ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಕಂಪ್ಲಿ ಉತ್ಸವದ ಹಿನ್ನಲೆ ಜಾಗೃತಿಗಾಗಿ ಡಿಜಿಟಿಲ್ ಪ್ರಚಾರ ವಾಹನಕ್ಕೆ ಚಾಲನೆ ನೀಡಿದ ಶಾಸಕ ಜೆ.ಎನ್.ಗಣೇಶ

ಬಳ್ಳಾರಿ / ಕಂಪ್ಲಿ : ಎರಡು ದಿನದ ಕಂಪ್ಲಿ ಉತ್ಸವ ಹಿನ್ನಲೆ ಪಟ್ಟಣ ಹಾಗೂ ಗ್ರಾಮೀಣ ಭಾಗದಲ್ಲಿ ಪ್ರಚಾರಪಡಿಸುವ ಡಿಜಿಟಲ್ ಪ್ರಚಾರ ವಾಹನಕ್ಕೆ ಶಾಸಕ ಜೆ.ಎನ್.ಗಣೇಶ್ ಇವರು ಶುಕ್ರವಾರ ಪಟ್ಟಣದ ಪುರಸಭೆಯಲ್ಲಿ ಚಾಲನೆ ನೀಡಿದರು.
ನಂತರ ಶಾಸಕ ಗಣೇಶ್ ಪತ್ರಕರ್ತರೊಂದಿಗೆ ಮಾತನಾಡಿ, ಕಂಪ್ಲಿ ಆಳಿದ ಅಂದಿನ ಕಂಪಲಿರಾಯ (ಗಂಡುಗಲಿ ಕುಮಾರ)ನ ಸಾಮ್ರಾಜ್ಯದ ವೈಭವ ಸಾರುವ ಜೊತೆಗೆ ಕಲೆ, ಸಾಹಿತ್ಯ, ಸಂಸ್ಕೃತಿ, ಪರಂಪರೆಯನ್ನು ಮರುಕರಿಳಿಸುವಂತೆ ಮಾಡುವ ಹಿನ್ನಲೆ ಕಂಪ್ಲಿ ಉತ್ಸವ ನಡೆಸಲಾಗುತ್ತಿದೆ. ಎರಡನೇ ಬಾರಿಗೆ ಕಂಪ್ಲಿ ಉತ್ಸವವನ್ನು ಅದ್ಧೂರಿಯಾಗಿ ಮಾಡಲು ತೀರ್ಮಾನಿಸಿದೆ. ಇದರಿಂದ ಪಟ್ಟಣ ಹಾಗೂ ಗ್ರಾಮೀಣ ಭಾಗದ ಜನರಲ್ಲಿ ಉತ್ಸವದ ಜಾಗೃತಿ ಮೂಡಿಸುವ ನಿಟ್ಟಿನಲ್ಲಿ ಡಿಜಿಟಲ್ ವಾಹನಕ್ಕೆ ನೀಡಲಾಗಿದೆ. ಇದರಿಂದ ಹೆಚ್ಚಿನ ಸಂಖ್ಯೆಯಲ್ಲಿ ಜನರು ಬರಲು ಸಾಧ್ಯ, ಕಂಪ್ಲಿ ಉತ್ಸವ ಜನೋತ್ಸವವಾಗಬೇಕೆಂಬ ನಿಟ್ಟಿನಲ್ಲಿ ಜಾಗೃತಿ ಮೂಡಿಸಲಾಗುತ್ತಿದೆ ಎಂದರು.
ಈ ಸಂದರ್ಭದಲ್ಲಿ ತಹಶೀಲ್ದಾರ್ ಜೂಗಲ್ ಮಂಜುನಾಯಕ, ಮುಖ್ಯಾಧಿಕಾರಿ ಬಿ.ಮಲ್ಲಿಕಾರ್ಜುನ, ಬ್ಲಾಕ್ ಅಧ್ಯಕ್ಷ ಕೆ.ಶ್ರೀನಿವಾಸರಾವ್, ಎಪಿಎಂಸಿ ಅಧ್ಯಕ್ಷ ಹಬೀಬ್ ರೆಹಮಾನ್, ಮುಖಂಡರಾದ ಬಿ.ಸಿದ್ದಪ್ಪ, ಲೊಡ್ಡು ಹೊನ್ನೂರವಲಿ, ಜಾಫರ್, ಆರ್.ಪಿ.ಶಶಿಕುಮಾರ ಸೇರಿದಂತೆ ಇತರರು ಇದ್ದರು.

ವರದಿ : ಜಿಲಾನಸಾಬ್ ಬಡಿಗೇರ್

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ

error: Content is protected !!