ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಭಕ್ತರ ಸಮ್ಮುಖದಲ್ಲಿ ಕೋಟೆ ಪಂಪಾಪತಿ ಹಂಪಮ್ಮದೇವಿಯ ಮಹಾರಥೋತ್ಸವ

ಬಳ್ಳಾರಿ / ಕಂಪ್ಲಿ : ಕಂಪ್ಲಿ-ಕೋಟೆಯ ತುಂಗಭದ್ರಾ ನದಿ ತೀರದಲ್ಲಿ ವೀರಾಜಮಾನವಾಗಿರುವ ಐತಿಹಾಸಿಕ ಹಿನ್ನೆಲೆಯ ಶ್ರೀ ಪಂಪಾಪತಿ ಮತ್ತು ಹಂಪಮ್ಮದೇವಿ ಮಹಾರಥೋತ್ಸವವು ಸಡಗರ ಸಂಭ್ರಮ ಶ್ರದ್ಧೆ, ಭಕ್ತಿಯಿಂದ ಜಯಘೋಷಣೆಗಳ ಮಧ್ಯೆ ವಿಜೃಂಭಣೆಯಿಂದ ಜರುಗಿತು. ಮಹಾರಥೋತ್ಸವದ ಅಂಗವಾಗಿ ಮರುದಿನದಲ್ಲಿ ಕಂಕಣಧಾರಣೆ, ರಥಕ್ಕೆ ಕಳಸಧಾರಣೆ ಹಾಗೂ ಶ್ರೀ ಪಂಪಾಪತಿ ಹಂಪಮ್ಮದೇವಿಯ ಕಲ್ಯಾಣ ಮಹೋತ್ಸವವು ವಿಜೃಂಭಣೆಯಿಂದ ಜರುಗಿದ್ದವು. ರಾತ್ರಿ ಆಕರ್ಷಕ ಹೂವಿನ ಪಲ್ಲಕ್ಕಿ ಉತ್ಸವವೂ ಸಂಭ್ರಮದಿಂದ ನಡೆದವು.
ಮಹಾರಥೋತ್ಸವದ ಅಂಗವಾಗಿ ಶ್ರೀ ಪಂಪಾಪತಿ ಸ್ವಾಮಿಯ ಶಿಲಾ ವಿಗ್ರಹಕ್ಕೆ ವಿಶೇಷ ಅಭಿಷೇಕ,ಸಹಸ್ರ ಬಿಲ್ವಾರ್ಚನೆ, ಅಲಂಕಾರ ಸೇರಿದಂತೆ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ಜರುಗಿದವು. ಸಂಜೆ ರಥಕ್ಕೆ ವಿವಿಧ ಹೂಗಳು,ತಳೀರು ತೋರಣಗಳಿಂದ ಅಲಂಕರಿಸಿ ಮಹಾಮಂಗಳಾರತಿ ಮಾಡಿದ ನಂತರ ಜಯಘೋಷಗಳೊಂದಿಗೆ ದೇವಸ್ಥಾನದ ಪದಾಧಿಕಾರಿಗಳು ಮಹಾರಥೋತ್ಸವಕ್ಕೆ ಚಾಲನೆ ನೀಡಿದರು. ಅಲಂಕೃತ ರಥವನ್ನು ಕಂಪ್ಲಿ ಗಂಗಾವತಿ ಮುಖ್ಯ ರಸ್ತೆಯಲ್ಲಿ ಎದುರು ಬಸವಣ್ಣ ದೇವಸ್ಥಾನದವರೆಗೆ ಎಳೆದು ಪುನಃ ದೇವಸ್ಥಾನಕ್ಕೆ ಎಳೆದುಕೊಂಡು ಬಂದರು. ಮಹಾರಥೋತ್ಸವದಲ್ಲಿ ವಿವಿಧ ಜಾನಪದ ಕಲಾತಂಡಗಳು, ಮಂಗಳವಾದ್ಯಗಳು ಭಾಗವಹಿಸಿದ್ದವು. ರಸ್ತೆಯ ಇಕ್ಕೆಲಗಳಲ್ಲಿ ನಿಂತಿದ್ದ ಸದ್ಭಕ್ತರು ತೇರಿಗೆ ಹೂ, ಉತ್ತತ್ತಿ ಎಸೆದು ತಮ್ಮ ಹರಕೆಯನ್ನು ತೀರಿಸಿದರು. ರಥೋತ್ಸವದಲ್ಲಿ ದೇವಸ್ಥಾನ ಸಮಿತಿ ಪದಾಧಿಕಾರಿಗಳು, ಕೋಟೆ, ಕಂಪ್ಲಿ ಹಾಗೂ ಸುತ್ತ ಮುತ್ತಲ ಗ್ರಾಮಗಳ ಸಾವಿರಾರು ಸದ್ಭಕ್ತರು ಭಾಗವಹಿಸಿದ್ದರು.

ವರದಿ : ಜಿಲಾನಸಾಬ್ ಬಡಿಗೇರ್

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ

error: Content is protected !!