ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಪಕ್ಷದ ಮುಖಂಡರು, ಕಾರ್ಯಕರ್ತರು ಕೇಂದ್ರ ಸರ್ಕಾರದ ಮಹತ್ವಾಂಕ್ಷಿ ವಿ ಬಿ ಜಿ ರಾಮ್ ಜಿ ಬಗ್ಗೆ ಜಾಗೃತಿ ಮೂಡಿಸಬೇಕು : ಅನಿಲಕುಮಾರ್ ನಾಯ್ಡು

ಬಳ್ಳಾರಿ / ಕಂಪ್ಲಿ : ಕೇಂದ್ರ ಸರ್ಕಾರದ ಆತ್ಯಂತ ಮಹತ್ವಾಕಾಂಕ್ಷೆಯ ಯೋಜನೆಯಾದ ವಿಬಿ ಜಿ ರಾಮ್ ಜಿ ಯೋಜನೆಯನ್ನು ವಿಕಸಿತ ಭಾರತಕ್ಕಾಗಿ ವಿಶೇಷ ಈ ಯೋಜನೆಯಲ್ಲಿ ನಡೆಯುವ ಭ್ರಷ್ಟಾಚಾರವನ್ನು ತಡೆಯುವ ನಿಟ್ಟಿನಲ್ಲಿ ತರಲಾಗಿದೆ ಎಂದು ಭಾ. ಜ. ಪ ಬಳ್ಳಾರಿ ಜಿಲ್ಲಾಧ್ಯಕ್ಷ ಅನಿಲಕುಮಾರ್ ನಾಯ್ಡು ಮೋಕಾ ತಿಳಿಸಿದರು.
ಅವರು ಶನಿವಾರ ಪಟ್ಟಣದ ಕುರುಗೋಡು ರಸ್ತೆಯಲ್ಲಿರುವ ಮಾಜಿ ಶಾಸಕ ಟಿ.ಎಚ್.ಸುರೇಶಬಾಬು ಅವರ ಜನಸಂಪರ್ಕ ಕಚೇರಿಯಲ್ಲಿ ಪಕ್ಷದ ಮುಖಂಡರು, ಕಾರ್ಯಕರ್ತರಿಗಾಗಿ ಏರ್ಪಡಿಸಿದ್ದ ವಿಬಿ ಜಿ ರಾಮ್ ಜಿ ಯೋಜನೆಯ ಜಾಗೃತಿ ಸಮಾವೇಶದಲ್ಲಿ ಮಾತನಾಡಿದರು.
ವಿಕಸಿತ ಭಾರತ ರೋಜಗಾರ್ ಮತ್ತು ಅಜೀವಿಕಾ ಮಿಷನ್ ಗ್ಯಾರಂಟಿ ಯೋಜನೆಯು ಗ್ರಾಮೀಣ ಜನರ ಸ್ವಾವಲಂಬಿ ಬದುಕಿನ ಭರವಸೆಯ ದೂರದೃಷ್ಟಿಯಿಂದ ಅತ್ಯಂತ ಉತ್ತಮವಾಗಿದೆ. ವಿಬಿ ಜಿ ರಾಮ್ ಜಿ ಯೋಜನೆ ಪಾರದರ್ಶಕ ನಿರ್ವಹಣೆ, ತಂತ್ರಜ್ಞಾನದ ಕಾವಲು ಮತ್ತು ಶಾಶ್ವತ ಗ್ರಾಮೀಣಮೂಲ ಸೌಕರ್ಯಕ್ಕೆ ಸಹಕಾರಿಯಾಗಿದೆ. ಈ ಯೋಜನೆಯು ಅತ್ಯಂತ ಉನ್ನತ ಮಟ್ಟದ ತಂತ್ರಜ್ಞಾನವನ್ನು ಒಳಗೊಂಡಿದ್ದು, ಇದರಿಂದ ಅವ್ಯವಹಾರಕ್ಕೆ, ಭ್ರಷ್ಟಾಚಾರಕ್ಕೆ ಅವಕಾವಿಲ್ಲವಾಗಿದ್ದರಿಂದ ದೇಶ ಮತ್ತು ರಾಜ್ಯದಲ್ಲಿರುವ ನಕಲಿ ಗಾಂಧಿಗಳು ವಿರೋಧ ವ್ಯಕ್ತಪಡಿಸುತ್ತಿವೆ. ಜೊತೆಗೆ ಮನರೆಗಾ ಯೋಜನೆಯಲ್ಲಿ ವರ್ಷಕ್ಕೆ 100 ದಿನಗಳು ಮಾತ್ರ ಕೆಲಸ ಸಿಗುತ್ತಿತ್ತು. ಜೊತೆಗೆ ನಿರಂತರವಾಗಿ ಕೆಲಸ ನೀಡುತ್ತಿದ್ದರಿಂದ ಕೃಷಿ ಕೆಲಸ ಕಾರ್ಯಗಳಿಗೆ ತೊಂದರೆಯಾಗುತ್ತಿತ್ತು. ಆದರೆ ವಿಬಿ ಜಿ ರಾಮ್ ಜಿ ಯೋಜನೆಯಿಂದ ವರ್ಷಕ್ಕೆ 125 ದಿನಗಳ ಕೆಲಸ ನೀಡುವ ಜೊತೆಗೆ ಕೃಷಿ ಚಟುವಟಿಕೆಗಳಿಗೆ ತೊಂದರೆಯಾಗದಂತೆ ಕಾರ್ಮಿಕರಿಗೆ ಕೆಲಸ ನೀಡಲಾಗುವುದು ಮತ್ತು ಮೊದಲಿನಂತೆ 3-4 ತಿಂಗಳಿಗೊಮ್ಮೆ ಹಣ ನೀಡದೇ ಕೆಲಸವಾದ 7 ದಿನಗಳಲ್ಲಿ ಹಣ ಪಾವತಿ ಮಾಡಲಾಗುವುದು. ವಿಳಂಬವಾದರೆ ಪರಿಹಾರವನ್ನು ನೀಡಲಾಗುತ್ತದೆ. ಇಷ್ಟೆಲ್ಲಾ ಅನುಕೂಲವಿರುವ ಯೋಜನೆಯನ್ನು ಕಾಂಗ್ರೇಸ್ ಪಕ್ಷ ವಿನಾ ಕಾರಣ ವಿರೋಧಿಸುತ್ತಿದ್ದು, ಪಕ್ಷದ ಎಲ್ಲಾ ಮುಖಂಡರು, ಕಾರ್ಯಕರ್ತರು ಗ್ರಾಮೀಣ ಪ್ರದೇಶಗಳಲ್ಲಿ ಮನೆ ಮನೆಗೆ ತೆರಳಿ ಈ ಯೋಜನೆಯ ಬಗ್ಗೆ ಸಮಗ್ರವಾಗಿ ತಿಳಿಸುವ ಮೂಲಕ ಜಾಗೃತಿ ಮೂಡಿಸಬೇಕೆಂದರು.
ಗ್ರಾಮೀಣ ಪ್ರದೇಶಗಳಲ್ಲಿ ಎತ್ತಿನ ಬಂಡಿಗಳು, ಟ್ಯಾಕ್ಟರುಗಳು, ಬೈಕ್ ರ್ಯಾಲಿ ಮೂಲಕ ಜಾಗೃತಿ ಮೂಡಿಸಬೇಕು.
ಇನ್ನೆರಡು ಮೂರು ತಿಂಗಳಲ್ಲಿ ಗ್ರಾ.ಪಂ. ನಿಂದ ಹಿಡಿದು ಜಿ.ಪಂ.ವರೆಗೆ ಚುನಾವಣೆಗಳು ಬರುತ್ತಿದ್ದು, ಅಷ್ಟರೊಳಗೆ ಗ್ರಾಮೀಣ ಜನತೆಯಲ್ಲಿ ವಿಬಿ ಜಿ ರಾಮ್ ಜಿ ಯೋಜನೆಯ ಬಗ್ಗೆ ಸಮಗ್ರವಾಗಿ ಅರಿವು ಮೂಡಿಸಬೇಕು ಎಂದರು.
ಜಿಲ್ಲಾ ಉಪಾಧ್ಯಕ್ಷ ಯರ್ರಂಗಳಿ ತಿಮ್ಮಾರೆಡ್ಡಿ, ಅಳ್ಳಳ್ಳಿ ವೀರೇಶ್ ಮಂಡಲ ಅಧ್ಯಕ್ಷ ಸಿ.ಡಿ.ಮಹಾದೇವ, ವಿ.ವಿದ್ಯಾಧರ ಸೇರಿದಂತೆ ಇತರರು ಮಾತನಾಡಿ ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಬಿ,ಜಿ.ರಾಮ್ ಜಿ ಯೋಜನೆ ಕುರೊತು ರಾಜ್ಯದ ಕಾಂಗ್ರೇಸ್ ನಾಯಕರು, ನಕಲಿ ಗಾಂಧಿಗಳ ಸ್ವಾಮಿ ನಿಷ್ಠೆ ಮೆರೆಯುವ ಪ್ರಯತ್ನ ಮಾಡುತ್ತಿದ್ದಾರೆ ಎಂದು ಆರೋಪಿಸಿದರು.
ಕಲಬುರಗಿ ಮತ್ತು ಯಾದಗಿರಿ ಜಿಲ್ಲೆಯಲ್ಲಿ ಮನರೇಗಾ ಯೋಜನೆಯಲ್ಲಿ ಹೆಚ್ಚು ಭ್ರಷ್ಟಾಚಾರ ನಡೆದಿರುವುದು ಬಯಲಾಗಿದೆ. ಬಡವರ ಜಾಬ್ ಕಾರ್ಡುಗಳನ್ನು ದುರ್ಬಳಕೆ ಮಾಡಿಕೊಂಡು ಯೋಜನೆಯ ಹಣ ನೇರವಾಗಿ ಫಲಾನುಭವಿಗಳ ಕೈಗೆ ಸೇರುವಂತೆ ಮಾಡಿರುವುದರಿಂದ ಕಾಂಗ್ರೇಸ್ ನಾಯಕರಿಗೆ ಸಹಿಸಲಾಗುತ್ತಿಲ್ಲ, ಗಾಂಧಿ ಹೆಸರನ್ನು ತೆಗೆದು ಕೇಂದ್ರ ಸರ್ಕಾರ ಅವಮಾನ ಮಾಡಿದೆ ಎಂದು ಅಪಪ್ರಚಾರ ಮಾಡುತ್ತಿದ್ದಾರೆ ಆದರೆ ಗ್ರಾಮ ಸ್ವರಾಜ್ ಯೋಜನೆ ಜಾರಿಗೆ ತಂದು ಗುಡಿ ಕೈಗಾರಿಕೆಗಳಿಗೆ ಶಕ್ತಿ ತುಂಬುವ ಯೋಜನೆಯನ್ನು ಹಣಕಾಸು ಸಚಿವೆ ನಿರ್ಮಲ ಸೀತಾರಾಮನ್ ಜಾರಿಗೆ ತರುವ ಮೂಲಕ ಗಾಂಧಿ ಹೆಸರನ್ನು ಸ್ಥಿರಸ್ಥಾಯಿ ಮಾಡಿದ್ದಾರೆ. ಆದರೆ ರಾಜ್ಯದ ಗೃಹಸಚಿವರಾದ ಡಾ.ಜಿ.ಪರಮೇಶ್ವರ ಅವರು ತುಮಕೂರಿನಲ್ಲಿನ ಕ್ರೀಡಾ ಮೈದಾನಕ್ಕೆ ಗಾಂಧೀ ಹೆಸರನ್ನು ತೆಗೆದು ತಮ್ಮ ಹೆಸರನ್ನು ಇಟ್ಟುಕೊಳ್ಳುವ ಮೂಲಕ ಮಹತ್ಮಾಗಾಂಧಿಯವರಿಗೆ ಅವಮಾನ ಮಾಡಿದ್ದಾರೆಂದು ಆರೋಪಿಸಿದರು.
ಸಮಾವೇಶದಲ್ಲಿ ಕುರುಗೋಡು ಮಂಡಲ ಅಧ್ಯಕ್ಷ ಮದಿರೆ ಕುಮಾರಸ್ವಾಮಿ, ರಬಿಯಾ ನಿಸ್ಸಾರ್, ಬಳ್ಳಾರಿ ರಾಮಚಂದ್ರ, ಟಿ.ವಿ.ಸುದರ್ಶನರೆಡ್ಡಿ, ರಾಮು, ಜಿ.ಸುಧಾಕರ್, ಪದ್ಮಾವತಿ, ಬಿ.ಮಂಜುಳಾ, ರಮಣಯ್ಯ, ಎಸ್.ಚಂದ್ರಶೇಖರ್, ತಾಲ್ಲೂಕಿನ ಹತ್ತು ಗ್ರಾಮ ಪಂಚಾಯತಿಗಳ ಪಕ್ಷದ ಜನಪ್ರತಿನಿಧಿಗಳು, ಮುಖಂಡರು, ಕಾರ್ಯಕತರರು ಭಾಗವಹಿಸಿದ್ದರು.

ವರದಿ : ಜಿಲಾನಸಾಬ್ ಬಡಿಗೇರ್

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ

error: Content is protected !!