ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಕಂಪ್ಲಿಯಲ್ಲಿ ಶಾಸಕ ಜೆ.ಎನ್.ಗಣೇಶ್ ನಿವಾಸದ ಮುಂಭಾಗದಲ್ಲಿ ಉತ್ತರ ಕರ್ನಾಟಕ ಪ್ರದೇಶ ವಾಲ್ಮೀಕಿ ನಾಯಕ ಸಮಾಜದಿಂದ ಪ್ರತಿಭಟನೆ

ಬಳ್ಳಾರಿ / ಕಂಪ್ಲಿ : ಬೇರೆ ಬೇರೆ ಜನಾಂಗದವರು ವಾಲ್ಮೀಕಿ ನಾಯಕ ಸಮಾಜದ ಹೆಸರಿನಲ್ಲಿ ಪಡೆಯುತ್ತಿರುವ ಸುಳ್ಳು ಜಾತಿ ಪ್ರಮಾಣ ವಿತರಣೆಯನ್ನು ತಡೆಗಟ್ಟುವಲ್ಲಿ ಶಾಸಕರ ವಿಫಲತೆಯನ್ನು ವಿರೋಧಿಸಿ ಹಾಗೂ ಪರಿಶಿಷ್ಟ ಪಂಗಡದ ಸಂವಿಧಾನದ ಹಕ್ಕುಗಳ ರಕ್ಷಣೆಗಾಗಿ ಉತ್ತರ ಕರ್ನಾಟಕ ಪ್ರದೇಶ ವಾಲ್ಮೀಕಿ ನಾಯಕ ಸಮಾಜದಿಂದ ಕಂಪ್ಲಿ ಪಟ್ಟಣದ ಹೊಸಪೇಟೆ ಬೈಪಾಸ್ ರಸ್ತೆಯಲ್ಲಿರುವ ಶಾಸಕ ಜೆ.ಎನ್.ಗಣೇಶ್ ಅವರ ನಿವಾಸದ ಮುಂದೆ ಪ್ರತಿಭಟನೆಯನ್ನು ನಡೆಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ಉತ್ತರ ಕರ್ನಾಟಕ ಪ್ರದೇಶ ವಾಲ್ಮೀಕಿ ನಾಯಕ ಸಂಘದ ಅಧ್ಯಕ್ಷರಾದ ಮಾರೆಪ್ಪ ನಾಯಕ ಮಗದಂಪೂರ, ಎಸ್ ಸಿ ,ಎಸ್ ಟಿ ನಕಲಿ ಜಾತಿ ಪ್ರಮಾಣ ಪತ್ರಗಳ ತಡೆ ಸಮಿತಿ ರಾಜ್ಯಾಧ್ಯಕ್ಷರಾದ ಕಲಬುರಗಿಯ ಶ್ರವಣಕುಮಾರ್ ಡಿ.ನಾಯಕ, ಧರಪ್ಪ ನಾಯಕ, ಬಳ್ಳಾರಿ ನಗರ ಪಾಲಿಕೆ ಸದಸ್ಯ ಹನುಮಂತಪ್ಪ, ವಾಲ್ಮೀಕಿ ನಾಯಕ ಮಹಾಸಭಾದ ಕಂಪ್ಲಿ ತಾಲ್ಲೂಕು ಅಧ್ಯಕ್ಷ ನೀರಗಂಟಿ ವೀರೇಶ್, ಕುರುಗೊಡು ತಾಲ್ಲೂಕು ಅಧ್ಯಕ್ಷ ನಾಗರಾಜ ಹಾಗೂ ಇತರರು ಹಿಂದುಳಿದ ಪ್ರವರ್ಗ-1ರಲ್ಲಿ ಬರುವ ಕೋಲಿ/ಕಬ್ಬಿಲಿಗ ಜನಾಂಗದ ತಳವಾರರು ಪರಿಶಿಷ್ಟ-ಪಂಗಡ, ನಾಯಕ, ನಾಯ್ಕಡ ಹೆಸರಿನಲ್ಲಿ ಜಾತಿಪ್ರಮಾಣ ಪತ್ರಗಳು, ಸಿಂಧುತ್ವಗಳನ್ನು ತೆಗೆದುಕೊಳ್ಳುವುದನ್ನು ತಡೆಗಟ್ಟಬೇಕು, ಹಿಂದುಳಿದ ಪ್ರವರ್ಗ-1ರಲ್ಲಿ ಬರುವ ಕೋಲಿ/ಕಬ್ಬಲಿಗ/ ಜನಾಂಗದ ವೃತ್ತಿ ಸೂಚಕ ತಳವಾರರನ್ನು ಹಿಂದುಳಿದ ಪ್ರವರ್ಗ-1ರ ಪಟ್ಟಿಯ ಕ್ರಮಸಂಖ್ಯೆ 6 ಕ್ಕೆ ಬೆಸ್ತ/ಕೋಲಿ/ಕಬ್ಬಲಿಗ ಗುಂಪಿನ 38ನೇ ಪದವಾಗಿ ಸೇರಿಸಬೇಕು. ಕರ್ನಾಟಕ ಉಚ್ಚ ನ್ಯಾಯಾಲಯದ ರಿಟ್ ಅರ್ಜಿ ಸಂಖ್ಯೆ 13777/2023 ಹೂಡಿದ ಧಾವೆಯ ಮಧ್ಯಂತರ ಆದೇಶದ ಪ್ರಕಾರ ಪರಿಶಿಷ್ಟ ಪಂಗಡದ ನಾಯಕ, ನಾಯ್ಕಡ, ತಳವಾರ ಹೆಸರಿನಲ್ಲಿ ನಕಲಿ ಜಾತಿ ಪ್ರಮಾಣ ಪತ್ರಗಳನ್ನು ಪಡೆದುಕೊಂಡವರು ಮತ್ತು ನೀಡಿದವರ ಮೇಲೆ ಶೀಘ್ರವೇ ಕಾನೂನು ಕ್ರಮಗಳನ್ನು ಕೈಗೊಳ್ಳಬೇಕು.
ಪರಿಶಿಷ್ಟ ಪಂಗಡದ ವಿದ್ಯಾರ್ಥಿಗಳಿಗೆ ಶಿಕ್ಷಕನ ಮತ್ತು ಉನ್ನತ ಶಿಕ್ಷಣದಲ್ಲಿ ವಿದ್ಯಾಭ್ಯಾಸ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ಸ್ಕಾಲರ್ ಶಿಪ್, ಪ್ರೋತ್ಸಾಹಧನ, ಸಹಾಯಧನ ತಕ್ಷಣ ಬಿಡುಗಡೆ ಮಾಡಬೇಕು. ರಾಜ್ಯದ ವಿ. ವಿ ಗಳಲ್ಲಿ ಸಂಶೋಧನೆ ಮಾಡುತ್ತಿರುವ ಮತ್ತು ಸ್ನಾತಕೋತ್ತರ ಪದವಿ ವಿದ್ಯಾರ್ಥಿಗಳಿಗೆ ಮಾಸಿಕ ವೇತನ, ವಸತಿ ವೇತನ ಕೂಡಲೇ ಬಿಡುಗಡೆ ಮಾಡಬೇಕು. ಪರಿಶಿಷ್ಟ ಪಂಗಡದ ಕಲ್ಯಾಣ ಇಲಾಖೆಗೆ ಜನಾಂಗದ ಅಭಿವೃದ್ಧಿಗೋಸ್ಕರ 15 ಸಾವಿರ ಕೋಟಿ ಮತ್ತು ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡದ ಅಭಿವೃದ್ಧಿ ನಿಗಮಕ್ಕೆ ಒಂದು ಸಾವಿರ ಕೋಟಿ ಬಿಡುಗಡೆ ಮಾಡಬೇಕು, ರಾಜ್ಯದಲ್ಲಿ ಬುಡಕಟ್ಟು ವಿಶ್ವ ವಿದ್ಯಾಲಯ ಸ್ಥಾಪನೆ ಮಾಡಬೇಕು. ರಾಜ್ಯದಲ್ಲಿ ಪರಿಶಿಷ್ಟ ಪಂಗಡದ ಬೇಡ, ವಾಲ್ಮೀಕಿ,ನಾಯಕ ಜನಾಂಗದವರ ಮೇಲೆ ನಿರಂತರ ದೌರ್ಜನ್ಯ, ದಬ್ಬಾಳಿಕೆ, ಕೊಲೆ, ಅತ್ಯಾಚಾರ, ಅವಮಾನ ಮುಂತಾದ ಘಟನೆಗಳು ದಿನನಿತ್ಯ ಹೆಚ್ಚಾಗುತ್ತಿದ್ದು, ಇಂತಹ ಪ್ರಕರಣಗಳನ್ನು ತಡೆಗಟ್ಟಬೇಕು. ನಾಗರೀಕ ಜಾರಿ ನಿರ್ದೇಶನಾಲಯಕ್ಕೆ ನಕಲಿ ಜಾತಿ ಪ್ರಮಾಣ ಪತ್ರಗಳನ್ನು ಸ್ವತಂತ್ರ ತನಿಖೆ ಮಾಡಲು ಮತ್ತು ಸುಮೋಟೋ ಪ್ರಕರಣ ದಾಖಲಿಸಿಕೊಳ್ಳುವ ಅಧಿಕಾರವನ್ನು ನೀಡಬೇಕೆಂದು ಆಗ್ರಹಿಸಿದರಲ್ಲದೆ ಪರಿಶಿಷ್ಟ ಪಂಗಡದ ಜನಾಂಗದವರ ಅಭಿವೃದ್ಧಿಗೆ ಮೀಸಲಿಟ್ಟಿರುವ 11 ಸಾವಿರ ಕೋಟಿ ರೂ. ಗಳನ್ನು ಗ್ಯಾರಂಟಿ ಯೋಜನೆಗೆ ಉಪಯೋಗಿಸಿಕೊಂಡಿರುವುದು ಮತ್ತು ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಮಗಡಗಳ ಅಭಿವೃದ್ಧಿ ನಿಗಮದ ಹಣ 187 ಕೋಟಿ ರೂಗಳನ್ನು ಭ್ರಷ್ಟಾಚಾರ ಮಾಡಿರುವುದು ಈ ಸಮಾಜಕ್ಕೆ ಮಾಡಿದ ದ್ರೋಹವಾಗಿದೆ ಎಂದು ಅಸಮಧಾನ ವ್ಯಕ್ತಪಡಿಸಿದ ಅವರು ರಾಜ್ಯದಲ್ಲಿ ಇಷ್ಟೆಲ್ಲಾ ಅನ್ಯಾಯವಾದರೂ ಶಾಸನ ಸಭೆಗಳಲ್ಲಿ ಮೀಸಲಾತಿಯಲ್ಲಿ ಜಯಗಳಿಸಿರುವ ನಮ್ಮ ಸಮಾಜದ ಶಾಸಕರು ಧ್ವನಿ ಎತ್ತುತ್ತಿಲ್ಲ ಏಕೆ ಎಂದು ಪ್ರಶ್ನಿಸಿದ ಅವರು ಈ ಎಲ್ಲಾ ಬೇಡಿಕೆಗಳನ್ನು ಶೀಘ್ರವಾಗಿ ಈಡೇರಿಸಬೇಕು ಮತ್ತು ಸರ್ಕಾದ ಗಮನ ಸೆಳೆಯಬೇಕೆಂದು ರಾಜ್ಯದಲ್ಲಿ ಮೀಸಲಾತಿಯಲ್ಲಿ ಗೆದ್ದಿರುವ ಶಾಸಕರ ಮನೆಗಳ ಮುಂದೆ ಪ್ರತಿಭಟನೆ ಮಾಡುವ ಮೂಲಕ ಶಾಸಕರ ಗಮನ ಸೆಳೆಯುವ ಉದ್ದೇಶವೇ ಹೊರತು ಶಾಸಕರ ವಿರುದ್ಧ ಅಲ್ಲ. ಆದರೆ ಕಂಪ್ಲಿಯ ಶಾಸಕರು ಮಾತ್ರ ತಮ್ಮ ನಿವಾಸಕ್ಕೆ ಬರಲಿಲ್ಲವೆಂದು ಅಸಮಾಧಾನ ವ್ಯಕ್ತ ಪಡಿಸಿದರು.
ಇದೇ ಸಂದರ್ಭದಲ್ಲಿ ಶಾಸಕರಾದ ಜೆ.ಎನ್.ಗಣೇಶ ಅವರು ಪ್ರತಿಭಟನಾಕಾರರೊಂದಿಗೆ ದೂರವಾಣಿಯಲ್ಲಿ ಮಾತನಾಡಿ ತಮ್ಮ ಮೊದಲೇ ನಿಗಧಿ ಪಡಿಸಿದ ಕಾರ್ಯಕ್ರಮಗಳಿರುವುದರಿಂದ ಅಲ್ಲಿಗೆ ಬರಲಾಗಿಲ್ಲ, ಯಾವುದೇ ದುರುದ್ದೇಶವಿಲ್ಲ, ನಮ್ಮ ಆಪ್ತರ ಕೈಯಲ್ಲಿ ಮನವಿ ಪತ್ರವನ್ನು ನೀಡಿ ನಾನು ಅದನ್ನು ನಮ್ಮ ಸಮಾಜದ ಸಚಿವರು ಹಾಗೂ ಶಾಸಕರ ಗಮನಕ್ಕೆ ತರುವ ಮೂಲಕ ಸೂಕ್ತ ನ್ಯಾಯ ಒದಗಿಸುತ್ತೇನೆ ಎಂದು ಸ್ಪಷ್ಟ ಪಡಿಸಿದರು.
ನಂತರ ಪ್ರತಿಭಟನಾಕಾರರು ಶಾಸಕರ ಆಪ್ತರಾದ ಕೆ.ಷಣ್ಮುಖ ಮತ್ತು ನಾಗರಾಜ ಅವರಿಗೆ ಮನವಿ ಪತ್ರವನ್ನು ಸಲ್ಲಿಸಿದರು.
ಈ ಸಂದರ್ಭದಲ್ಲಿ ಮುಖಂಡರಾದದೊಡ್ಡ ಯರ್ರಿಸ್ವಾಮಿ, ಟಿ.ಶ್ರೀಧರ್, ವದ್ದಟ್ಟಿ ತಿಪ್ಪೆಸ್ವಾಮಿ, ಚಮದ್ರ ಸೋಮಸಮುದ್ರ, ಪಂಪಾಪತಿ, ಉಮೇಶ್, ಮಲ್ಲಿಕಾರ್ಜುನ, ಮಂಜು, ಸೂದ್ದಪ್ಪ, ಅಂಬಣ್ಣ,ಲೋಕೇಶ್, ಪ್ರಕಾಶ ಸೇರಿದಂತೆ ಇತರರು ಇದ್ದರು.
ಶಾಸಕರ ಮನೆ ಮುಂದೆ ಪ್ರತಿಭಟನೆ ನಡೆಸುತ್ತಿದ್ದರಿಂದ ಕಂಪ್ಲಿ ಪೊಲೀಸರು ಸೂಕ್ತ ಬಂದೋಬಸ್ತ್ ಏರ್ಪಡಿಸಿದ್ದರು.

ವರದಿ : ಜಿಲಾನಸಾಬ್ ಬಡಿಗೇರ್

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ

error: Content is protected !!