ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಸಹಕಾರ ಸಂಘದ ನೂತನ ಅಧ್ಯಕ್ಷರಾಗಿ ಬಿ.ಬಸವರಾಜ, ಉಪಾಧ್ಯಕ್ಷರಾಗಿ ತಳವಾರ ಗಂಗಣ್ಣ ಅವಿರೋಧ ಆಯ್ಕ

ಬಳ್ಳಾರಿ / ಕಂಪ್ಲಿ : ಪಟ್ಟಣದ ಮುದ್ದಾಪುರ ಅಗಸಿಯಲ್ಲಿರುವ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ನೂತನ ಅಧ್ಯಕ್ಷರಾಗಿ ಬಿ.ಬಸವರಾಜ ಹಾಗೂ ಉಪಾಧ್ಯಕ್ಷರಾಗಿ ತಳವಾರ ಗಂಗಣ್ಣ ಇವರು ಅವಿರೋಧವಾಗಿ ಆಯ್ಕೆಗೊಂಡರು.
ಹಿಂದಿನ ಅಧ್ಯಕ್ಷ ಕಟ್ಟೆ ಸಣ್ಣ ದುರುಗಪ್ಪ ಹಾಗೂ ಉಪಾಧ್ಯಕ್ಷ ಬಳೆ ಮಲ್ಲಿಕಾರ್ಜುನ ಇವರು ರಾಜೀನಾಮೆ ನೀಡಿದ ಹಿನ್ನಲೆ ತೆರವಾಗಿದ್ದ ಅಧ್ಯಕ್ಷ ಮತ್ತು ಉಪಾಧ್ಯಕ್ಷ ಸ್ಥಾನಗಳಿಗೆ ಇಲ್ಲಿನ ಸಹಕಾರ ಸಂಘದ ಕಛೇರಿಯಲ್ಲಿ ಶುಕ್ರವಾರ ಚುನಾವಣೆ ನಡೆಯಿತು.
ಈ ಚುನಾವಣೆಯಲ್ಲಿ ಅಧ್ಯಕ್ಷ ಸ್ಥಾನಕ್ಕೆ ಬಿ.ಬಸವರಾಜ ಹಾಗೂ ಉಪಾಧ್ಯಕ್ಷ ಸ್ಥಾನಕ್ಕೆ ತಳವಾರ ಗಂಗಣ್ಣ ಇವರು ನಾಮಪತ್ರ ಸಲ್ಲಿಸಿದ್ದರು. ಇವರಿಬ್ಬರೂ ಮಾತ್ರ ನಾಮಪತ್ರ ಸಲ್ಲಿಸಿದ ಹಿನ್ನಲೆ ಅವಿರೋಧವಾಗಿ ನೂತನ ಅಧ್ಯಕ್ಷರಾಗಿ ಬಸವರಾಜ ಮತ್ತು ಉಪಾಧ್ಯಕ್ಷರಾಗಿ ತಳವಾರ ಗಂಗಣ್ಣ ಆಯ್ಕೆಗೊಂಡರು.
ಈ ಚುನಾವಣೆ ಪ್ರಕ್ರಿಯೆ ವೇಳೆ ಚುನಾವಣಾಧಿಕಾರಿ ರಮೇಶ, ಮುಖ್ಯಕಾರ್ಯನಿರ್ವಾಹಕ ಹೆಚ್.ಈರಣ್ಣ, ನಿರ್ದೇಶಕರಾದ ಅಳ್ಳಿ ನಾಗರಾಜ, ಕಟ್ಟೆ ಸಣ್ಣ ದುರುಗಪ್ಪ, ಈರಪ್ಪ ಜೋಳಮಾರ, ಸಣ್ಣೆಪ್ಪ ಎಸ್. ರಾಜೇಶ ಶೆರೆಗಾರ, ಟಿ.ನಿರಂಜನಯ್ಯ, ಬಳೆ ಮಲ್ಲಿಕಾರ್ಜುನ, ಕೃಷ್ಣ ಕೆ, ಕೆ.ನಾಗಮ್ಮ, ಬಿಎಂ ವಿಶಾಲಾಕ್ಷಿ ಇದ್ದರು. ನಂತರ ನೂತನ ಅಧ್ಯಕ್ಷ ಮತ್ತು ಉಪಾಧ್ಯಕ್ಷರಿಗೆ ಸನ್ಮಾನಿಸಿ ಅಭಿನಂದಿಸಿದರು.
ಈ ಸಂದರ್ಭದಲ್ಲಿ ಮುಖಂಡರಾದ ಬಿ.ನಾರಾಯಣಪ್ಪ, ಅಯೋಧ್ಯ ವೆಂಕಟೇಶ, ಆಟೋ ರಘು, ಗುರು ರಾಮಸಾಗರ ಸೇರಿದಂತೆ ಸಿಬ್ಬಂದಿ ಇದ್ದರು.

ವರದಿ : ಜಿಲಾನಸಾಬ್ ಬಡಿಗೇರ್

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ

error: Content is protected !!