ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಹನುಮನಾಳದಲ್ಲಿ ಗಬ್ಬು ನಾರುತ್ತಿದೆ ಸಾರ್ವಜನಿಕ ಮೂತ್ರಾಲಯ

ಕೊಪ್ಪಳ ಜಿಲ್ಲೆಯ ಕುಷ್ಟಗಿ ತಾಲೂಕಿನ ಹನುಮನಾಳ ಗ್ರಾಮದ ಹಳೆ ಬಸ್ ನಿಲ್ದಾಣದ ಸಮೀಪದಲ್ಲಿರುವ ಸಾರ್ವಜನಿಕ ಮೂತ್ರಾಲಯ ಗಬ್ಬು ನಾರುತ್ತಿದೆ. ಸ್ವಚ್ಛ ಮಾಡಿಸಲು ಹನಮನಾಳ ಗ್ರಾಮ ಪಂಚಾಯಿತಿಯವರು ನಿರ್ಲಕ್ಷ್ಯ ವಹಿಸಿದ್ದಾರೆ ಎಂದು ಸಾರ್ವಜನಿಕರು ಆರೋಪಿಸಿದ್ದಾರೆ.

ಸ್ವಚ್ಛತೆ ಇಲ್ಲದಿರುವುದರಿಂದ ಮೂಗು ಮುಚ್ಚಿಕೊಂಡು ಮೂತ್ರ ಮಾಡುವಂತಾಗಿದೆ. ಕಾಲು ಇಡಲು ಸಹ ಆಗುತ್ತಿಲ್ಲ. ಪ್ರಧಾನ ಮಂತ್ರಿ ನರೇಂದ್ರ ಮೋದಿಯವರ ಸ್ವಚ್ಛ ಭಾರತ ಮಿಷನ್ ಯೋಜನೆಯನ್ನು ಹನಮನಾಳ ಗ್ರಾಮ ಪಂಚಾಯಿತಿಯವರು ಪಾಲಿಸುತ್ತಿಲ್ಲ. ಈ ಹನಮನಾಳ ಗ್ರಾಮ ಪಂಚಾಯಿತಿಗೆ ರಾಜ್ಯ ಸರ್ಕಾರ ಕಳೆದ ಕೆಲ ವರ್ಷಗಳ ಹಿಂದೆ ಗಾಂಧಿ ಪುರಸ್ಕಾರ ನೀಡಿ ಗೌರವಿಸಿತ್ತು. ಆದರೆ ಈ ಹನಮನಾಳ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಗ್ರಾಮಗಳಲ್ಲಿ ಸ್ವಚ್ಛತೆ ಕಾಪಾಡುತ್ತಿಲ್ಲ ಎಂದು ಸಾರ್ವಜನಿಕರು ಆರೋಪಿಸಿದ್ದಾರೆ.
ಕೂಡಲೇ ಹನುಮನಾಳ ಗ್ರಾಮದಲ್ಲಿರುವ ಸಾರ್ವಜನಿಕ ಮೂತ್ರಾಲಯವನ್ನು ಸ್ವಚ್ಛ ಮಾಡಿಸಲು ಹನಮನಾಳ ಗ್ರಾಮ ಪಂಚಾಯಿತಿಯವರು ಮುಂದಾಗಬೇಕೆಂದು ನಿವಾಸಿಗಳ ಆಗ್ರಹವಾಗಿದೆ.

  • ಕರುನಾಡ ಕಂದ ಪತ್ರಿಕೆ
ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ

error: Content is protected !!