ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಛತ್ರಪತಿ ಶಿವಾಜಿ ಮಹಾರಾಜರ ಜೀವನ ಪ್ರತಿಯೊಬ್ಬರಿಗೂ ಪ್ರೇರಣೆ : ಜೂಗಲ್ ಮಂಜುನಾಯಕ

ಬಳ್ಳಾರಿ / ಕಂಪ್ಲಿ: ದೇಶದಲ್ಲಿ ಹಿಂದೂ ಸಮಾಜದ ಉಳಿವಿಗಾಗಿ ಹೋರಾಟ ಮಾಡಿದ ,ಹಿಂದೂ ರಾಷ್ಟ್ರವನ್ನು ನಿರ್ಮಾಣ ಮಾಡುವಲ್ಲಿ ಶ್ರಮಿಸಿದ ಛತ್ರಪತಿ ಶಿವಾಜಿ ಮಹಾರಾಜ ಜೀವನ ಪ್ರತಿಯೊಬ್ಬರಿಗೂ ಪ್ರೇರಣೆಯಾಗಲಿ ಎಂದು ತಹಸಿಲ್ದಾರ್ ಜೂಗಲ್ ಮಂಜುನಾಯಕ ತಿಳಿಸಿದರು.
ಅವರು ಗುರುವಾರ ಪಟ್ಟಣದ ತಹಸಿಲ್ದಾರ್ ಕಚೇರಿ ಸಭಾಂಗಣದಲ್ಲಿ ತಾಲ್ಲೂಕು ಆಡಳಿತದಿಂದ ಏರ್ಪಡಿಸಿದ್ದ ಛತ್ರಪತಿ ಶಿವಾಜಿ ಮಹಾರಾಜ ಜಯಂತಿಯಲ್ಲಿ ಭಾವಚಿತ್ರಕ್ಕೆ ವಿಶೇಷ ಪೂಜೆಯನ್ನು ಸಲ್ಲಿಸಿ ಪುಷ್ಪಾರ್ಪಣೆ ಮಾಡಿ ಮಾತನಾಡಿದರು. ಶಿವಾಜಿ ಮಹಾರಾಜರು ಮರಾಠ ಸಾಮ್ರಾಜ್ಯದ ಸ್ಥಾಪಕ ಹಾಗೂ ಭಾರತದ ಶ್ರೇಷ್ಠ ಯೋಧರಲ್ಲಿ ಒಬ್ಬರಾಗಿದ್ದರು. 1630ರಲ್ಲಿ ಜನಿಸಿದ ಇವರು ಜೀಜಾಬಾಯಿ ಮತ್ತು ದಾದಾಜಿ ಕೊಂಡದೇವರಿಂದ ಶಿಕ್ಷಣ ಪಡೆದ ಇವರು ಗೆರಿಲ್ಲ ಯುದ್ದತಂತ್ರ, ಬಲವಾದ ನೌಕಾಪಡೆ ಮತ್ತು ಹಿಂದವಿ ಸ್ವರಾಜ್ಯದ ಕನಸಿನೊಂದಿಗೆ ಮೊಘಲರು ಮತ್ತು ಆದಿಲ್ ಶಾಹಿಯನ್ನು ಎದುರಿಸಿ 1674ರಲ್ಲಿ ಛತ್ರಪತಿಯಾಗಿ ಪಟ್ಟಭಿಷೇಕ ಮಾಡಿಕೊಂಡರು.
ಸಣ್ಣ ವಯಸ್ಸಿನಲ್ಲಿಯೇ ತೋರಣಕೋಟೆಯನ್ನು ವಶಪಡಿಸಿಕೊಂಡು ತಮ್ಮ ಶೌರ್ಯವನ್ನು ಪ್ರರ್ಶಿಸಿದರು. ಇವರು ಅಷ್ಟಪ್ರಧಾನ ಮಂಡಳಿಯ ಮೂಲಕ ಸುಸಜ್ಜಿತ ಆಡಳಿತವನ್ನು ನೀಡಿದರು.
ಮಹಿಳೆಯರು,ರೈತರು ಮತ್ತು ಎಲ್ಲಾ ಧರ್ಮಗಳಿಗೆ ಗೌರವವನ್ನು ನೀಡುತ್ತಿದ್ದರು. ಛತ್ರಪತಿ ಶಿವಾಜಿ ಮಹಾರಾಜರು ಕೇವಲ ಯೋಧರಲ್ಲ, ಬದಲಾಗಿ ದೂರದೃಷ್ಟಿಯ ಆಡಳಿತಗಾರರಾಗಿದ್ದರು. ಅವರ ಧೈರ್ಯಮತ್ತು ದೇಶಭಕ್ತಿ ಇಂದಿಗೂ ಪ್ರೇರಣೆಯಾಗಿದೆ ಎಂದರು.
ಕಾರ್ಯಕ್ರಮದಲ್ಲಿ ಉಪ ತಹಸಿಲ್ದಾರ್ ಬಿ.ರವೀಂದ್ರಕುಮಾರ್, ಶಿರಸ್ತೆದಾರರಾದ ಎಸ್.ಕೆ.ರಮೇಶ್, ಮಾಲತೇಶ ದೇಶಪಾಂಡೆ, ಸುರೇಶ್, ಲಕ್ಷ್ಮಣ ನಾಯಕ, ವೈಷ್ಣವಿ ಉಪ್ಪಾರ್, ರಾಧ ಸೇರಿದಂತೆ ಕಂದಾಯ ಇಲಾಖೆಯ ಸಿಬ್ಬಂದಿಗಳು ಭಾಗವಹಿಸಿದ್ದರು.

ವರದಿ : ಜಿಲಾನಸಾಬ್ ಬಡಿಗೇರ್

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ

error: Content is protected !!