ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ವಾಸಿಸುವವನೇ ಮನೆ ಒಡೆಯ

ನಿನ್ನೆ ಶಿಗ್ಗಾಂವ ಪಟ್ಟಣದ ಡಾ. ಬಿ.ಆರ್. ಅಂಬೇಡ್ಕರ್ ಸಂಕೀರ್ಣದಲ್ಲಿ, ದಿನಾಂಕ 14-02-2026 ರಂದು ಹಾವೇರಿ ಜಿಲ್ಲೆಯಲ್ಲಿ ನಡೆಯಲಿರುವ “ವಾಸಿಸುವವನೇ ಮನೆ ಒಡೆಯ” ಯೋಜನೆಯ ಪಟ್ಟಾ ವಿತರಣೆ ಕಾರ್ಯಕ್ರಮದ ಅಂಗವಾಗಿ ಪೂರ್ವಭಾವಿ ಸಭೆ ನಡೆಯಿತು.

ಈ ಸಭೆಗೆ ಶಿಗ್ಗಾಂವ–ಸವಣೂರ ವಿಧಾನಸಭಾ ಕ್ಷೇತ್ರದ ಶಾಸಕರಾದ ಶ್ರೀ ಯಾಸೀರ್ ಅಹ್ಮದ್‌ಖಾನ್ ಪಠಾಣ ಅವರು ಅಧ್ಯಕ್ಷತೆ ವಹಿಸಿದ್ದರು.
ಸಭೆಯಲ್ಲಿ ಸವಣೂರ ಉಪವಿಭಾಗಾಧಿಕಾರಿಗಳಾದ ಶ್ರೀ ಶುಭಂ ಶುಕ್ಲಾ, ಸವಣೂರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಶ್ರೀ ರಮೇಶ ದುರಗಪ್ಪ ಹರಿಜನ, ಶಿಗ್ಗಾಂವ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಶ್ರೀ ಗುಡ್ಡಪ್ಪ ಜಲದಿ, ಶಿಗ್ಗಾಂವ ಪಂಚ ಗ್ಯಾರಂಟಿ ಸಮಿತಿಯ ಸದಸ್ಯರಾದ ಶ್ರೀ ಎಸ್. ಎಫ್. ಮಣಕಟ್ಟಿ ಅವರು ಉಪಸ್ಥಿತರಿದ್ದರು.

ಅದೇ ರೀತಿ ಶಿಗ್ಗಾಂವ ತಾಲೂಕು ದಂಡಾಧಿಕಾರಿಗಳಾದ ಶ್ರೀ ಯಲ್ಲಪ್ಪ ಶೆ. ಗೊಣ್ಣೆಣ್ಣನವರ, ಸವಣೂರ ತಾಲೂಕು ದಂಡಾಧಿಕಾರಿಗಳಾದ ಶ್ರೀ ರವಿ ಕೊರವರ ಹಾಗೂ ವಿವಿಧ ಇಲಾಖೆಗಳ ಅಧಿಕಾರಿಗಳು ಸಭೆಯಲ್ಲಿ ಭಾಗವಹಿಸಿದ್ದರು.

ಸಭೆಯಲ್ಲಿ ವಾಸಿಸುವವನೇ ಮನೆ ಒಡೆಯ ಯೋಜನೆಯಡಿ ನಡೆಯುವ ಪಟ್ಟಾ ವಿತರಣೆ ಕಾರ್ಯಕ್ರಮವನ್ನು ಯಶಸ್ವಿಯಾಗಿ ಆಯೋಜಿಸುವ ಕುರಿತು ಚರ್ಚೆ ನಡೆಸಲಾಗಿದ್ದು, ಕಾರ್ಯಕ್ರಮದ ರೂಪರೇಖೆ, ಸಿದ್ಧತೆಗಳು ಹಾಗೂ ಜನರಿಗೆ ತಲುಪುವಂತೆ ವ್ಯವಸ್ಥೆ ಮಾಡುವ ಬಗ್ಗೆ ಅಗತ್ಯ ನಿರ್ದೇಶನಗಳನ್ನು ನೀಡಲಾಯಿತು.

ವರದಿ ಬಸವರಾಜ ಎಸ್. ಎನ್

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ

error: Content is protected !!