ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಜ.31 ರಂದು ಮಧ್ಯಸ್ಥಿಕೆ ಕೇಂದ್ರ ಉದ್ಘಾಟನೆ

ಬಳ್ಳಾರಿ : ಜಿಲ್ಲಾಡಳಿತ, ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗ ಮತ್ತು ಜಿಲ್ಲಾ ನ್ಯಾಯವಾದಿಗಳ ಸಂಘ ಇವರ ಸಂಯುಕ್ತಾಶ್ರಯದಲ್ಲಿ ಜ. 31 ರಂದು ಬೆಳಿಗ್ಗೆ 10.30 ಗಂಟೆಗೆ ನಗರದ ರೈಲ್ವೇ ನಿಲ್ದಾಣ ಎದುರುಗಡೆಯ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಬಳ್ಳಾರಿ ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗದ ಮಧ್ಯಸ್ಥಿಕೆ ಕೇಂದ್ರದ ನೂತನ ಕಟ್ಟಡದ ಉದ್ಘಾಟನಾ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಕರ್ನಾಟಕ ರಾಜ್ಯ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗದ ಅಧ್ಯಕ್ಷರಾದ ನ್ಯಾಯಮೂರ್ತಿ ಟಿ.ಜಿ ಶಿವಶಂಕರೇಗೌಡ ಅವರು ಉದ್ಘಾಟನೆ ನೆರವೇರಿಸುವರು.
ಮುಖ್ಯ ಅತಿಥಿಗಳಾಗಿ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷರೂ ಆದ ಕೆ.ಜಿ. ಶಾಂತಿ, ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿ ನಾಗೇಂದ್ರ ಪ್ರಸಾದ್.ಕೆ., ಕರ್ನಾಟಕ ರಾಜ್ಯ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗದ ರಿಜಿಸ್ಟ್ರಾ‌ರ್ ಮತ್ತು ಆಡಳಿತಾಧಿಕಾರಿ ಮಲ್ಲಿಕಾರ್ಜುನ ಈಶ್ವರಪ್ಪ ಕಮತಗಿ, ಜಿಲ್ಲಾ ವಕೀಲರ ಸಂಘದ ಅಧ್ಯಕ್ಷ ಪಿ.ರಾಮಬ್ರಹ್ಮಂ, ರಾಜ್ಯ ವಕೀಲರ ಪರಿಷತ್ತಿನ ಸದಸ್ಯರಾದ ಕೆ.ಕೋಟೇಶ್ವರ ರಾವ್, ಜೆ.ಎಂ. ಅನಿಲ್ ಕುಮಾರ್, ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗದ ಮಹಿಳಾ ಸದಸ್ಯರಾದ ಮಾರ್ಲಾ ಶಶಿಕಲಾ, ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗದ ಅಧ್ಯಕ್ಷ ಎನ್‌.ತಿಪ್ಪೇಸ್ವಾಮಿ ಸೇರಿದಂತೆ ಸಿಬ್ಬಂದಿ ವರ್ಗ ಹಾಗೂ ಇತರರು ಉಪಸ್ಥಿತರಿರುವರು ಎಂದು ಪ್ರಕಟಣೆ ತಿಳಿಸಿದೆ.

ವರದಿ : ಜಿಲಾನಸಾಬ್ ಬಡಿಗೇರ್

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ

error: Content is protected !!