ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಸಮಸ್ಯೆ ಇತ್ಯರ್ಥವಾಗುವವರೆಗೂ ಸೇತುವೆ ಕಾಮಗಾರಿ ಸ್ಥಗಿತಗೊಳಿಸುವಂತೆ ಆಗ್ರಹ

ಬಳ್ಳಾರಿ / ಕಂಪ್ಲಿ : ಪಟ್ಟಣದ ಗಂಗಾವತಿ ರಸ್ತೆಯಲ್ಲಿರುವ ಪುರಾತನ ಸಿದ್ಧಿ ವಿನಾಯಕ ದೇವಸ್ಥಾನ ಮುಂಭಾಗದಲ್ಲಿರುವ ಸೇತುವೆ ಕಾಮಗಾರಿಯನ್ನು ದೇವಾಲಯಕ್ಕೆ ಧಕ್ಕೆಯಾಗದ ರೀತಿಯಲ್ಲಿ ನಿರ್ಮಿಸಬೇಕೆಂದು ಆಗ್ರಹಿಸಿ, ವರಸಿದ್ಧಿ ವಿನಾಯಕ ದೇವಸ್ಥಾನ ಸಮಿತಿ ಹಾಗೂ ನೀರು ಬಳಕೆದಾರರ ಸಹಕಾರ ಸಂಘ ಮತ್ತು ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಹಾಗೂ ಸಂಘ-ಸಂಸ್ಥೆಯವರು ಇಲ್ಲಿನ ವರಸಿದ್ಧಿ ವಿನಾಯಕ ದೇವಸ್ಥಾನದಲ್ಲಿ ಲೋಕೋಪಯೋಗಿ ಇಲಾಖೆಯ ಜೆಇ ಆನಂದ್‌ಗೆ ಮಂಗಳವಾರ ಮನವಿ ಪತ್ರ ಸಲ್ಲಿಸಿದರು.
ನಂತರ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆಯ ಜಿಲ್ಲಾಧ್ಯಕ್ಷ ಬಿ.ವಿ.ಗೌಡ ಮಾತನಾಡಿ, ಇಲ್ಲಿನ ಬೆನಕಲ ಕಾಲುವೆ ಎಂಬುವುದು ವಿಜಯನಗರ ಕಾಲದ ಕಾಲುವೆಯಾಗಿರುವ ಜೊತೆಗೆ ಇಲ್ಲಿನ ದೇವಸ್ಥಾನಕ್ಕೆ ತನ್ನದೇ ಆದ ಇತಿಹಾಸವಿದೆ. ಆದರೆ, ಕಾಮಗಾರಿ ನೆಪದಲ್ಲಿ ದೇವಸ್ಥಾನ ಮಾಯ ಮಾಡುವ ಹುನ್ನಾರ ಮಾಡುತ್ತಿರುವುದು ಶೋಭೆಯಲ್ಲ. ಬೆನಕನ ಕಾಲುವೆಯ ಸೇತುವೆ ಅಗಲೀಕರಣವನ್ನು ಕೂಡಲೇ ಸ್ಥಗಿತಗೊಳಿಸಬೇಕು. ಇಲ್ಲಿನ ದೇವಸ್ಥಾನದ ಮುಂಭಾಗದಲ್ಲಿ 10 ಅಡಿ ಜಾಗ ಬಿಟ್ಟು, ಸೇತುವೆ ನಿರ್ಮಿಸಬೇಕು. ದೇವಸ್ಥಾನದ ಎದುರುಗಡೆಯ ಕಾಲುವೆ ಜಾಗವು ಸರ್ಕಾರದ್ದಾಗಿದ್ದು ಆ ಕಡೆಗೆ ಸೇತುವೆ ಕಾಮಗಾರಿ ವಿಸ್ತರಿಸಬೇಕು. ಇಲ್ಲಿನ ಸಮಸ್ಯೆ ಇತ್ಯಾರ್ಥವಾಗುವರೆಗೂ ಸೇತುವೆ ಕಾಮಗಾರಿ ಮಾಡಬಾರದು. ಒಂದು ವೇಳೆ ಕಾಮಗಾರಿ ಮುಂದುವರೆಸಿದ್ದಲ್ಲಿ ಮುಂದಿನ ಹೋರಾಟದ ರೂಪುರೇಷ ದೊಡ್ಡಮಟ್ಟದಲ್ಲಿರುತ್ತದೆ. ಆದ್ದರಿಂದ ಸಂಬಂಧಪಟ್ಟ ಲೋಕೋಪಯೋಗಿ ಇಲಾಖೆಯ ಅಧಿಕಾರಿಗಳು ಗಮನ ಹರಿಸಿ, ಇಲ್ಲಿನ ಸಮಸ್ಯೆಗೆ ಮುಕ್ತಿ ನೀಡಿ, ಕಾಮಗಾರಿ ಆರಂಭಿಸಬೇಕೆಂದು ಒತ್ತಾಯಿಸಿದರು.
ಈ ಸಂದರ್ಭದಲ್ಲಿ ಪಿಐ ಕೆ.ಬಿ.ವಾಸುಕುಮಾರ, ದೇವಸ್ಥಾನ ಸಮಿತಿಯ ಅಧ್ಯಕ್ಷ ಕಾಮಗಂಡಿ ಗವಿಸಿದ್ದಪ್ಪ, ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆಯ ತಾಲೂಕು ಅಧ್ಯಕ್ಷ ತಿಮ್ಮಪ್ಪನಾಯಕ, ಮುಖಂಡರಾದ ಎನ್.ಎಂ.ಪತ್ರೆಯ್ಯಸ್ವಾಮಿ, ಪುಟ್ಟಿ ಸಚಿನ್, ಕೊಟ್ಟೂರು ರಮೇಶ, ಹೆಚ್.ಶಶಿಧರ್, ವೀರಾಂಜಿನೇಯಲು, ಸುರೇಶ, ಶ್ರೀನಿವಾಸ ಸೇರಿದಂತೆ ಅನೇಕರು ಇದ್ದರು.

ವರದಿ : ಜಿಲಾನಸಾಬ್ ಬಡಿಗೇರ್

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ

error: Content is protected !!