ಬಳ್ಳಾರಿ/ ಕಂಪ್ಲಿ : ಕೇಂದ್ರದ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಮಂಡಿಸಿರುವ ಬಜೆಟ್ ಕರ್ನಾಟಕ ರಾಜ್ಯದ ಪಾಲಿಗೆ ನಿರಾಶದಾಯಕವಾಗಿದೆ. ಇದೊಂದು ಭರವಸೆ ಇಲ್ಲ, ನಿರಾಸೆಯ ಬಜೆಟ್ ಎಂದು ತಾಲೂಕು ಗ್ಯಾಂರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಸದ್ಯಸರಾದ ರಾಜಾಭಕ್ಷಿ ಟೀಕಿಸಿದ್ದಾರೆ.
ಈ ಬಗ್ಗೆ ಪ್ರಕಟಣೆ ನೀಡಿ, ಯುಪಿಎ ಸರ್ಕಾರ ಜಾರಿಗೆ ತಂದಿದ್ದ ಮಹಾತ್ಮ ಗಾಂಧಿ ರಾಷ್ಟ್ರೀಯ ಉದ್ಯೋಗ ಖಾತ್ರಿ ಯೋಜನೆಯನ್ನು ಮಾರ್ಪಡಿಸಿ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈ ಬಿಟ್ಟಿದ್ದಕ್ಕೆ ಕಾಂಗ್ರೆಸ್ ದೇಶದಾದ್ಯಂತ ಉಗ್ರ ಹೋರಾಟ ಮಾಡಿದೆ.
ಹೋರಾಟದ ಫಲವಾಗಿ ಇದೀಗ ಗಾಂಧಿ ಗ್ರಾಮ ಸ್ವರಾಜ್ ಯೋಜನೆ ಜಾರಿಗೆ ತರುವುದಾಗಿ ಸಚಿವೆ ಹೇಳಿದ್ದಾರೆ. ಚುನಾವಣೆ ದೃಷ್ಟಿಯಿಂದ ತಮಿಳುನಾಡು,
ಕೇರಳಕ್ಕೆ ಬಂಪರ್ ಕೊಡುಗೆ ನೀಡಲಾಗಿದೆ. ಕರ್ನಾಟಕಕ್ಕೆ ಮಲತಾಯಿ ಧೋರಣೆಯನ್ನು ಅನುಸರಿಸಲಾಗಿದೆ.
ನೀರಾವರಿ, ಕೃಷಿ ಯೋಜನೆ ಗಳಿಗೆ ಯಾವುದೇ ಅನುದಾನ ಘೋಷಣೆ ಯಾಗಿಲ್ಲ, ಬಳ್ಳಾರಿ ಜಿಲ್ಲೆಗೆ ಯಾವದೇ ವಿಶೇಷ ಪ್ಯಾಕೇಜ್ ಘೋಷಣೆ ಮಾಡಿಲ್ಲ, ಬಿಜೆಪಿಯ ಸಚಿ ವರು ಮತ್ತು ಸಂಸದರಿಂದ ಕರ್ನಾಟಕ ರಾಜ್ಯದ ನಿರ್ಲಕ್ಷ್ಯ ಧೋರಣೆ ಮುಂದುವರೆದಿದೆ,
ಗ್ಯಾರಂಟಿ ಯೋಜನೆಗಳಿಗೆ ಬೆಂಬಲವಿಲ್ಲ: ರಾಜ್ಯದ ಪಂಚ ಗ್ಯಾರಂಟಿ ಯೋಜನೆಗಳಿಗೆ ಅಥವಾ ಗ್ರಾಮೀಣಾಭಿವೃದ್ಧಿಗೆ ಕೇಂದ್ರದಿಂದ ಯಾವುದೇ ಪೂರಕ ಬೆಂಬಲ ಸಿಕ್ಕಿಲ್ಲ ಎಂದು ಎಂ.ರಾಜಭಕ್ಷಿ
ಅಸಮಾಧಾನ ತೋಡಿಕೊಂಡಿದ್ದಾರೆ.
ವರದಿ : ಜಿಲಾನಸಾಬ್ ಬಡಿಗೇರ್



















