ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಮಹಿಳೆಯರ ರಕ್ಷಣೆಗೆ ‘ಅಕ್ಕ ಪಡೆ’ಗೆ ಚಾಲನೆ..!!

ಬೆಳಗಾವಿ: ಸಚಿವೆ ಲಕ್ಷ್ಮೀ ಹೆಬ್ಬಾಳಕರರಿಂದ ನಗರದಲ್ಲಿ ಶುಭಾರಂಭ.

ನಗರದ ಚನ್ನಮ್ಮ ವೃತ್ತದಲ್ಲಿ ಮಂಗಳವಾರ (ಫೆ.17) ಮಹಿಳೆಯರು ಮತ್ತು ಮಕ್ಕಳ ಸುರಕ್ಷತೆಗಾಗಿ ವಿಶೇಷವಾಗಿ ರಚಿಸಲಾದ “ಅಕ್ಕ ಪಡೆ”ಗೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ ಅವರು ಅಧಿಕೃತವಾಗಿ ಚಾಲನೆ ನೀಡಿದರು.

ಈ ಸಂದರ್ಭದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವೆ ಅವರು, “ಅಕ್ಕ ಪಡೆ” 24 ಗಂಟೆಗಳೂ ಸಕ್ರಿಯವಾಗಿ ಕಾರ್ಯ ನಿರ್ವಹಿಸಲಿದ್ದು, ತರಬೇತಿ ಪಡೆದ ಮಹಿಳಾ ಸಿಬ್ಬಂದಿಯನ್ನೇ ಆಯ್ಕೆ ಮಾಡಲಾಗಿದೆ ಎಂದು ತಿಳಿಸಿದರು. ಶಾಲೆಗಳು, ಕಾಲೇಜುಗಳು, ಮಾಲ್‌ಗಳು, ದೇವಸ್ಥಾನಗಳು, ಬಸ್ ನಿಲ್ದಾಣಗಳು ಮತ್ತು ರೈಲ್ವೆ ನಿಲ್ದಾಣಗಳಂತಹ ಜನಸಂದಣಿ ಪ್ರದೇಶಗಳಲ್ಲಿ ಅಕ್ಕ ಪಡೆ ನಿಯಮಿತವಾಗಿ ಗಸ್ತು ತಿರುಗಲಿದೆ ಎಂದರು.

ಸಂಕಷ್ಟದಲ್ಲಿರುವ ಮಹಿಳೆಯರು ಮತ್ತು ಮಕ್ಕಳಿಗೆ ತಕ್ಷಣದ ನೆರವು ನೀಡುವ ಉದ್ದೇಶದಿಂದ ಈ ಪಡೆ ರಚಿಸಲಾಗಿದೆ. ಪೊಲೀಸ್ ಗಸ್ತು ವಾಹನಗಳ ಮಾದರಿಯಲ್ಲಿ ಕಾರ್ಯ ನಿರ್ವಹಿಸುವ ಅಕ್ಕ ಪಡೆ, ಸಾರ್ವಜನಿಕ ಸ್ಥಳಗಳಲ್ಲಿ ಕಿರುಕುಳ, ದೌರ್ಜನ್ಯ ಅಥವಾ ಯಾವುದೇ ಅಪಾಯ ಎದುರಾದಾಗ ತಕ್ಷಣ ಸ್ಥಳಕ್ಕೆ ಧಾವಿಸಿ ರಕ್ಷಣೆ ಒದಗಿಸಲಿದೆ. ಮಹಿಳೆಯರು ಮತ್ತು ಮಕ್ಕಳಿಗೆ ಸುರಕ್ಷಿತ ವಾತಾವರಣ ಕಲ್ಪಿಸುವುದು ಇದರ ಮೂಲ ಉದ್ದೇಶವಾಗಿದೆ ಎಂದು ಹೇಳಿದರು.

ಮಹಿಳೆಯರ ಆರ್ಥಿಕ ಹಾಗೂ ಸಾಮಾಜಿಕ ಸದೃಢತೆಗೆ ಸರ್ಕಾರ ಹಲವು ಯೋಜನೆಗಳನ್ನು ಜಾರಿಗೆ ತಂದಿದ್ದು, ಅವುಗಳ ಸಾಲಿನಲ್ಲಿ “ಅಕ್ಕ ಪಡೆ” ಕೂಡ ಮಹಿಳಾ ಸುರಕ್ಷತೆಯತ್ತ ಮಹತ್ವದ ಹೆಜ್ಜೆಯಾಗಿದೆ ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳಕರ ಅಭಿಪ್ರಾಯಪಟ್ಟರು.

‘ಅಕ್ಕ ಪಡೆ’ ಅಣಕು ಪ್ರದರ್ಶನ
ಚಾಲನಾ ಸಮಾರಂಭದ ನಂತರ ಸಚಿವೆ ಅವರು ಅಕ್ಕ ಪಡೆಯ ಗಸ್ತು ವಾಹನಗಳಿಗೆ ಹಸಿರು ನಿಶಾನೆ ತೋರಿಸಿದರು. ಬಳಿಕ ಸಿಬ್ಬಂದಿಯವರು ರಕ್ಷಣಾತ್ಮಕ ಅಣಕು ಪ್ರದರ್ಶನಗಳನ್ನು ನಡೆಸಿ, ತಮ್ಮ ಸನ್ನದ್ಧತೆಯನ್ನು ತೋರಿಸಿದರು.

ಈ ಕಾರ್ಯಕ್ರಮದಲ್ಲಿ ನಗರ ಪೊಲೀಸ್ ಆಯುಕ್ತ ಭೂಷಣ್ ಗುಲಾಬರಾವ್ ಬೊರಸೆ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ. ರಾಮರಾಜನ್, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ರಾಹುಲ್ ಶಿಂಧೆ, ಅಕ್ಕ ಪಡೆ ರಾಜ್ಯ ಸಂಯೋಜಕಿ ಶೈನಿ, ಯೋಜನಾ ನಿರ್ದೇಶಕ ರವಿ ಬಂಗಾರಪ್ಪ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕ ಚೇತನಕುಮಾರ, ಡಿಡಿಪಿಐ ಲೀಲಾವತಿ ಹಿರೇಮಠ ಹಾಗೂ ಕ್ಷೇತ್ರ ಶಿಕ್ಷಣಾಧಿಕಾರಿ ರವಿ ಭಜಂತ್ರಿ ಸೇರಿದಂತೆ ಹಲವರು ಉಪಸ್ಥಿತರಿದ್ದರು.

ವರದಿ. ವಿಠ್ಠಲ ಖೋಕಾಟೆ

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ

error: Content is protected !!