ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಗಂಗಾವತಿ-ದರೋಜಿ ಮಾರ್ಗಕ್ಕೆ ₹705.45 ಕೋಟಿ : ಅಶೋಕಸ್ವಾಮಿ ಹೇರೂರು

ಬಳ್ಳಾರಿ / ಕಂಪ್ಲಿ : ಗಂಗಾವತಿಯಿಂದ ಕಂಪ್ಲಿ ಮೂಲಕ ದರೋಜಿ ಸಂಪರ್ಕಿಸುವ ಬ್ರಾಡ್‌ಗೇಜ್ ರೈಲು ಮಾರ್ಗ ನಿರ್ಮಾಣಕ್ಕೆ ನವೀಕರಿಸಿದ ಕಾರ್ಯಸಾಧ್ಯತಾ ವರದಿಯನ್ನು ಶೀಘ್ರ ರೈಲ್ವೆ ಬೋರ್ಡ್‌ಗೆ ಸಲ್ಲಿಸುವುದಾಗಿ ನೈರುತ್ಯ ರೈಲ್ವೆ ವಲಯದ ನಿರ್ಮಾಣ ವಿಭಾಗದ ಮುಖ್ಯ ಆಡಳಿತಾಧಿಕಾರಿ ಪತ್ರ ಬರೆದು ತಿಳಿಸಿದ್ದಾರೆ ಎಂದು ರೈಲ್ವೆ ಬಳಕೆದಾರರ ಸಮಿತಿ ಸದಸ್ಯ ಅಶೋಕಸ್ವಾಮಿ ಹೇರೂರು ತಿಳಿಸಿದ್ದಾರೆ.
ರೈಲ್ವೆ ಮಂಡಳಿ ಕಾರ್ಯ ಸಾಧ್ಯತಾ ಸಮೀಕ್ಷಾ ವರದಿ ಅವಲೋಕಿಸಿ 2024ರ ಆ.9ರಂದು ಯೋಜನಾ ವೆಚ್ಚವನ್ನು 705.45 . ಕೋಟಿ ರೂಪಾಯಿ ಮಾಡಿದ್ದು, ಶೀಘ್ರ ಗಂಗಾವತಿ-ದರೋಜಿ ಬ್ರಾಡ್‌ಗೇಜ್‌ ಕಾಮಗಾರಿಗೆ ಚಾಲನೆ ದೊರೆಯಲಿದೆ ಎನ್ನುವ ಆಶಾಭಾವನೆಯಿದೆ ಎಂದು ತಿಳಿಸಿದ್ದಾರೆ.
ರೈತರು, ವರ್ತಕರು ಹಾಗೂ ದೇಶದ ವಿವಿಧೆಡೆಯಿಂದ ಅಂಜನಾದ್ರಿಗೆ ಬರುವ ಭಕ್ತರ ಅನುಕೂಲಕ್ಕಾಗಿ ಗಂಗಾವತಿ-ದರೋಜಿ ಬ್ರಾಡ್‌ಗೇಜ್ ರೈಲು ಮಾರ್ಗ ನಿರ್ಮಾಣಕ್ಕೆ ಅನುದಾನ ಒದಗಿಸುವಂತೆ ನಾನು ಪತ್ರ ಬರೆದಿದ್ದೆ ಎಂದು ತಿಳಿಸಿದ್ದಾರೆ.

ವರದಿ : ಜಿಲಾನಸಾಬ್ ಬಡಿಗೇರ್

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ

error: Content is protected !!