ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಗೌರಿಬಿದನೂರು ತಾಲ್ಲೂಕಿನ ಡಿ ಪಾಳ್ಯ ಹೋಬಳಿಯ ಬಿ ಬೊಮ್ಮಸಂದ್ರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಸಿದ್ದೇನಹಳ್ಳಿ ಗ್ರಾಮಕ್ಕೆ ಬಸ್ ಸಂಪರ್ಕ ಕಲ್ಪಿಸುವಂತೆ ವಕೀಲರಾದ ಕಿರಣ್ ಕೆ. ಟಿ. ರವರಿಂದ ಸರ್ಕಾರಕ್ಕೆ ಒತ್ತಾಯ.

ಚಿಕ್ಕಬಳ್ಳಾಪುರ ಜಿಲ್ಲೆಯ ಗೌರಿಬಿದನೂರು ತಾಲ್ಲೂಕಿನ ಡಿ ಪಾಳ್ಯ ಹೋಬಳಿಯ ಬಿ ಬೊಮ್ಮಸಂದ್ರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಸಿದ್ದೇನಹಳ್ಳಿ ಗ್ರಾಮದಲ್ಲಿ 500 ಕ್ಕೂ ಹೆಚ್ಚು ಜನರು ವಾಸಿಸುತ್ತಿದ್ದು, ಈ ಗ್ರಾಮಕ್ಕೆ ಹೋಗಲು ಮತ್ತು ಬರಲು ಬಸ್ ವ್ಯವಸ್ಥೆ ಇಲ್ಲ. ಪ್ರತಿದಿನ ಕೆಲಸ, ಶಾಲೆ, ಆಸ್ಪತ್ರೆಗಳು ಮತ್ತು ಇತರ ಅಗತ್ಯ ಕೆಲಸಗಳಿಗಾಗಿ ಗ್ರಾಮದ ಹೊರಗೆ, ನಗರಗಳಿಗೆ ಹೋಗುವವರು ತುಂಬಾ ತೊಂದರೆ ಅನುಭವಿಸುತ್ತಿದ್ದಾರೆ.
ಆದ್ದರಿಂದ, ಸಿದ್ದೇನಹಳ್ಳಿ ಗ್ರಾಮಕ್ಕೆ ಬಸ್ ಸೇವೆಯನ್ನು ಪ್ರಾರಂಭಿಸಲು ಸಿದ್ದೇನಹಳ್ಳಿ ಕ್ರಾಸ್ ಬಳಿ ಹೋಗುವ ಎಲ್ಲಾ ಬಸ್‌ಗಳನ್ನು ನಿಲ್ಲಿಸಲು ಸೂಚಿಸಲು ಮತ್ತು ಗೌರಿಬಿದನೂರಿನಿಂದ ವೆಂಕಟಾಪುರ ಮಾರ್ಗಕ್ಕೆ ಮತ್ತು ಗೌರಿಬಿದನೂರಿನಿಂದ ಗುಂಡ್ಲಹಳ್ಳಿ ಮಾರ್ಗಕ್ಕೆ ಹೋಗುವ ಎಲ್ಲಾ ಬಸ್‌ಗಳು ಸಿದ್ದೇನಹಳ್ಳಿ ಗ್ರಾಮಕ್ಕೆ ಬಂದು ಹೋಗಲು ಬಸ್ ಸೇವೆಯನ್ನು ಒದಗಿಸಲು ಕ್ರಮ ಕೈಗೊಳ್ಳಲು ಸರ್ಕಾರಕ್ಕೆ ವಕೀಲರಾದ ಕಿರಣ್ ಕೆ. ಟಿ ರವರು ಮನವಿಯನ್ನು ಸಲ್ಲಿಸಿರುತ್ತಾರೆ.

ಹಾಗೂ ಮಾನ್ಯ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಸರ್ಕಾರ ಈ ಕುರಿತು ಶೀಘ್ರವಾಗಿ ಕ್ರಮ ಕೈಗೊಂಡು ಗ್ರಾಮದ ಜನತೆಗೆ ಅನುಕೂಲ ಮಾಡಿಕೊಡಬೇಕಾಗಿ
ವಕೀಲರಾದ ಕಿರಣ್ ಕೆ. ಟಿ. ಅವರು ಈ ಮೂಲಕ ಒತ್ತಾಯಿಸಿದ್ದಾರೆ.

  • ಕರುನಾಡ ಕಂದ ಪತ್ರಿಕೆ
ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ

error: Content is protected !!