
ಬಳ್ಳಾರಿ : ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಮೆಟ್ರಿಕ್ ನಂತರದ ವಿದ್ಯಾರ್ಥಿಗಳಿಗೆ ಶುಲ್ಕ ಮರುಪಾವತಿ ಕಾರ್ಯಕ್ರಮದಡಿ 2020-21, 2021-22, 2022-23, 2023-24, 2024-25 ಮತ್ತು 2025-26 ನೇ ಸಾಲಿನಲ್ಲಿ ವಿದ್ಯಾರ್ಥಿವೇತನಕ್ಕಾಗಿ ಅರ್ಜಿ ಸಲ್ಲಿಸಿ ಸೂಕ್ತ ದತ್ತಾಂಶ ಲಭ್ಯವಿಲ್ಲದೇ ಪಾವತಿ ಮಾಡಲು ಬಾಕಿ ಇರುವ ವಿದ್ಯಾರ್ಥಿಗಳಿಗೆ ವಿಳಂಬವಾಗುತ್ತಿದ್ದು, ವಿದ್ಯಾರ್ಥಿಗಳು ತಮ್ಮ ಆಧಾರ್, ಕೌನ್ಸೆಲಿಂಗ್ ವಿವರ ಹಾಗೂ ಹಿಂದಿನ ಶೈಕ್ಷಣಿಕ ವರ್ಷದ ಫಲಿತಾಂಶ ದತ್ತಾಂಶದ ಮಾಹಿತಿ ನವೀಕರಿಸಿಕೊಳ್ಳಬೇಕು.
ಬಳ್ಳಾರಿ ಜಿಲ್ಲೆಯ ವಿದ್ಯಾರ್ಥಿಗಳ ಗಮನಕ್ಕೆ: ನಿಮ್ಮ SSP ಲಾಗಿನ್ ಪರಿಶೀಲಿಸಿ
ದತ್ತಾಂಶ ಅಪ್ ಡೇಟ್ ಮಾಡದಿದ್ದರೆ ಅರ್ಜಿ ತಿರಸ್ಕಾರದ ಎಚ್ಚರಿಕೆ
ವಿದ್ಯಾರ್ಥಿವೇತನ/ಶುಲ್ಕ ಮರುಪಾವತಿ ಮಾಡಲು ಸಾಧ್ಯವಾಗುತ್ತಿಲ್ಲ. ವಿದ್ಯಾರ್ಥಿಗಳು ತಮ್ಮ ಬ್ಯಾಂಕ್ ಖಾತೆಗೆ ಆಧಾರ್ ಸಂಖ್ಯೆಯನ್ನು ಸೀಡ್ ಮಾಡಿಕೊಳ್ಳದೇ ಇರುವುದು. ವಿದ್ಯಾರ್ಥಿಗಳ ಶೈಕ್ಷಣಿಕ ದತ್ತಾಂಶದಲ್ಲಿ ಹಾಗೂ ರಾಜ್ಯ ವಿದ್ಯಾರ್ಥಿ ವೇತನ ತಂತ್ರಾಂಶದಲ್ಲಿ ನಮೂದಿಸಿರುವ ಹೆಸರಿಗೂ ವ್ಯತ್ಯಾಸವಿರುವುದು ಕೌನ್ಸೆಲಿಂಗ್ ಕೋರ್ಸ್ ಗಳಲ್ಲಿ ಓದುತ್ತಿರುವ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸುವ ಸಂದರ್ಭದಲ್ಲಿ ಕೌನ್ಸೆಲಿಂಗ್ ದತ್ತಾಂಶ ನಮೂದಿಸದೇ ಇರುವುದು. ವಿದ್ಯಾರ್ಥಿಗಳ ಹಿಂದಿನ ಶೈಕ್ಷಣಿಕ ವರ್ಷದ
ದತ್ತಾಂಶವನ್ನು ವಿಶ್ವವಿದ್ಯಾಲಯಗಳು ರಾಜ್ಯ ವಿದ್ಯಾರ್ಥಿವೇತನ ತಂತ್ರಾಂಶದೊಂದಿಗೆ ಹಂಚಿಕೊಳ್ಳದೇ ಇರುವುದು.
ವಿದ್ಯಾರ್ಥಿಗಳು ಮೇಲ್ಕಂಡ ಎಲ್ಲಾ ಸಮಸ್ಯೆಗಳನ್ನು ಬಗೆಹರಿಸಿ, ಸೂಕ್ತ ಮಾಹಿತಿಯನ್ನು ರಾಜ್ಯ ವಿದ್ಯಾರ್ಥಿವೇತನ ತಂತ್ರಾಂಶದ ವಿದ್ಯಾರ್ಥಿಗಳ ಲಾಗಿನ್, ಬಳ್ಳಾರಿ, ಸಂಡೂರು, ಸಿರುಗುಪ್ಪ ತಾಲ್ಲೂಕುಗಳ ತಾಲ್ಲೂಕು ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿಗಳು ಹಾಗೂ ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿಗಳ ಲಾಗಿನ್ ನಲ್ಲಿ ಅಪ್ಡೇಟ್ ಮಾಡಲು ಜ.30 ರ ವರೆಗೆ ಅವಕಾಶ ನೀಡಲಾಗಿದೆ. ವಿದ್ಯಾರ್ಥಿಗಳು ತಮ್ಮ ಮಾಹಿತಿಯನ್ನು ಅಪ್ಡೇಟ್ ಮಾಡದೇ ಇದ್ದಲ್ಲಿ ಅಂತಹ ವಿದ್ಯಾರ್ಥಿಗಳ ಅರ್ಜಿಗಳನ್ನು ತಿರಸ್ಕರಿಸಲಾಗುವುದು ಎಂದು ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿ ಜಲಾಲಪ್ಪ ಅವರು ತಿಳಿಸಿದ್ದಾರೆ.
ವರದಿ : ಜಿಲಾನಸಾಬ್ ಬಡಿಗೇರ್



















