ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ವಿದ್ಯುತ್ ಖಾಸಗೀಕರಣ ಖಂಡಿಸಿ, ಕಪ್ಪು ಪಟ್ಟಿ ಧರಿಸಿ ಸಾಂಕೇತಿಕ ಪ್ರತಿಭಟನೆ

ಬಳ್ಳಾರಿ / ಕಂಪ್ಲಿ: ವಿದ್ಯುತ್ ಇಲಾಖೆಯನ್ನು ಖಾಸಗೀಕರಣಗೊಳಿಸಲು ಮುಂದಾಗಿರುವ ಕೇಂದ್ರದ ನಡೆ ಖಂಡಿಸಿ, ಜೆಸ್ಕಾಂ ನೌಕರರು ಹಾಗೂ ಸಿಬ್ಬಂದಿಗಳು ಪಟ್ಟಣದ ಜೆಸ್ಕಾಂ ಕಛೇರಿ ಮುಂಭಾಗದಲ್ಲಿ ಕಪ್ಪು ಪಟ್ಟಿ ಧರಿಸಿ, ಸಾಂಕೇತಿಕ ಪ್ರತಿಭಟನೆ ನಡೆಸಿದರು.
ನಂತರ ಎಇಇ ಶ್ರೀನಿವಾಸ ಪ್ರಸಾದ್ ಮಾತನಾಡಿ, ವಿದ್ಯುತ್ ಖಾಸಗೀಕರಣ ಕಾಯ್ದೆ ತರಲು ಕೇಂದ್ರ ಸರ್ಕಾರ ಪಿತೂರಿ ನಡಸಿದೆ. ಇದಕ್ಕೆ ವಿದ್ಯುತ್ ಇಲಾಖೆಯ ನೌಕರರ ತೀವ್ರ ವಿರೋಧವಿದೆ. ಕೇಂದ್ರದ ನಡೆ ತದ್ವಿರುದ್ಧವಾಗಿದೆ. ಇಂಧನ ಇಲಾಖೆಯು ಸಾರ್ವಜನಿಕರ ಆಸ್ತಿಯಾಗಿದ್ದು, ಇದನ್ನು ಖಾಸಗಿ ವಲಯಕ್ಕೆ ಹಸ್ತಾಂತರಿಸುವುದರಿಂದ ರೈತರಿಗೆ ಮತ್ತು ಸಾಮಾನ್ಯ ಗ್ರಾಹಕರಿಗೆ ದೊಡ್ಡ ಮಟ್ಟದ ಅನ್ಯಾಯವಾಗಲಿದೆ. ಅಧಿವೇಶನದಲ್ಲಿ ಮಂಡಿಸಲು ಉದ್ದೇಶಿಸಿರುವ ವಿದ್ಯುತ್ ಕಾಯ್ದೆ ತಿದ್ದುಪಡಿ ಬಿಲ್ ನೌಕರರ ಹಿತಾಸಕ್ತಿಗೆ ವಿರುದ್ಧವಾಗಿದೆ. ಸಾವಿರಾರು ನೌಕರರ ತ್ಯಾಗ ಮತ್ತು ಶ್ರಮದಿಂದ ಕಟ್ಟಲ್ಪಟ್ಟ ಈ ಬೃಹತ್ ಸಂಸ್ಥೆಯನ್ನು ಉಳಿಸಿಕೊಳ್ಳುವುದು ನಮ್ಮೆಲ್ಲರ ಆದ್ಯ ಕರ್ತವ್ಯವಾಗಿದೆ. ನೌಕರರ ಒಗ್ಗಟ್ಟಿನೊಂದಿಗೆ ಹೋದಾಗ ಮಾತ್ರ ಈ ಕಾಯ್ದೆಯನ್ನು ತಡೆಯಲು ಸಾಧ್ಯ. ಈ ಕೂಡಲೇ ಕೇಂದ್ರ ಸರ್ಕಾರವು ಖಾಸಗೀಕರಣದ ನಿರ್ಧಾರವನ್ನು ಕೈಬಿಡಬೇಕು, ಇಲ್ಲದಿದ್ದರೆ ಮುಂದಿನ ದಿನಗಳಲ್ಲಿ ಹೋರಾಟ ಇನ್ನಷ್ಟು ತೀವ್ರಗೊಳಿಸಲಾಗುವುದು ಎಂದು ಎಚ್ಚರಿಸಿದರು.
ಈ ಸಂದರ್ಭದಲ್ಲಿ ಸೆಕ್ಷನ್ ಅಧೀಕ್ಷಕ ವಿನೋದ್, ಜೆಇ ಭೀಮೇಶ, ಪಟ್ಟಣ ಶಾಖಾ ಅಧಿಕಾರಿ ಶಮಿವುಲ್ಲಾ ಸೇರಿದಂತೆ ಪಟ್ಟಣ ಮತ್ತು ಗ್ರಾಮೀಣ ನೌಕರರು ಇದ್ದರು.

ವರದಿ : ಜಿಲಾನಸಾಬ್ ಬಡಿಗೇರ್

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ

error: Content is protected !!