ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಇರಾ ನೇಮು ಪೂಜಾರಿಯವರು ಸಾಹಿತ್ಯ ಸೇವೆಗಾಗಿ ‘ಕವಿ ಕಾವ್ಯ ವಿಭೂಷಣ ಪ್ರಶಸ್ತಿ’ಗೆ ಆಯ್ಕೆ

ಕಾಸರಗೋಡು : ಇರಾ ನೇಮು ಪೂಜಾರಿಯವರು ಕವಿಯಾಗಿ, ಸಾಹಿತಿಯಾಗಿ ಮಂಗಳೂರು ಕಾರಾಗೃಹದಲ್ಲಿ ಕೈದಿಗಳಿಗೆ ಒಂದು ತಿಂಗಳು ಮೇಲ್ಪಟ್ಟು ಕನ್ನಡ ಕಲಿಕೆ ಕಾರ್ಯಕ್ರಮ, ತಾಲೂಕು ಚುಟುಕು ಸಾಹಿತ್ಯ ಸಮ್ಮೇಳನ, ಜಿಲ್ಲಾ ಸಮ್ಮೇಳನ, ರಾಜ್ಯ ಸಮ್ಮೇಳನ, ದೆಹಲಿಯಲ್ಲಿ ಕನ್ನಡ ಸಂಘದಲ್ಲಿ ಕವಿಗೋಷ್ಠಿ, ವಿವಿಧ ಜಿಲ್ಲೆಯಲ್ಲಿ ಕಾರ್ಯಕ್ರಮಗಳಲ್ಲಿ ಭಾಗವಹಿಸುವಿಕೆ, ಡೆನ್ಮಾರ್ಕ್ ದೇಶದವರೊಂದಿಗೆ ಹೆಚ್ಚಿನ ಶಿಕ್ಷಣ ಪಡೆದು, ಸುಮಾರು 12 ಕೃತಿ ರಚನೆ, ಸಾಕ್ಷರತೆಯಲ್ಲಿ ರಾಜ್ಯ ಸಂಪನ್ಮೂಲ ವ್ಯಕ್ತಿಯಾಗಿ ಸೇವೆ, ಧಾರ್ಮಿಕ ಕ್ಷೇತ್ರದಲ್ಲಿ, ಸಾಹಿತ್ಯ ಕಾರ್ಯಕ್ರಮ, ಕೃತಿ ಬಿಡುಗಡೆ ಹೀಗೆ ಕನ್ನಡದ ಸೇವೆ ಮಾಡಿರುವುದನ್ನು ಗಮನಿಸಿ ಕೇರಳ ರಾಜ್ಯ ಕನ್ನಡ ಚುಟುಕು ಸಾಹಿತ್ಯ ಪರಿಷತ್ ದಿನಾಂಕ 22 ಫೆಬ್ರುವರಿ 2026ರಂದು ಕಾಸರಗೋಡು ಕನ್ನಡ ಭವನದಲ್ಲಿ ಜರಗಲಿರುವ ಚುಟುಕು ಸಾಹಿತ್ಯ ಸಮ್ಮೇಳದಲ್ಲಿ ನಾಡೋಜ ಡಾ. ಕೃಷ್ಣಪ್ರಸಾದ್ ಕೂಡ್ಲು ಸರ್ವಧ್ಯಕ್ಷರಾಗಿರುವ ವೇದಿಕೆಯಲ್ಲಿ ‘ಕವಿ ಕಾವ್ಯ ವಿಭೂಷಣ ಪ್ರಶಸ್ತಿ’ ನೀಡಿ ಗೌರವಿಸಲಾಗುವುದೆಂದು ಕನ್ನಡ ಭವನದ ಸ್ಥಾಪಕ ಅಧ್ಯಕ್ಷರಾದ ಡಾ. ವಾಮನ್ ರಾವ್ ಬೇಕಲ್ ರವರು ತಿಳಿಸಿರುತ್ತಾರೆ.

ಇದೇ ಸಂದರ್ಭದಲ್ಲಿ 101 ಮಂದಿಯಿಂದ ಭಜನಾ ಕಾರ್ಯಕ್ರಮ, ಮೆರವಣಿಗೆ, ಉದ್ಘಾಟನೆ, ವಿಚಾರ ಗೋಷ್ಠಿ, ಕವಿಗೋಷ್ಠಿ, ಪ್ರಶಸ್ತಿ ಪ್ರದಾನ, ಯಕ್ಷಗಾನ ಮೊದಲಾದ ಕಾರ್ಯಕ್ರಮ ಜರಗಲಿದೆ.

ವರದಿ: ಕೊಡಕ್ಕಲ್ ಶಿವಪ್ರಸಾದ್.

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ

error: Content is protected !!