ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಮಂಗಳಮುಖಿ ಎಂದು ಗೊತ್ತಿದ್ದರೂ ಪ್ರೀತಿಯಲ್ಲಿ ಬಿದ್ದ ಯುವಕ : ಆಮೇಲಾಗಿದ್ದು ದುರಂತ

ಬಳ್ಳಾರಿ : ನಗರದ ಕೆಎಂಎಫ್ (KMF) ಡೈರಿ ಕ್ರಾಸ್ ಬಳಿಯ ಬಾಡಿಗೆ ಮನೆಯಲ್ಲಿ ಪರಸ್ಪರ ಪ್ರೀತಿಸುತ್ತಿದ್ದ ಮಂಗಳಮುಖಿ ಮತ್ತು ಯುವಕ ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ ಘಟನೆ ಬೆಳಕಿಗೆ ಬಂದಿದೆ. ಮನೆಯ ಕಿಟಕಿಗೆ ನೇಣು ಬಿಗಿದ ಸ್ಥಿತಿಯಲ್ಲಿ ಇಬ್ಬರ ಶವಗಳು ಪತ್ತೆಯಾಗಿದ್ದು, ಸ್ಥಳೀಯರಲ್ಲಿ ಆತಂಕ ಮೂಡಿಸಿದೆ. ಮೃತರನ್ನು ಮಂಗಳಮುಖಿ ಸುಹಾಸಿನಿ (29) ಹಾಗೂ ಶೇಖರ್ ಅಲಿಯಾಸ್ ಮಣಿ (31) ಎಂದು ಗುರುತಿಸಲಾಗಿದೆ. ಶೇಖರ್ ವಿಜಯನಗರ ಜಿಲ್ಲೆಯ ಹೊಸಪೇಟೆ ತಾಲೂಕಿನ ಮಲ್ಪನಗುಡಿ ಗ್ರಾಮದ ನಿವಾಸಿಯಾಗಿದ್ದು, ಆಟೋ ಚಾಲಕರಾಗಿ ಜೀವನ ನಡೆಸುತ್ತಿದ್ದ. ಸುಹಾಸಿನಿ ಬಳ್ಳಾರಿ ತಾಲೂಕಿನ ಚಾಗನೂರು ಗ್ರಾಮದವರಾಗಿದ್ದರು.

ಇಬ್ಬರೂ ಕಳೆದ ಆರು ವರ್ಷಗಳಿಂದ ಒಟ್ಟಿಗೆ ವಾಸವಾಗಿದ್ದರು. ಸುಹಾಸಿನಿ ಮಂಗಳಮುಖಿ ಎಂದು ಗೊತ್ತಿದ್ದರೂ ಶೇಖರ್ ಪ್ರೀತಿಸುತ್ತಿದ್ದರು ಎನ್ನಲಾಗಿದೆ.

ಘಟನೆ ಕುರಿತು ಮಾಹಿತಿ ಪಡೆದ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ನಂತರ ಶವಗಳನ್ನು ಮರಣೋತ್ತರ ಪರೀಕ್ಷೆಗೆ ಬಳ್ಳಾರಿ ಬಿಮ್ಸ್ ಆಸ್ಪತ್ರೆಗೆ ರವಾನಿಸಲಾಗಿದೆ. ಪ್ರಕರಣ ಸಂಬಂಧ ಬ್ರೂಸ್‌ಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರಿದಿದೆ.

ಮಂಗಳಮುಖಿಯರಿಂದ ಗಂಭೀರ ಆರೋಪ

ಮಂಗಳಮುಖಿ ಸಮುದಾಯದ ಸದಸ್ಯರು ಶೇಖರ್ ವಿರುದ್ಧ ಗಂಭೀರ ಆರೋಪಗಳನ್ನು ಮಾಡಿದ್ದಾರೆ. ಹಣಕ್ಕಾಗಿ ಸುಹಾಸಿನಿಯ ಜೊತೆ ಇದ್ದ ಶೇಖರ್, ನಂತರ ಕೊಲೆ ಮಾಡಿ ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂದು ಶಂಕೆ ವ್ಯಕ್ತಪಡಿಸಿದ್ದಾರೆ. ಆದರೆ ಇದು ಆತ್ಮಹತ್ಯೆಯೋ ಅಥವಾ ಕೊಲೆಯೋ ಎಂಬುದರ ಬಗ್ಗೆ ಪೊಲೀಸರು ಎಲ್ಲಾ ಆಯಾಮಗಳಲ್ಲಿ ತನಿಖೆ ನಡೆಸುತ್ತಿದ್ದಾರೆ.

ಮತ್ತೊಂದೆಡೆ ಕುಟುಂಬಸ್ಥರ ಆಕ್ರಂದನ ಮುಗಿಲುಮುಟ್ಟಿದೆ. ಸಾವಿನ ನಿಖರ ಕಾರಣ ಮರಣೋತ್ತರ ವರದಿ ನಂತರವೇ ತಿಳಿಯಲಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ವರದಿ : ಜಿಲಾನಸಾಬ್ ಬಡಿಗೇರ್

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ

error: Content is protected !!