ಬಿ. ಆರ್. ಅಂಬೇಡ್ಕರ್ ಅವರ ಆದರ್ಶಗಳನ್ನು ಮೈಗೊಡಿಸಿಕೊಂಡು ಕರ್ತವ್ಯ ನಿರ್ವಹಿಸುತ್ತಿದ್ದರು ಹಾಗೇ ಪೋಷಕರು ಕೆ. ಶಿವರಾಂ ಅವರನ್ನು ನಿಮ್ಮ ಮಕ್ಕಳಲ್ಲಿ ಕಾಣುವ ಮೂಲಕ ಉತ್ತಮ ವಿದ್ಯಾಭ್ಯಾಸ ಕೊಡಿಸಿ ಉನ್ನತ ಹುದ್ದೆಗಳನ್ನು ಅಲಂಕಾರಿಸುವ ಮೂಲಕ ದೇಶದ ಸೇವೆ ಮಾಡಲು ಸ್ಪೂರ್ತಿ ನೀಡಬೇಕು ಎಂದರಲ್ಲದೇ ಇಂತಹ ಕಾರ್ಯಕ್ರಮಗಳು ಹೆಚ್ಚು ನಡೆಯಬೇಕು ಈ ಕಾರ್ಯಕ್ರಮದಲ್ಲಿ ಭಾಗವಹಿಸಿರುವುದು ನನ್ನ ಪುಣ್ಯ ಎಂದರು.

ಇದೆ ಸಮಯದಲ್ಲಿ ಊರಿಲಿಂಗ ಪೆದ್ದಿ ಮಠದ ಜ್ಞಾನ ಪ್ರಕಾಶ ಸ್ವಾಮಿಗಳ ಜೊತೆಗೂಡಿಸಾಲೂರು ಬೃಹನ್ ಮಠದ ಶಾಂತ ಮಲ್ಲಿಕಾರ್ಜುನ ಸ್ವಾಮಿಗಳು, ಚಲುವಾದಿ ಮಹಾ ಸಭಾದ ರಾಜ್ಯಾಧ್ಯಕ್ಷೆ ವಾಣಿ ಶಿವರಾಮ್, ಸಂಸ್ಥಾನ ಮಠದ ಬಸವನಾಗಿ ದೇವಾ ಸ್ವಾಮಿಗಳು, ಪ್ರಾಧಿಕಾರದ ಕಾರ್ಯದರ್ಶಿ ರಘು,ಚಾಮುಲ್ ಅಧ್ಯಕ್ಷರಾದ ನಂಜುಂಡಸ್ವಾಮಿ, ಮಾನಸ ಶಿಕ್ಷಣ ಸಂಸ್ಥೆಯ ಕಾರ್ಯದರ್ಶಿ ದತ್ತೆಶ್ ಕುಮಾರ್, ಮಾಜಿ ಜಿಲ್ಲಾ ಪಂಚಾಯತ್ ಉಪಾಧ್ಯಕ್ಷರಾದ ದೀಪಕ್,ಕೃಷಿ ಪತ್ತಿನ ಸಹಕಾರ ಸಂಘದ ನಿರ್ದೇಶಕರಾದ ಮಂಜೇಶ್ ಗೌಡ, ಚಲುವಾದಿ ಮಹಾಸಭಾದ ರಾಜ್ಯ ಉಪಾಧ್ಯಕ್ಷರಾದ ಅಣಗಳ್ಳಿ ಬಸವರಾಜು, ಮಲೆ ಮಹದೇಶ್ವರ ಬೆಟ್ಟದ ಗ್ರಾಮ ಪಂ. ಅಧ್ಯಕ್ಷರಾದ ಅರ್ಚನಾ, ಪೊನ್ನಾಚಿ ಗ್ರಾಮ ಪಂ ಸದಸ್ಯ ಡಿ ಕೆ ರಾಜು, ಮುಖಂಡರುಗಳಾದ ವಿಜಯ್ ಕುಮಾರ್, ಶಿವರಾಮು, ಲೋಕೋಪಯೋಗಿ ಇಲಾಖೆಯ ಎಇಇ ಚಿನ್ನಣ್ಣ, ಸೇರಿದಂತೆ ಇನ್ನಿತತರು ಇದ್ದರು.

ವರದಿ ಉಸ್ಮಾನ್ ಖಾನ್

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ

error: Content is protected !!