ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ವಿಧಾನಸೌಧ–ವಿಕಾಸಸೌಧದಲ್ಲಿ ಸೌರಶಕ್ತಿ ಅಳವಡಿಕೆ :ವರ್ಷಕ್ಕೆ ಈ ಯೋಜನೆಯಿಂದಾಗುವ ಉಳಿತಾಯವೆಷ್ಟು ಗೊತ್ತಾ?

ಬೆಂಗಳೂರು : ರಾಜ್ಯದಲ್ಲಿ ಸೌರಶಕ್ತಿ ಬಳಕೆಗೆ ಉತ್ತೇಜನ ನೀಡುವ ಉದ್ದೇಶದಿಂದ ರಾಜ್ಯ ಸರ್ಕಾರ ವಿಧಾನಸೌಧ ಹಾಗೂ ವಿಕಾಸಸೌಧ ಆವರಣದಲ್ಲಿ ಸೌರ ಫಲಕಗಳನ್ನು ಅಳವಡಿಸುವ ಕಾರ್ಯಕ್ಕೆ ಚಾಲನೆ ನೀಡಿದೆ. ರಾಜ್ಯದ ಇತರೆ ಸರ್ಕಾರಿ ಕಟ್ಟಡಗಳಲ್ಲಿಯೂ, ವಿಶೇಷವಾಗಿ ಪಂಚಾಯತ್ ಕಚೇರಿಗಳಲ್ಲಿ ಸೌರಶಕ್ತಿ ಅಳವಡಿಕೆಗೆ ಪ್ರೇರಣೆ ಸಿಗಬೇಕೆನ್ನುವ ಉದ್ದೇಶದಿಂದ ಸರ್ಕಾರ ಈ ಕೆಲಸ ಕೈಗೆತ್ತಿಕೊಂಡಿದ್ದು, ಇದರಿಂದ ವಿಧಾನಸೌಧ ಹಾಗೂ ವಿಕಾಸಸೌಧಗಳಿಗೆ ಬರುವ ವಿದ್ಯುತ್​ ಬಿಲ್​ನಲ್ಲಿ ವರ್ಷಕ್ಕೆ ಲಕ್ಷಾಂತರ ರೂ. ಉಳಿತಾಯವಾಗುವ ನಿರೀಕ್ಷೆಯಿದೆ.

ಈ ಯೋಜನೆಯಿಂದ ವರ್ಷಕ್ಕೆ 20 ಲಕ್ಷ ರೂ. ಉಳಿತಾಯವಾಗುತ್ತಾ?

ವಿಧಾನಸೌಧ ಮತ್ತು ವಿಕಾಸಸೌಧದಲ್ಲಿ ಅಳವಡಿಸಲಾಗುತ್ತಿರುವ ಸೌರ ಫಲಕಗಳಿಂದ ಸರ್ಕಾರಕ್ಕೆ ಮಹತ್ವದ ಆರ್ಥಿಕ ಉಳಿತಾಯವಾಗಲಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಈ ಎರಡು ಭವ್ಯ ಕಟ್ಟಡಗಳಲ್ಲಿ ಸುಮಾರು ಸಾವಿರಕ್ಕೂ ಹೆಚ್ಚು ಕೊಠಡಿಗಳಿದ್ದು, ಪ್ರತಿ ತಿಂಗಳು 12 ಲಕ್ಷದಿಂದ 15 ಲಕ್ಷ ರೂ.ವರೆಗೆ ವಿದ್ಯುತ್ ಬಿಲ್ ಬರುತ್ತಿದೆ. ಇದೀಗ 300 ಕಿಲೋವ್ಯಾಟ್ ಸಾಮರ್ಥ್ಯದ ಸೌರ ಫಲಕ ಅಳವಡಿಕೆಯಿಂದ ವರ್ಷಕ್ಕೆ ಸುಮಾರು 20 ಲಕ್ಷ ರೂ. ಉಳಿತಾಯವಾಗುವ ನಿರೀಕ್ಷೆ ಇದೆ. ಯೋಜನೆಯಿಂದ ಎರಡು ವರ್ಷಗಳೊಳಗೆ ಹೂಡಿಕೆಯ ಲಾಭ ದೊರಕಲಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ವರದಿ : ಜಿಲಾನಸಾಬ್ ಬಡಿಗೇರ್

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ

error: Content is protected !!