ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಮೂರೂವರೆ ವರ್ಷಕ್ಕೆ ಎಸ್ ಪಿ ಆದ ಈ ಬಾಲಕ

ದಾವಣಗೆರೆ: ರಕ್ತದ ಕ್ಯಾನ್ಸರ್‌ನಿಂದ ಬಳಲುತ್ತಿರುವ ಮೂರೂವರೆ ವರ್ಷದ ಬಾಲಕ ಹಿತಾರ್ಥ್‌ ಅವರ ಕನಸನ್ನು ನನಸುಗೊಳಿಸಿದ ಅಪರೂಪದ ಘಟನೆ ದಾವಣಗೆರೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕಚೇರಿಯಲ್ಲಿ ನಡೆದಿದೆ. ಮಗನನ್ನು ಪೊಲೀಸ್ ಮಾಡಬೇಕೆಂಬ ಬಾಲಕನ ತಂದೆಯ ಆಸೆಗೆ ಸ್ಪಂದಿಸಿದ ಎಸ್ ಪಿ ಶೇಖರ್ ಹೆಚ್ ಟಿ, ಖಾಕಿ ತೊಟ್ಟು ಬಂದ ಮಗುವನ್ನು ತಮ್ಮ ಚೇರ್ ಮೇಲೆ ಕೂರಿಸಿ ಮಾನವೀಯತೆ ಮೆರೆದಿದ್ದಾರೆ.

ಒಂದೂವರೆ ವರ್ಷಕ್ಕೆ ಕಾನ್ಸರ್!

ಹೊನ್ನಾಳಿ ತಾಲೂಕಿನ ಹೊಸಳ್ಳಿ ಗ್ರಾಮದ ಪ್ರಭು ಹಾಗೂ ಅನುಷಾ ದಂಪತಿಯ ಎರಡನೇ ಪುತ್ರನಾದ ಹಿತಾರ್ಥ್‌ಗೆ ಒಂದೂವರೆ ವರ್ಷ ವಯಸ್ಸಿನಲ್ಲಿಯೇ ರಕ್ತದ ಕ್ಯಾನ್ಸರ್ ಪತ್ತೆಯಾಗಿತ್ತು. ಕಳೆದ ಎರಡು ವರ್ಷಗಳಿಂದ ಆತ ಚಿಕಿತ್ಸೆ ಪಡೆಯುತ್ತಿದ್ದನಲ್ಲದೆ, ಮಣಿಪಾಲ್ ಆಸ್ಪತ್ರೆಯಲ್ಲಿ ಕಳೆದ ಎಂಟು ತಿಂಗಳು ನಿರಂತರ ಚಿಕಿತ್ಸೆ ಪಡೆದಿದ್ದಾನೆ. ಚಿಕಿತ್ಸೆ ಫಲವಾಗಿ ಈಗಾಗಲೇ ಶೇಕಡಾ 80 ರಷ್ಟು ಚೇತರಿಕೆ ಕಂಡಿದ್ದರೂ ಪಾಲಕರ ಮನಸ್ಸು ಜರ್ಜರಿತವಾಗಿಯೇ ಉಳಿದಿದೆ.
ಓರ್ವ ಪೊಲೀಸ್ ಅಧಿಕಾರಿಯಾಗಬೇಕೆಂದು ಆಸೆ ಹೊತ್ತಿದ್ದ ಬಾಲಕನ ತಂದೆ ಪ್ರಭುವಿಗೆ ಆ ಆಸೆ ಈಡೇರಿಸಿಕೊಳ್ಳುವ ಅವಕಾಶ ಸಿಕ್ಕಿರಲಿಲ್ಲ. ಆದರೆ ಹಿತಾರ್ಥ್ ಹುಟ್ಟಿದ ದಿನವೇ ತಮ್ಮ ಮಗ ಪೊಲೀಸ್ ಅಧಿಕಾರಿ ಆಗಬೇಕು ಎಂಬ ಆಸೆಯೂ ಹುಟ್ಟಿಕೊಂಡಿತ್ತು. ಆದರೆ ಮಗುವಿಗೆ ಬ್ಲಡ್ ಕ್ಯಾನ್ಸರ್ ಇದೆ ಎಂದು ಗೊತ್ತಾದಾಗ ತಂದೆ ತಾಯಿ ಇಬ್ಬರ ಹೃದಯವೂ ನುಚ್ಚು ನೂರಾಗಿತ್ತು. ಆದರೆ ಮಗನನ್ನು ಪೊಲೀಸ್ ಯೂನಿಫಾರ್ಮ್​ನಲ್ಲಿ ನೋಡಬೇಕೆನ್ನುವ ಪ್ರಭುವಿನ ಆಸೆ ಹಾಗೆಯೇ ಇತ್ತು. ಆದ ಕಾರಣ ಮಗನಿಗೆ ಖಾಕಿ ಯೂನಿಫಾರ್ಮ್ ಧರಿಸಿ ಎಸ್‌ಪಿ ಕಚೇರಿಗೆ ಕರೆದುಕೊಂಡು ಬಂದಿದ್ದರು. ಪರಿಸ್ಥಿತಿ ತಿಳಿದ ಎಸ್‌ಪಿ ಶೇಖರ್ ಹೆಚ್.ಟಿ. ಅವರು ಹಿತಾರ್ಥ್‌ಗೆ ಹೂಗುಚ್ಛ ನೀಡಿ ಸ್ವಾಗತಿಸಿ, ತಮ್ಮ ಕುರ್ಚಿಯಲ್ಲಿ ಕೂರಿಸಿ ಕೆಲಕಾಲ “ಎಸ್‌ಪಿ” ಆಗುವ ಅವಕಾಶ ನೀಡಿದರು.

ಮಗು ನಗುಮುಖದಿಂದ ಕುರ್ಚಿಯಲ್ಲಿ ಕುಳಿತ ದೃಶ್ಯ ಕಂಡು ಅಲ್ಲಿದ್ದ ಪೊಲೀಸ್ ಅಧಿಕಾರಿಗಳು ಹಾಗೂ ಸಿಬ್ಬಂದಿ ಭಾವುಕರಾದರು. ಎಸ್‌ಪಿ ಅವರ ಈ ಮಾನವೀಯ ನಡೆಗೆ ಸಾರ್ವಜನಿಕ ವಲಯದಲ್ಲಿ ಪ್ರಶಂಸೆ ವ್ಯಕ್ತವಾಗಿದೆ. ಬಾಲಕನ ಕನಸಿಗೆ ಚಿಗುರುಕೊಟ್ಟ ಈ ಘಟನೆ ಎಲ್ಲರ ಹೃದಯ ಸ್ಪರ್ಶಿಸಿದೆ.

ವರದಿ : ಜಿಲಾನಸಾಬ್ ಬಡಿಗೇರ್

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ

error: Content is protected !!