ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಪದ್ಮಶ್ರೀ ಪ್ರಶಸ್ತಿ ಪುರಸ್ಕೃತೆ ಮಂಜಮ್ಮ ಜೋಗತಿಗೆ ಸನ್ಮಾನ

ಬಳ್ಳಾರಿ / ಕಂಪ್ಲಿ : ಪಟ್ಟಣದಲ್ಲಿರುವ ಕ. ರ. ವೇ ಮಹಿಳಾ ನಗರ ಘಟಕದ ಅಧ್ಯಕ್ಷೆ ಹೊನ್ನಳ್ಳಿ ಶ್ರೀದೇವಿಯವರ ನಿವಾಸದಲ್ಲಿ ಪದ್ಮಶ್ರೀ ಪ್ರಶಸ್ತಿ ಪುರಸ್ಕೃತೆ ಮಂಜಮ್ಮ ಜೋಗತಿ ಇವರನ್ನು ಸನ್ಮಾನಿಸಿ ಗೌರವಿಸಿದರು.
ನಂತರ ಹೊನ್ನಳ್ಳಿ ಶ್ರೀದೇವಿ ಮಾತನಾಡಿ, ನಾವು ಮಾಡುವ ಕೆಲಸ ದಲ್ಲಿ ಶ್ರದ್ಧೆ ಭಕ್ತಿ, ಪ್ರಾಮಾಣಿಕತೆ ಇದ್ದರೆ ಯಶಸ್ಸು ಸಾಧ್ಯ. ಈ ಜಗತ್ತಿನಲ್ಲಿ ಯಾರು ಯಾರನ್ನು ಗುರುತಿಸುವುದಿಲ್ಲ. ನಮ್ಮ ಪ್ರಯತ್ನ, ಶ್ರಮದಿಂದ ಮಾತ್ರ ಮೇಲೆ ಬರಲು ಸಾಧ್ಯ, ಜೀವನ ಸಾರ್ಥಕ ಪಡಿಸಿಕೊಳ್ಳಲು ಪರಿಶ್ರಮ ಅಗತ್ಯ ಸಾಧನೆ ಮಾಡಲು ಶರೀರ ಮುಖ್ಯ. ಅದನ್ನು ಸಾರ್ಥಕ ರೀತಿಯಲ್ಲಿ ಬಳಸಬೇಕು. ಅದರ ಮೂಲಕ ಸಮಾಜದಲ್ಲಿ ಆದರ್ಶ ಜೀವನ ನಡೆಸಬೇಕು. ಮಂಜಮ್ಮ ತಾಯಿ ಸಾಧನೆ ಸಮಾಜಕ್ಕೆ ಪ್ರೇರಣೆ ಎಂದು ಹೇಳಿದರು.
ಯುವ ಮುಖಂಡ ಸುರೇಶ ಮಾತನಾಡಿ, ಮಂಜಮ್ಮ ತಾಯಿ ಸಾಧನೆ ಇನ್ನಷ್ಟು ಎತ್ತರಕ್ಕ ಬೆಳೆಯಲಿ. ಜಾನಪದ ಕಲೆಯನ್ನು ಉಳಿಸಿ, ಮಂಗಳಮುಖಿಯರ ಜೀವನ ಸಾರ್ಥಕತೆಗೆ ಮಂಜಮ್ಮ ಜೋಗತಿ ಅವರು ಶ್ರಮಿಸುತ್ತಿದ್ದಾರೆ. ಮಂಜಮ್ಮ ಅವರು ಜಾನಪದ ಕಲೆಯ ಮೂಲಕ ಸಮಾಜಕ್ಕೆ ಉತ್ತಮ ಸಂದೇಶ ನೀಡಿದ್ದಾರೆ ಎಂದರು.

ವರದಿ : ಜಿಲಾನಸಾಬ್ ಬಡಿಗೇರ್

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ

error: Content is protected !!