
ಅಥಣಿ ಶುಗರ್ಸ್ ಉದ್ಯೋಗ ಸಮೂಹದ ಸಂಸ್ಥಾಪಕ ಅಧ್ಯಕ್ಷರು, ಮಾಜಿ ಸಚಿವರು ಹಾಗೂ ಜನಸೇವೆಯ ಪ್ರತಿರೂಪವಾದ ಸನ್ಮಾನ್ಯ ಶ್ರೀ ಶ್ರೀಮಂತ ಪಾಟೀಲ್ ಅವರ 71ನೇ ವರ್ಷದ ಹುಟ್ಟುಹಬ್ಬದ ಅಂಗವಾಗಿ ಅರ್ಥಪೂರ್ಣ ಸೇವಾ ಕಾರ್ಯಗಳು ನಡೆದವು.
ಈ ವಿಶೇಷ ದಿನಾಚರಣೆಯ ನಿಮಿತ್ತ ಶ್ರೀಮಂತ ಪಾಟೀಲ್ ಫೌಂಡೇಶನ್ ವತಿಯಿಂದ ಸೇವಾ ಸದನ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ಸಾಂಗ್ಲಿ ಹಾಗೂ ನಂದಾದೀಪ ಕಣ್ಣಿನ ಆಸ್ಪತ್ರೆಯ ಖ್ಯಾತ ವೈದ್ಯಾಧಿಕಾರಿಗಳ ಸಂಯುಕ್ತ ಆಶ್ರಯದಲ್ಲಿ ಉಚಿತ ಮಹಾ ಆರೋಗ್ಯ ತಪಾಸಣಾ ಶಿಬಿರವನ್ನು ಆಯೋಜಿಸಲಾಯಿತು.
ಶಿಬಿರದಲ್ಲಿ ಸಾಮಾನ್ಯ ಆರೋಗ್ಯ ತಪಾಸಣೆ, ಕಣ್ಣಿನ ಪರೀಕ್ಷೆ, ಅಗತ್ಯವಿರುವವರಿಗೆ ಶಸ್ತ್ರ ಚಿಕಿತ್ಸೆ, ರಕ್ತದಾನ ಶಿಬಿರ ಸೇರಿದಂತೆ ಅನೇಕ ಉಚಿತ ವೈದ್ಯಕೀಯ ಸೌಲಭ್ಯಗಳನ್ನು ಸಾರ್ವಜನಿಕರಿಗೆ ಒದಗಿಸಲಾಯಿತು.
ಸಾವಿರಾರು ಜನರು ಈ ಶಿಬಿರದ ಪ್ರಯೋಜನ ಪಡೆದು ಸಂತಸ ವ್ಯಕ್ತಪಡಿಸಿದರು.
ಜನರ ಆರೋಗ್ಯದ ಬಗ್ಗೆ ಕಾಳಜಿ ವಹಿಸುವುದು ನಿಜವಾದ ಜನಸೇವೆ ಎಂಬ ಸಂದೇಶದೊಂದಿಗೆ ನಡೆದ ಈ ಕಾರ್ಯಕ್ರಮವು ಶ್ರೀಮಂತ ಪಾಟೀಲ್ ಅವರ ಜನಪರ ಚಿಂತನೆಗೆ ಮತ್ತೊಂದು ಸಾಕ್ಷಿಯಾಯಿತು.
ಒಟ್ಟಾರೆ, ಹುಟ್ಟುಹಬ್ಬವನ್ನು ಸಂಭ್ರಮಕ್ಕೆ ಮಾತ್ರ ಸೀಮಿತಗೊಳಿಸದೆ, ಸಮಾಜಮುಖಿ ಸೇವೆಗೆ ಮೀಸಲಿಟ್ಟ ಈ ಕಾರ್ಯಕ್ರಮ ಎಲ್ಲರ ಮೆಚ್ಚುಗೆಗೆ ಪಾತ್ರವಾಯಿತು.
ಇದೇ ಕಾರ್ಯಕ್ರಮದಲ್ಲಿ ಮಾಜಿ ಸಚಿವರು ಹಾಗೂ ಗೋಕಾಕ್ ಶಾಸಕರಾದ ರಮೇಶ್ ಜಾರಕಿಹೊಳಿ, ಅಥಣಿಯ ಮಾಜಿ ಶಾಸಕರು ಮಹೇಶ್ ಕುಮಟಳ್ಳಿ, ಯುವ ನಾಯಕರಾದ ಶ್ರೀನಿವಾಸ್ ಪಾಟೀಲ್ ಮುಖಂಡರಾದ ರವಿ ಪೂಜಾರಿ ಇನ್ನೂ ಅನೇಕ ಬಿಜೆಪಿ ಮುಖಂಡರು ಕಾರ್ಯಕರ್ತರು ಮತ್ತು ಅಪಾರ ಜನಸ್ತೋಮ ನೆರೆದಿತ್ತು.
ವರದಿ. ವಿಠ್ಠಲ ಖೋಕಾಟೆ




















