ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಕೇಂದ್ರ ಸರ್ಕಾರದ ನೀತಿ ಖಂಡಿಸಿ, ಕಂಪ್ಲಿಯಲ್ಲಿ ಪ್ರತಿಭಟನೆ

ಬಳ್ಳಾರಿ / ಕಂಪ್ಲಿ : ಅಖಿಲ ಭಾರತ ಸಾರ್ವತ್ರಿಕ ಮುಷ್ಕರ ಹಿನ್ನಲೆ ಸಾಮಾಜಿಕ, ಆರ್ಥಿಕ ವ್ಯವಸ್ಥೆ ಬುಡಮೇಲು ಮಾಡುತ್ತಿರುವ ಕೇಂದ್ರ ಸರ್ಕಾರ ನೀತಿಯನ್ನು ಖಂಡಿಸಿ, ಸಿಐಟಿಯು ನೇತೃತ್ವದಲ್ಲಿ ಕಾರ್ಮಿಕ ಸಂಘಟನೆಗಳ ಜಂಟಿ ಸಮಿತಿ, ಗ್ರಾ. ಪಂ. ನೌಕರರು, ಕಟ್ಟಡ ಕಾರ್ಮಿಕರು, ಅಂಗನವಾಡಿ, ಬಿಸಿಯೂಟ, ಹಮಾಲಿ ಕಾರ್ಮಿಕರು ಸಹಕಾರದೊಂದಿಗೆ ಪಟ್ಟಣದ ಅಂಬೇಡ್ಕರ್ ವೃತ್ತದಲ್ಲಿ ಗುರುವಾರ ಪ್ರತಿಭಟನೆ ನಡೆಸಿದರು.
ನಂತರ ಸಿಐಟಿಯು ತಾಲೂಕು ಅಧ್ಯಕ್ಷ ಐ.ಹೊನ್ನೂರಸಾಬ್, ಕಾರ್ಯದರ್ಶಿ ಆರ್.ನಾಗರಾಜ ಮಾತನಾಡಿ, ಕೇಂದ್ರ ಸರ್ಕಾರ ವಿವಿಧ ಕಾರ್ಮಿಕರನ್ನು ಬದುಕಿಗೆ ಕಲ್ಲು ಹಾಕುವ ನಿಟ್ಟಿನಲ್ಲಿ ಹೊಸ ನೀತಿಯನ್ನು ತರಲು ಹೊರಟಿರುವುದು ದುರ್ದೈವವಾಗಿದೆ. ಕೇಂದ್ರ ಸರ್ಕಾರ ತಂದಿರುವ ನಾಲ್ಕು ಕಾರ್ಮಿಕ ಸಂಹಿತೆಗಳು ರದ್ದಾಗಬೇಕು. ಶ್ರಮಶಕ್ತಿ ನೀತಿ ಬೇಡ. ಗ್ರಾ. ಪಂ. ಗಳಿಗೆ ಹೆಚ್ಚಿನ ಅನುದಾನ ನೀಡಬೇಕು. ಕಾರ್ಮಿಕರ ಕಾನೂನುಗಳನ್ನು ತಿದ್ದುಪಡಿ ಮಾಡಿ ಭೂಕಾಯ್ದೆಗಳನ್ನು ತಿದ್ದುಪಡಿಯೊಂದಿಗೆ ಸಾಮಾಜಿಕ, ಆರ್ಥಿಕ ವ್ಯವಸ್ಥೆಯನ್ನು ಬದಲಾಯಿಸಲು ಹುನ್ನಾರ ನಡೆಸಿದೆ. ಆದ್ದರಿಂದ ಕೂಡಲೇ ಕಾರ್ಮಿಕ ವಿರೋದ ನೀತಿಗಳನ್ನು ಕೈಬಿಡಬೇಕು. ಇಲ್ಲವಾದಲ್ಲಿ ಮುಂದಿನ ದಿನದಲ್ಲಿ ಹೋರಾಟವು ದೊಡ್ಡ ಮಟ್ಟದಲ್ಲಿ ನಡೆಯಲಿದೆ ಎಂದರು.
ಈ ಸಂದರ್ಭದಲ್ಲಿ ಗ್ರಾ. ಪಂ ನೌಕರರ ಸಂಘದ ರಾಜ್ಯ ಸಹ ಕಾರ್ಯದರ್ಶಿ ರಾಜಾಸಾಬ್ ನೆಲ್ಲುಡಿ, ತಾಲೂಕು ಅಧ್ಯಕ್ಷ ಜಡೆಯ್ಯಸ್ವಾಮಿ, ಪ್ರಧಾನ ಕಾರ್ಯದರ್ಶಿ ಚಾಂದ್‌ಬಾಷಾ, ಖಜಾಂಚಿ ಚಂದ್ರಶೇಖರ, ಮುಖಂಡರಾದ ಬಂಡಿ ಬಸವರಾಜ, ಶಾಂತಪ್ಪ, ಆರ್.ಏಸಯ್ಯ, ಹುಸೇನಿ, ಅನುರಾಧ, ತಿಪ್ಪಮ್ಮ, ಶಾಂತಮ್ಮ ಸೇರಿದಂತೆ ಅನೇಕರಿದ್ದರು.

ವರದಿ : ಜಿಲಾನಸಾಬ್ ಬಡಿಗೇರ್

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ

error: Content is protected !!